Sun,May19,2024
ಕನ್ನಡ / English

ಹಿಂದೂ ಕಾರ್ಯಕರ್ತನ ಹತ್ಯೆ, ಮೃತದೇಹದ ಮೆರಣಿಗೆ: ಪೊಲೀಸರಿಂದ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ | ಜನತಾ ನ್ಯೂಸ್

21 Feb 2022
2267

ಶಿವಮೊಗ್ಗ : ಮೆಗ್ಗಾನ್​ ಆಸ್ಪತ್ರೆಯಿಂದ ಹರ್ಷನ ಮನೆ ಬಳಿಗೆ ಮೃತದೇಹ ತರಲಾಗಿದ್ದು, ಅಂತಿಮ ಯಾತ್ರೆ ಮೆರವಣಿಗೆ ವೇಳೆ ಉದ್ರಿಕ್ತರ ಗುಂಪು ಬೈಕ್​ಗೆ ಬೆಂಕಿ ಹಚ್ಚಿ, ಕಾರುಗಳ ಗಾಜನ್ನು ಪುಡಿಪುಡಿ ಮಾಡಿದೆ.

ಈ ನಡುವೆ ಮೃತದೇಹವನ್ನು ಮೆರವಣಿಗೆ ಮೂಲಕ ಅಂತ್ಯ ಸಂಸ್ಕಾರ ನಡೆಸಲು ತೆಗೆದುಕೊಂಡು ಹೋಗಲಾಗಿದ್ದು, ಈ ವೇಳೆ ಭಾರೀ ಜನಸ್ತೋಮ ನೆರೆದಿದ್ದರು. ಸೆಕ್ಷನ್ 144 ನಡುವೆಯೂ ಆಸ್ಪತ್ರೆಯಿಂದ ಮನೆಗೆ ಶವಯಾತ್ರೆ ನಡೆಸುವ ವೇಳೆ ಅಹಿತಕರ ಘಟನೆಗಳು ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಬೀಸಿದ್ದಾರೆ.

ಅಗ್ನಿ ಶಾಮಕ ದಳದ ಸಿಬ್ಬಂದಿ ವಾಹನಗಳಿಗೆ ತಗುಲಿರುವ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ವಾಹನಗಳಿಗೆ ಬೆಂಕಿ ಇಡುವುದರ ಜೊತೆಗೆ ನಿರಂತರವಾಗಿ‌ ಕಲ್ಲು ತೂರಾಟ ನಡೆಸಲಾಗುತ್ತಿದ್ದು, ಪರಿಸ್ಥಿತಿ‌ ನಿಯಂತ್ರಿಸಲು ಲಾಠಿ ಚಾರ್ಜ್ ಮಾಡಲಾಗುತ್ತಿದೆ.

ಆಶ್ರುವಾಯು ಸಿಡಿಸಿ ಉದ್ರಿಕ್ತರನ್ನು ಚದುರಿಸಲು ಯತ್ನಿಸಿದ್ದಾರೆ. ಜೊತೆಗೆ 2 ಬೈಕ್‌ಗಳಿಗೆ ಹಾಗೂ ಕಾರುಗಳಿಗೆ ಬೆಂಕಿಯನ್ನು ಹಚ್ಚಿದ್ದಾರೆ. ಕಲ್ಲು ತೂರಾಟದಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.

ಕಳೆದ ರಾತ್ರಿ ಹಿಂದೂ ಸಂಘಟನೆಯ ಕಾರ್ಯಕರ್ತ 24 ವರ್ಷದ ಹರ್ಷ ಎಂಬ ಯುವನಕನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದರು. ಯುವಕನ ಹತ್ಯೆ ಹಿನ್ನೆಲೆಯಲ್ಲಿ ನಗರದಲ್ಲಿ ಎರಡು ಗುಂಪಿನ ನಡುವೆ ಕಲ್ಲು ತೂರಾಟ ಹಾಗೂ ಬೈಕ್​ಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ಈ ಹಿನ್ನೆಲೆ ಶಿವಮೊಗ್ಗ ನಗರಾದ್ಯಂತ ಸೆಕ್ಷನ್​ 144 ಜಾರಿಗೊಳಿಸಿ ಡಿಸಿ ಸೆಲ್ವಮಣಿ ಆದೇಶ ಹೊರಡಿಸಿದ್ದರು.

RELATED TOPICS:
English summary : Violence during Bajrang Dal activists funeral in Shivamogga

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...