Sun,May19,2024
ಕನ್ನಡ / English

ನಾಲ್ವರು ಸಹೋದ್ಯೋಗಿಗಳನ್ನು ಶೂಟ್‌ ಮಾಡಿ ಪ್ರಾಣ ತೆಗೆದು ತಾನೂ ಹತನಾದ ಬೆಳಗಾವಿಯ BSF ಯೋಧ | ಜನತಾ ನ್ಯೂಸ್

07 Mar 2022
2030

ಚಿಕ್ಕೋಡಿ : ಪಂಜಾಬ್​ನ ಅಮೃತಸರ ಜಿಲ್ಲೆಯ ಖಾಸಾದಲ್ಲಿರುವ ಬಿಎಸ್‌ಎಫ್ ಪಡೆಯ ಪ್ರಧಾನ ಕಚೇರಿಯೊಳಗೆ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಸೈನಿಕನೋರ್ವ ತನ್ನ ಕರ್ತವ್ಯದ ಗನ್​ನಿಂದ ನಾಲ್ವರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಆನಂತರ ತನ್ನ ಮೇಲೂ ಗುಂಡು ಹಾರಿಸಿಕೊಂಡು ಹತನಾದ ದುರ್ಘಟನೆ ಪಂಜಾಬ್​ನಲ್ಲಿ ನಡೆದಿದೆ.

ಸತ್ಯಪ್ಪ ಸಿದ್ದಪ್ಪ ಕಿಲಾರಗಿ (33) ಗುಂಡಿನ ದಾಳಿ ನಡೆಸಿ ತಾನೂ ಹತನಾಗಿರುವ BSF ಯೋಧ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಯೋಧ ಸತ್ಯಪ್ಪ ಕಳೆದ 13 ವರ್ಷಗಳ ಹಿಂದೆ BSF ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಈತ ಮಾನಸಿಕವಾಗಿ ಖಿನ್ನತೆ ಒಳಗಾಗಿದ್ದ ಎಂದು ಕುಟುಂಬಸ್ಥರು ಹೇಳಿದ್ದಾರೆ. ವೈಯಕ್ತಿಕ ಸಾಲ ಹಾಗೂ ಕೌಟುಂಬಿಕ ವಿಚಾರಕ್ಕೆ ಮಾನಸಿಕವಾಗಿ ಖಿನ್ನನಾಗಿದ್ದ. ಆದ್ದರಿಂದ ಈ ರೀತಿ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಹೇಳಿದ್ದಾರೆ.

6 ತಿಂಗಳ ಹಿಂದೆಯಷ್ಟೇ 1 ತಿಂಗಳ ರಜೆ ಮೇಲೆ ಬಂದಿದ್ದ ಯೋಧ, ಬ್ಯಾಂಕ್ ಒಂದರಲ್ಲಿ 10 ಲಕ್ಷ ಸಾಲ ಮಾಡಿ ತಿರಿಸಲಾಗದೆ ಮಾನಸಿಕ ಅಸ್ವಸ್ಥನಾಗಿದ್ದ ಎಂದು ತಿಳಿದುಬಂದಿದೆ. ಮಾನಸಿಕ ಅಸ್ವಸ್ಥತೆ ಕಾರಣ ರಜೆ ಮುಗಿದರೂ ಮರಳಿ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಮನೆಯವರು ಬೆಳಗಾವಿಯಲ್ಲಿ ಕೆಲದಿನ ಬಳಿಕ ಧಾರವಾಡ ಮಾನಸಿಕ ಆರೋಗ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು ಎಂದು ತಿಳಿದುಬಂದಿದೆ.

ಈ ಘಟನೆಯಲ್ಲಿ ಶೂಟ್‌ ಮಾಡಿದ ಯೋಧ ಸೇರಿದಂತೆ ಉಳಿದ ನಾಲ್ವರೂ ಮೃತಪಟ್ಟರೆ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಬಿಎಸ್‌ಎಫ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದು, ಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತಪಟ್ಟವರು ಬಿಹಾರದ ಹೆಡ್ ಕಾನ್‌ಸ್ಟೆಬಲ್‌ಗಳಾದ ರಾಮ್ ಬಿನೋದ್, ಮಹಾರಾಷ್ಟ್ರದ ಡಿಎಸ್ ತೊರಸ್ಕರ್, ಜಮ್ಮು ಮತ್ತು ಕಾಶ್ಮೀರದ ರತ್ತನ್ ಸಿಂಗ್ ಮತ್ತು ಹರಿಯಾಣದ ಪಾಣಿಪತ್‌ನ ಬಲ್ಜಿಂದರ್ ಕುಮಾರ್.

ಮೃತ ಸತ್ಯಪ್ಪ ಯೋಧನ ಪಾರ್ಥಿವ ಶರೀರದ ಬರುವಿಕೆಗಾಗಿ ಕುಟುಂಬಸ್ಥರು ಕಾದಿದ್ದಾರೆ. ಅತ್ತ ಜೀವ ಕಳೆದುಕೊಂಡಿರುವ ಉಳಿದ ನಾಲ್ವರು ಯೋಧರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

RELATED TOPICS:
English summary :BSF jawan shoots dead four colleagues, kills self

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...