Thu,May02,2024
ಕನ್ನಡ / English

ಸಿಎಂ ಬೊಮ್ಮಾಯಿಯವರ ಬಜೆಟ್ ಮಂಡನೆ: ಕಂಪ್ಲೀಟ್ ಬಜೆಟ್ ಹೈಲೈಟ್ಸ್ | ಜನತಾ ನ್ಯೂಸ್

04 Mar 2022
3406

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸದಿರು.

ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿಂದು 2022-23ನೇ ಸಾಲಿನ ಒಟ್ಟು 2,65,720 ಕೋಟಿ( ಕಳೆದ ಬಾರಿಗಿಂತ ಶೇ.7.7ರಷ್ಟು ಗಾತ್ರ ಹೆಚ್ಚಳ) ಮೊತ್ತದ ಆಯವ್ಯಯವನ್ನು ಮಂಡಿಸಿದ್ದಾರೆ.

ರಾಜ್ಯ ಸರ್ಕಾರ 2022-23ರಲ್ಲಿ 72,000 ಕೋಟಿ ಸಾಲ ಮಾಡಲು ನಿರ್ಧರಿಸಿದೆ. ಕೇಂದ್ರ ಸರ್ಕಾರದಿಂದ 3,089.36 ಕೋಟಿ ಸಾಲ ಮಾಡಲು ನಿರ್ಧರಿಸಿದರೆ, ಮುಕ್ತ ಮಾರುಕಟ್ಟೆಯಲ್ಲಿ 67,911 ಕೋಟಿ ರೂ. ಸಾಲ ಮಾಡಲು ಯೋಜಿಸಿದೆ. ಆ ಮೂಲಕ 2022-23 ಅಂತ್ಯಕ್ಕೆ ರಾಜ್ಯದ ಒಟ್ಟು ಹೊಣೆಗಾರಿಕೆ 5,18,366 ಕೋಟಿ ರೂ. ಮುಟ್ಟಲಿದೆ.

ಸರ್ಕಾರದ ಖಜಾನೆ ತುಂಬಿಸುವ ವಾಣಿಜ್ಯ ತೆರಿಗೆ ಇಲಾಖೆಗೆ 77.10 ಕೋಟಿ ರೂ., ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15 ಸಾವಿರ ಕೋಟಿ, ಅಬಕಾರಿ ಇಲಾಖೆ 29 ಸಾವಿರ ಕೋಟಿ ಹಾಗೂ ಸಾರಿಗೆ ಇಲಾಖೆಗೆ 8,007 ಕೋಟಿ ತೆರಿಗೆ ಸಂಗ್ರಹಿಸುವ ಗುರಿ ನೀಡಿದ್ದಾರೆ.

ಮಹಿಳೆಯರ ಸಬಲೀಕರಣ ಮತ್ತು ಕ್ಷೇಮಾಭಿವೃದ್ದಿಗಾಗಿ 43,188 ಕೋಟಿ, ಮಕ್ಕಳ ಅಭ್ಯುದಯಕ್ಕೆ 40944 ಕೋಟಿ, ಎಸ್‍ಸಿಎಸ್‍ಪಿ/ಟಿಪಿಎಸ್ ಯೋಜನೆಗೆ 28,330 ಕೋಟಿ, ಆರೋಗ್ಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಇತರೆ ಜನ ಕಲ್ಯಾಣ ಕಾರ್ಯಕ್ರಮಗಳಿಗೆ 6,380 ಕೋಟಿ ರೂ. ಅನುದಾನವನ್ನು ಒದಗಿಸಿದ್ದಾರೆ.

ಗ್ರಾಮೀಣ ರೈತರಿಗೆ ಆರೋಗ್ಯ ಸೇವೆ ಒದಗಿಸಲು ಪರಿಷ್ಕøತ ರೂಪದಲ್ಲಿ ಯಶಸ್ವಿ ಯೋಜನೆ ಮರುಜಾರಿ ಮಾಡಲು 300 ಕೋಟಿ, 57 ತಾಲ್ಲೂಕುಗಳಲ್ಲಿ 642 ಕೋಟಿ ವೆಚ್ಚದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯ್ ಯೋಜನೆ ಅಭಿವೃದ್ಧಿ, ಬಳ್ಳಾರಿ ಜಿಲ್ಲೆಯ ಹಗರಿ ಮತ್ತು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದ್ದಾರೆ.

