Sat,May18,2024
ಕನ್ನಡ / English

ಮುದ್ದಿನ ನಾಯಿ ಬಿಟ್ಟು ಭಾರತಕ್ಕೆ ಬರೊಲ್ಲ: ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿ | ಜನತಾ ನ್ಯೂಸ್

27 Feb 2022
2960

ಉಕ್ರೇನ್‌ : ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತದ ಮೂರನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ, ತನ್ನ ಮುದ್ದಿನ ನಾಯಿಯನ್ನು ತೊರೆದು ಬರುವುದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ.

ಪೂರ್ವ ಉಕ್ರೇನ್‌ನ ಖಾರ್ಕೀವ್ ರೇಡಿಯೋ ಎಲೆಕ್ಟ್ರಾನಿಕ್ಸ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿರುವ ರಿಷಬ್ ಕೌಶಿಕ್ ಎಂಬಾತ, ತನ್ನನ್ನು ಏರ್‌ಲಿಫ್ಟ್ ಮಾಡುವಾಗ ತನ್ನೊಂದಿಗೆ ನಾಯಿಯನ್ನೂ ಕರೆದುಕೊಂಡು ಬರಲು ಅನುಮತಿ ಪಡೆಯಲು ಎಲ್ಲ ದಾಖಲೆ ಸಲ್ಲಿಕೆಗೆ ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾನೆ.

ಕಳೆದ ಫೆಬ್ರವರಿಯಲ್ಲಿ ಖಾರ್ಕಿವ್‍ನಲ್ಲಿ ನಾಯಿಮರಿ "ಮಾಲಿಬು" ಸಿಕ್ಕಿದೆ. ಅದು ನನ್ನ ಜೊತೆಗೆ ಇದೆ. ನಾನು ವಿಮಾನಯಾನ ಮಾಡುವಾಗ ತನ್ನ ನಾಯಿಯು ತನ್ನೊಂದಿಗೆ ಬರಲು ಎಲ್ಲಾ ದಾಖಲೆಗಳು ಮತ್ತು ಅನುಮತಿಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿಕೊಂಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ನನ್ನ ಜೊತೆಗೆ ನಾಯಿಯನ್ನು ಕರೆದುಯಕೊಂಡು ಬರಲು ವಿಮಾನ ಟಿಕೆಟ್ ಕೇಳುತ್ತಿದ್ದಾರೆ. ಉಕ್ರೇನ್‍ನಲ್ಲಿ ನಾವು ಹೊರಗೆ ಹೋಗುವ ಪರಿಸ್ಥಿತಿ ಇಲ್ಲ. ವಿಮಾನ ನಿಲ್ಧಾಣವನ್ನು ಮುಚ್ಚಿದ್ದಾರೆ. ನಾನು ಹೇಗೆ ಟಿಕೆಟ್ ತೆಗೆದು ಕೊಳ್ಳಬೇಕು. ದೆಹಲಿಯಲ್ಲಿರುವ ಭಾರತೀಯ ಸರ್ಕಾರದ ಎನಿಮಲ್ ಕ್ವಾರಂಟೈನ್ ಮತ್ತು ಪ್ರಮಾಣೀಕರಣ ಸೇವೆ ಮತ್ತು ಉಕ್ರೇನ್‍ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿದೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಹೇಳುತ್ತಾ ಬೇಸರ ವ್ಯಕ್ತಪಡಿಸಿದ್ದಾರೆ.

ನನ್ನ ನಾಯಿಯನ್ನು ಬಿಡಲು ಸಾಧ್ಯವಾಗದಿದ್ದರೆ, ನಾನು ಸಹ ಉಕ್ರೇನ್ ಬಿಡುವುದಿಲ್ಲ ಎಂದು ನಾನು ನಿರ್ಧರಿಸಿದೆ. ಹಾಗೆಯೇ ಉಳಿಯುವಲ್ಲಿ ಅಪಾಯವಿದೆ ಎಂದು ನನಗೆ ತಿಳಿದಿದೆ. ಆದರೆ ನಾನು ಅದನ್ನು ತ್ಯಜಿಸಲು ಸಾಧ್ಯವಿಲ್ಲ.ನಾನು ಹೋದರೆ ಅವನನ್ನು ಯಾರು ನೋಡಿಕೊಳ್ಳುತ್ತಾರೆ. ಎಂದು ಅವರು ಕೇಳಿದರು.ಅವರು ನನ್ನ ವಿಮಾನ ಟಿಕೆಟ್ ಕೇಳುತ್ತಿದ್ದಾರೆ. ಉಕ್ರೇನಿಯನ್ ವಾಯುಪ್ರದೇಶವನ್ನು ಮುಚ್ಚಿದಾಗ ನಾನು ವಿಮಾನ ಟಿಕೆಟ್ ಅನ್ನು ಹೇಗೆ ಹೊಂದಬಹುದು? ಅವರು ಹೇಳಿದರು.

ನನ್ನ ವಿಮಾನವು ಫೆ. 27ರಂದು ನಿಗದಿಯಾಗಿದೆ. ಆದರೆ, ನಾನು ಇಲ್ಲಿಯೇ ಸಿಲುಕಿಕೊಂಡಿದ್ದೇನೆ. ಈ ನಾಯಿ ಬಾಂಬ್‌ಗಳ ಸದ್ದಿನಿಂದಾಗಿ ವಿಪರೀತ ಹೆದರಿದ್ದು, ನೋವು ಅನುಭವಿಸುತ್ತಿದೆ ಎಂದು ಹೇಳಿದ್ದಾನೆ.

ನಿಮ್ಮಿಂದ ಸಾಧ್ಯವಾದರೆ ದಯವಿಟ್ಟು ನನಗೆ ಸಹಾಯ ಮಾಡಿ. ಕೀವ್‌ನಲ್ಲಿರುವ ರಾಯಭಾರ ಕಚೇರಿ ಕೂಡ ನಮಗೆ ಸಹಾಯ ಮಾಡುತ್ತಿಲ್ಲ. ನಮಗೆ ಯಾರಿಂದಲೂ ಯಾವ ಮಾಹಿತಿಯೂ ಸಿಗುತ್ತಿಲ್ಲ ಎಂದು ಮನವಿ ಮಾಡಿದ್ದಾನೆ.

RELATED TOPICS:
English summary :Indian Student Refuses To Leave Ukraine Accusing Officers Not Allowing Him To Travel With Pet Dog

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...