Thu,May09,2024
ಕನ್ನಡ / English

ನವೀನ್ ಸಾವು: ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ | ಜನತಾ ನ್ಯೂಸ್

02 Mar 2022
2742

ಬೆಂಗಳೂರು : ನವೀನ್‌ ಸಾವು ನೀಟ್‌ ಸಾಚಾತನವನ್ನೇ ಪ್ರಶ್ನಿಸಿದೆ. ಬಡಮಕ್ಕಳ ರಕ್ತವನ್ನು ಹೀರುವ, ಶ್ರೀಮಂತರಿಗಷ್ಟೇ ಮೀಸಲಾಗಿರುವ ವೈದ್ಯ ಶಿಕ್ಷಣದ "ವ್ಯಾಪಾರೀಕರಣ" ದೇಶಕ್ಕೆ ಅಪಮಾನಕರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನೀಟ್‌ ವ್ಯವಸ್ಥೆಯಿಂದ ಬಡ ಮತ್ತು ಮಧ್ಯಮ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸು ನುಚ್ಚುನೂರು ಆಗುತ್ತಿದೆ ಎಂದು ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ವೈದ್ಯಕೀಯ ಶಿಕ್ಷಣ ಪಡೆಯಲು ವಿದೇಶಕ್ಕೆ ತೆರಳಿದ ವಿದ್ಯಾರ್ಥಿಗಳ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನೀಡಿರುವ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಕ್ರೇನ್​​ಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು. ಇದು ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ.

ಅರ್ಹತೆ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ಅನ್ಯಾಯಕ್ಕೆ ಅಂತ್ಯ ಹಾಡಬೇಕಿದೆ ಎಂದಿದ್ದಾರೆ.10ನೇ ತರಗತಿಯಲ್ಲಿ ಶೇ.96, 2ನೇ ಪಿಯುಸಿಯಲ್ಲಿ ಶೇ.97 ಅಂಕ ಗಳಿಸಿದ್ದರೂ ನವೀನ್​ಗೆ ಜಗತ್ತಿನ ಶಿಕ್ಷಣ ಕಾಶಿ ಭಾರತದಲ್ಲಿ ವೈದ್ಯ ಸೀಟು ಸಿಗಲ್ಲ.

ಗ್ರಾಮೀಣ ವಿದ್ಯಾರ್ಥಿಯೊಬ್ಬ ಇಷ್ಟು ಉತ್ತಮ ಅಂಕಗಳಿಸುವುದು ಸುಲಭವಲ್ಲ. ಆದರೂ, ಆತನಿಗೆ ನಮ್ಮ ದೇಶದಲ್ಲಿ ವೈದ್ಯ ಶಿಕ್ಷಣವನ್ನು ನಿರಾಕರಿಸಲಾಗಿದೆ. ಭಾರತದಲ್ಲಿ ನಿರಾಕರಿಸಲ್ಪಟ್ಟ ಶಿಕ್ಷಣವನ್ನು ಹುಡುಕಿಕೊಂಡು ವಿದೇಶಕ್ಕೆ ಹೋಗಿ, ಅಲ್ಲಿ ಕಲಿತು ಇನ್ನೊಬ್ಬರ ಜೀವ ಉಳಿಸಲು ನೂರುಕಾಲ ಬಾಳಿ ಬದುಕಬೇಕಿದ್ದ ನವೀನ್ ಇಂದು ಜೀವ ಕಳೆದುಕೊಂಡು ವಿಶ್ವಗುರು ಆಗಬೇಕೆಂದು ಹಾತೊರೆಯುತ್ತಿರುವ ಭಾರತದ ಆತ್ಮಸಾಕ್ಷಿ ಗೆ ಪ್ರಶ್ನೆಯಾಗಿದ್ದಾನೆ. ಇದಕ್ಕೆ ಯಾರು ಹೊಣೆ ಎಂದು ಅವರು ಪ್ರಶ್ನಿಸಿದ್ದಾರೆ.

ನೀಟ್ ಭಾರತದ ಮಧ್ಯಮ, ಬಡವರ್ಗದ ಮಕ್ಕಳ ಮೆಡಿಕಲ್ ಕನಸನ್ನು ಮರೀಚಿಕೆಯನ್ನಾಗಿಸಿದೆ. ಅದು ವಕ್ಕರಿಸಿದ ಮೇಲೆ ʼಟ್ಯೂಷನ್ ಅಂಗಡಿʼಗಳು ನಾಯಿಕೊಡೆಗಳಂತೆ ಮೇಲೆದ್ದಿವೆ. ಕೋಟಿ ಕೋಟಿ ವ್ಯಾಪಾರ ಆಗುತ್ತಿದೆ.

ಅವು ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ಪೀಕುತ್ತಿವೆ ಮತ್ತೂ ಶೇ.99ರಷ್ಟು ಕೋಚಿಂಗ್ ಪಡೆದ ವಿದ್ಯಾರ್ಥಿಗಳೇ ನೀಟ್ ಪಾಸ್ ಮಾಡುತ್ತಿದ್ದಾರೆ! ಸರಕಾರಿ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ತೇರ್ಗಡೆ ಕಷ್ಟಸಾಧ್ಯ. ಈ ದೌರ್ಬಲ್ಯವನ್ನರಿತೇ ಟ್ಯೂಷನ್ ಅಂಗಡಿ ಗಳು ಮಾರುಕಟ್ಟೆ ವಿಸ್ತರಿಸಿ ನವೀನ್ ರಂಥ ವಿದ್ಯಾರ್ಥಿಗಳ ಶವಗಳ ಮೇಲೆ ರಣಕೇಕೆ ಹಾಕುತ್ತಿವೆ ಎಂದು ಕಿಡಿಕಾರಿದ್ದಾರೆ.

RELATED TOPICS:
English summary :HD Kumaraswamy Speaks About Neet Education System

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...