ನಾಡಿನ ಅನ್ನದಾತ ರೈತರಿಗೆ ರೈತ ಶಕ್ತಿ ಎಂಬ ವಿನೂತನ ಯೋಜನೆಯನ್ನು ಘೋಷಣೆ ಮಾಡಿರುವ ಸಿಎಂ, ಕೃಷಿ ಯಂತ್ರೋಪಕರಣ ಬಳಕೆಗೆ ಪ್ರತಿ ಎಕರೆಗೆ 250 ರೂ.ಗಳಂತೆ ಡೀಸೆಲ್ ಸಹಾಯಧನಕ್ಕಾಗಿ 600 ಕೋಟಿ ರೂ. ಘೋಷಿಸಿದ್ದು, ಕೃಷಿಗೆ 33,700 ಕೋಟಿ ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ 68,478 ಕೋಟಿ , ಬೆಂಗಳೂರು ಅಭಿವೃದ್ಧಿಗೆ 8,409 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಹೆಚ್ಚುವರಿಯಾಗಿ ಒಂದು ಕೆಜಿ ರಾಗಿ ಅಥವಾ ಜೋಳ ವಿತರಣೆಗಾಗಿ 1400 ಕೋಟಿ ಹೆಚ್ಚುವರಿ ಅನುದಾನವನ್ನು ನೀಡಲಾಗಿದ್ದು, ಇದರಿಂದ ಒಟ್ಟು 4.34 ಕೋಟಿ ಫಲಾನುಭವಿಗಳು ಲಾಭ ಪಡೆಯಲಿದ್ದಾರೆ.

ಬಹುದಿನಗಳ ಬೇಡಿಕೆಯಾದ ಆಶಾ ಕಾರ್ಯಕರ್ತೆಯರು, ಗ್ರಾಮ ಸಹಾಯಕರು ಮತ್ತು ಬಿಸಿಯೂಟ ತಯಾರಕರು ಮತ್ತು ಸಹಾಯಕರಿಗೆ ತಲಾ ಒಂದು ಸಾವಿರ ರೂ. ಗೌರವಧನ ಹೆಚ್ಚಳ, ಅಂಗನವಾಡಿ ಕಾರ್ಯಕರ್ತರಿಗೆ ಸೇವಾನುಭವ ಆಧಾರದಲ್ಲಿ ಒಂದು ಸಾವಿರದಿಂದ 1500 ರೂ.ಗೆ ಗೌರವಧನ ಹೆಚ್ಚಳ, ಪೌರಕಾರ್ಮಿಕರಿಗೆ ಮಾಸಿಕ 2 ಸಾವಿರ ರೂ. ಸಂಕಷ್ಟ ಭತ್ಯೆ, ಪ್ರವಾಸಿ ಗೈಡ್‍ಗಳಿಗೆ ಮಾಸಿಕ 2 ಸಾವಿರ ರೂ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೋಧನಾ ಅವಯನ್ನು ಹೆಚ್ಚಿಸಿ ಮಾಸಿಕ ಗೌರವ ಧನವನ್ನು 11 ಸಾವಿರದಿಂದ 32 ಸಾವಿರ ರೂ.ವರೆಗೆ ಹೆಚ್ಚಳ ಮಾಡಲಾಗಿದೆ.

ಅವಿವಾಹಿತ, ವಿಚ್ಛೇತ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದ್ದ ಮಾಸಾಶನವನ್ನು 600ರಿಂದ 800 ರೂ.ಗಳಿಗೆ, ಆಯಸಿಡ್ ದಾಳಿಗೆ ಒಳಗಾದ ಸಂತ್ರಸ್ತ ಮಹಿಳೆಯರ ಮಾಸಾಶನ ಮೊತ್ತವನ್ನು 10 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ.

