Mon,May13,2024
ಕನ್ನಡ / English

ಉಕ್ರೇನ್​​ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು, ನಾಗರೀಕರನ್ನು ಸುರಕ್ಷಿತವಾಗಿ ಏರ್‌ ಲಿಫ್ಟ್‌ ಮಾಡಿ! | ಜನತಾ ನ್ಯೂಸ್

26 Feb 2022
2787

ಬೆಂಗಳೂರು : ಉಕ್ರೇನ್​​ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು, ನಾಗರೀಕರನ್ನು ಸುರಕ್ಷಿತವಾಗಿ ಏರ್‌ ಲಿಫ್ಟ್‌ ಮಾಡಿ ರಾಜ್ಯಕ್ಕೆ ಕರೆತರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, "ಕೇಂದ್ರ ಸರಕಾರವು ಎಲ್ಲ ರಾಜತಾಂತ್ರಿಕ ಮಾರ್ಗಗಳನ್ನು ಹುಡುಕಿ ಕನ್ನಡಿಗರನ್ನು ವಾಪಸ್‌ ಕರೆತರಬೇಕು" ಎಂದಿದ್ದಾರೆ.

ರಷ್ಯಾ ದಾಳಿಯಿಂದ ತತ್ತರಿಸಿರುವ ಉಕ್ರೇನ್ ನಲ್ಲಿ ರಾಜ್ಯದ ನೂರಾರು ವಿದ್ಯಾರ್ಥಿಗಳು ಸಿಲುಕಿರುವ ಮಾಹಿತಿಯನ್ನು ಸರಕಾರವೇ ನೀಡಿದೆ. ಆ ದೇಶದ ಕೀವ್ ನಗರ ಸೇರಿ ವಿವಿಧೆಡೆ ಕಷ್ಟದಲ್ಲಿರುವ ಕನ್ನಡಿಗರ ರಕ್ಷಣೆಗೆ ಎಲ್ಲ ತುರ್ತು ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಕರೆತರಬೇಕು.

ಶೆಲ್, ಕ್ಷಿಪಣಿ, ಬಾಂಬ್ ದಾಳಿ ಭೀತಿಯಿಂದ ವಿದ್ಯಾರ್ಥಿಗಳು ಬಂಕರ್ ಗಳಲ್ಲಿ & ಮೆಟ್ರೋ ರೈಲು ಅಂಡರ್ ಗ್ರೌಂಡ್ ನಲ್ಲಿ ಆಶ್ರಯ ಪಡೆದಿದ್ದಾರೆ. ಆ ದೃಶ್ಯಗಳು ಕಳವಳಕಾರಿ. ಸ್ಫೋಟದ ಸದ್ದು ಕೇಳಿಸಿಕೊಂಡು ಕ್ಷಣಕ್ಷಣಕ್ಕೂ ಭಯಭೀತಿಯಲ್ಲಿರುವ ಅವರೆಲ್ಲರನ್ನು ನೋಡಿದರೆ ಯುದ್ಧದ ಭೀಕರತೆ ಎಂಥದ್ದು ಎಂಬುದನ್ನು ಅರಿಯಬಹುದು.

ಅಲ್ಲಿ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದರೆ, ಇಲ್ಲಿ ಅವರ ತಂದೆ - ತಾಯಿ ಮಕ್ಕಳ ಬಗ್ಗೆ ತೀವ್ರ ಆತಂಕದಲ್ಲಿದ್ದಾರೆ. ಉಕ್ರೇನ್ ನಲ್ಲಿ ಬಾಂಬ್ ಗಳ ಮೊರೆತಕ್ಕೆ ಅವರು ಮತ್ತಷ್ಟು ಕಂಗಾಲಾಗುತ್ತಿದ್ದಾರೆ.

ನಾನು ಕೂಡ ಕನ್ನಡಿಗರ ರಕ್ಷಣೆಗೆ ನೇಮಕಗೊಂಡಿರುವ ಉಸ್ತುವಾರಿ ಅಧಿಕಾರಿ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಕೇಂದ್ರ ಸರ್ಕಾರವು ತನ್ನೆಲ್ಲಾ ರಾಜತಾಂತ್ರಿಕ ಮಾರ್ಗಗಳನ್ನು ಬಳಸಿಕೊಂಡು ಉಕ್ರೇನ್ ನಲ್ಲಿರುವ ಎಲ್ಲ ಕನ್ನಡಿಗರನ್ನೂ ಏರ್ ಲಿಫ್ಟ್ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

RELATED TOPICS:
English summary :HD Kumaraswamy: The government must take action to protect the militants trapped in Ukraine

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...