ನೀರಾವರಿ ಯೋಜನೆಗಳಿಗೂ ಆದ್ಯತೆ ನೀಡಿರುವ ಸಿಎಂ ಬೊಮ್ಮಾಯಿ ಅವರು, ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ 1 ಸಾವಿರ ಕೋಟಿ ಅನುದಾನವನ್ನು ನೀಡುವ ಮೂಲಕ ಕಾಂಗ್ರೆಸ್‍ಗೆ ಠಕ್ಕರ್ ನೀಡಿದ್ದಾರೆ.ಉಳಿದಂತೆ ಕೃಷ್ಣ ಮೇಲ್ದಂಡೆ ಯೋಜನೆ ಹಂತ-3ಕ್ಕೆ 5 ಸಾವಿರ ಕೋಟಿ, ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಗೆ 1 ಸಾವಿರ ಕೋಟಿ, ಭದ್ರ ಮೇಲ್ದಂಡೆ ಯೋಜನೆಗೆ 3 ಸಾವಿರ ಕೋಟಿ, ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ ಅನುದಾನವನ್ನು ನೀಡಿದ್ದಾರೆ.

50 ವರ್ಷ ಮೇಲ್ಪಟ್ಟು ಸಂಕಷ್ಟದಲ್ಲಿರುವ ಕುಸ್ತಿಪಟುಗಳಿಗೆ ಒಂದು ಸಾವಿರ ಮಾಸಾಶನ ಹೆಚ್ಚಳ, 3 ಲಕ್ಷ ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣೆ ತರಬೇತಿ, ನೇಕಾರರ ಸಮ್ಮಾನ್ ಯೋಜನೆಯಡಿ ನೊಂದಾಯಿತ ಕೈಮಗ್ಗ ನೇಕಾರರಿಗೆ 5 ಸಾವಿರ ರೂ. ಹೆಚ್ಚಳ, ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್‍ಗಳ ಮೂಲಕ ನೇಕಾರರು ಪಡೆಯುವ ಸಾಲದ ಮೇಲಿನ ಶೇ.8ರಷ್ಟು ಬಡ್ಡಿ ಸಹಾಯಧನ ಹಾಗೂ ಮಕ್ಕಳ ಶಿಕ್ಷಣಕ್ಕೆ ವಿದ್ಯಾರ್ಥಿ ಯೋಜನೆಯನ್ನು ಘೋಷಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯಗಳ ನಿಗಮಕ್ಕೆ 400 ಕೋಟಿ ಹಾಗೂ ದೇವರಾಜ ಅರಸು ಅಭಿವೃದ್ಧಿ ನಿಗಮದಡಿ ಬರುವ ಇತರ ಹಿಂದುಳಿದ ಸಮುದಾಯಗಳಿಗೆ 400 ಕೋಟಿ, ವೀರಶೈವ, ಲಿಂಗಾಯಿತ, ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ತಲಾ 100 ಕೋಟಿ, ಮರಾಠ ಅಭಿವೃದ್ಧಿ ನಿಗಮಕ್ಕೆ 50 ಕೋಟಿ, ಕ್ರಿಶ್ಚಿಯನ್, ಸಿಖ್, ಜೈನ, ಬೌದ್ಧ ಸಮುದಾಯಗಳ ಅಭಿವೃದ್ದಿಗೆ ತಲಾ 50 ಕೋಟಿ ರೂ.ಗಳನ್ನು ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ವಿನೂತನ ಮಾದರಿಯ 7 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು, ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಹಾಗೂ ಬಾಗಲಕೋಟೆಯಲ್ಲಿ ಹೊಸ ವಿಶ್ವವಿದ್ಯಾಲಯ ಸ್ಥಾಪನೆ, 30 ಸರ್ಕಾರಿ ಐಟಿಐ ಸರ್ಕಾರಿ ಕಾಲೇಜು ಮೇಲ್ದರ್ಜೆಗೆ ಏರಿಸಲಾಗುವುದು, ಗ್ರಾಮೀಣ ಜನತೆಗೆ ತಾಲ್ಲೂಕು ಮಟ್ಟದಲ್ಲಿ ಹೃದಯ ಚಿಕಿತ್ಸೆ ನೀಡಲಾಗುವುದು. ರಾಜ್ಯದಲ್ಲಿ 7 ತಾಲೂಕಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.

ರಾಜ್ಯಾದ್ಯಂತ 100 ಪಶು ಚಿಕಿತ್ಸಾಲಯಗಳು, ಹಾಲು ಉತ್ಪಾದಕರಿಗೆ ಸಾಲಸೌಲಭ್ಯ ನೀಡಲು ಕ್ಷೀರ ಸಮೃದ್ದಿ ಸಹಕಾರ ಬ್ಯಾಂಕ್ ಸ್ಥಾಪನೆ, ಗೋಶಾಲೆಗಳಲ್ಲಿ ಗೋವುಗಳ ದತ್ತು ಸ್ವೀಕಾರಕ್ಕೆ ಪುಣ್ಯಕೋಟಿ ದತ್ತು ಯೋಜನೆ, ಶಿವಮೊಗ್ಗ , ದಾವಣಗೆರೆ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಹಾಲು ಒಕ್ಕೂಟ, ಆಕಸ್ಮಿಕ ಮರಣ ಹೊಂದುವ ಕುರಿ, ಮೇಕೆ ಸಾಕಾಣಿಕೆದಾರರು/ವಲಸೆ ಕುರಿಗಾರರ ಕುಟುಂಬಕ್ಕೆ 5 ಲಕ್ಷ ರೂ. ವಿಮಾ ಸೌಲಭ್ಯ ಹಾಗೂ ಮೀನುಗಾರಿಕೆ ಹಡಗುಗಳಿಗೆ ಮತ್ಸ್ಯ ಸಿರಿ ಯೋಜನೆಯನ್ನು ಜಾರಿ ಮಾಡಿದ್ದಾರೆ.

ತಾಲ್ಲೂಕುಗಳ ಸಮಗ್ರ ಅಭಿವೃದ್ದಿ 3 ಸಾವಿರ ಕೋಟಿ, 100 ತಾಲ್ಲೂಕುಗಳಲ್ಲಿ ಆರೋಗ್ಯ ಸೇವೆ ಬಲಪಡಿಸಲು ಮತ್ತು 102 ತಾಲ್ಲೂಕುಗಳಲ್ಲಿ ಅಪೌಷ್ಠಿಕತೆ ನಿವಾರಣೆಗೆ ಕ್ರಮ, 100 ತಾಲ್ಲೂಕುಗಳಲ್ಲಿ 25 ಹಾಸಿಗೆಯ ಮಾದರಿ ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತನೆ, 750 ಕೋಟಿ ರೂ. ವೆಚ್ಚದಲ್ಲಿ 100 ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ನಿಲಯ, 10 ಕ್ರೈಸ್ಟ್ ವಸತಿ ಶಾಲೆಗಳ ನಿರ್ಮಾಣ, ಸ್ವಸಹಾಯ ಸಂಘಗಳಿಗೆ ತಲಾ 1.50 ಲಕ್ಷ ರೂ. ನೆರವು, ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲದ ವ್ಯವಸ್ಥೆ, ಮಹಿಳೆಯರ ಉತ್ಪನ್ನಗಳ ಬ್ರಾಂಡಿಂಗ್, ಪ್ಯಾಕಿಂಗ್ ಸೌಲಭ್ಯ ಒದಗಿಸುವ ಆಸ್ಮಿತೆ ಯೋಜನೆ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಮುಖ್ಯಮಂತ್ರಿಗಳ ವಿದ್ಯಾರ್ಥಿ ಮಾರ್ಗದರ್ಶಿನಿ ಯೋಜನೆಯನ್ನು ಘೋಷಿಸಲಾಗಿದೆ.

ಆರೋಗ್ಯ ಕ್ಷೇತ್ರಕ್ಕೂ ಬಂಪರ್ ಕೊಡುಗೆ ನೀಡಿರುವ ಸಿಎಂ, ಬೆಂಗಳೂರಿನ ಎಲ್ಲಾ ವಾರ್ಡ್ ಮತ್ತು ಪ್ರಮುಖ ನಗರಗಳಲ್ಲಿ ರೋಗಗಳ ತಪಾಸಣೆಗೆ 438 ನಮ್ಮ ಕ್ಲಿನಿಕಲ್‍ಗಳ ಸ್ಥಾಪನೆ, ಸಲಹೆ ನೀಡಲು 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳು, ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆ, ಬೆಳಗಾವಿಯಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ತುಮಕೂರಿನಲ್ಲಿ ಟ್ರಾಮಾಕೇರ್ ಸ್ಥಾಪನೆ, ಮುಖ್ಯಮಂತ್ರಿ ಆರೋಗ್ಯವಾಹಿನಿ ಯೋಜನೆಯಡಿ ಬೀದರ್ , ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಚಾರಿ ಕ್ಲಿನಿಕ್ ಸ್ಥಾಪನೆ ಮಾಡಲಾಗುವುದು.

ಅಪೌಷ್ಠಿಕತೆ ನಿವಾರಣೆಗಾಗಿ 94 ಕೋಟಿ ರೂ. ವೆಚ್ಚದಲ್ಲಿ ಪ್ರಾಯೋಗಿಕವಾಗಿ ರಾಜ್ಯದ 14 ಜಿಲ್ಲೆಗಳಲ್ಲಿ ಸಾರವರ್ಧಕ ಅಕ್ಕಿ ವಿತರಣೆ, ಬಾಲವಿವಾಹ ಮತ್ತು ಹೆಣ್ಣು ಮಕ್ಕಳು ಶಾಲೆ ಬಿಡುವುದನ್ನು ತಪ್ಪಿಸಲು ಸ್ಪೂರ್ತಿ ಯೋಜನೆ ಹೀಗೆ ಹತ್ತು ಹಲವು ಯೋಜನೆಗಳನ್ನು ಬೊಮ್ಮಾಯಿ ಘೋಷಿಸಿದ್ದಾರೆ. ಆಡಳಿತ ಸುಧಾರಣೆಗೆ ಒತ್ತು ನೀಡಲಾಗಿದ್ದು, ಉಪನೋಂದಣಾಕಾರಿಗಳ ಕಚೇರಿ, 287 ಕೋಟಿ ರೂ. ವೆಚ್ಚದಲ್ಲಿ ಕೃಷಿ ಜಮೀನು ಮತ್ತು ಇತರೆ ಸ್ವತ್ತುಗಳ ಡ್ರೋನ್ ಆಧಾರಿತ ಸರ್ವೆಗೆ ಕ್ರಮ, 3 ವರ್ಷದೊಳಗೆ ವಿದ್ಯುನ್ಮಾನ ಪಹಣಿ ಮತ್ತು ನಕ್ಷೆ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ನವಕರ್ನಾಟಕ ನಿರ್ಮಾಣಕ್ಕಾಗಿ ಪ್ರತಿ ವಿಭಾಗದಲ್ಲೂ ತಲಾ ಒಂದು ಯೋಜನಾಬದ್ಧ ಪರಿಸರ ಸ್ನೇಹಿ ನವನಗರ ಅಭಿವೃದ್ಧಿ, ದೊಡ್ಡ ಗಾತ್ರದ ಹೂಡಿಕೆ ಪ್ರದೇಶಗಳು ಮತ್ತು ಕೈಗಾರಿಕಾ ವಸಾಹತುಗಳ ಸ್ಥಾಪನೆ, ಕಾರ್ಯಾಚರಣೆ, ನಿಯಂತ್ರಣ ಮತ್ತು ನಿರ್ವಹಣೆಗಾಗಿ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಅನಿಯಮ ರಚನೆ, ತುಮಕೂರು ಮತ್ತು ಧಾರವಾಡ ಜಿಲ್ಲೆಗಳನ್ನು ವಿಶೇಷ ಹೂಡಿಕೆ ಪ್ರದೇಶ ಎಂದು ಘೋಷಿಸಲಾಗಿದೆ.

RELATED TOPICS:
English summary :CM Bommayi s Budget Presentation: Complete Budget Highlights

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...