Fri,May10,2024
ಕನ್ನಡ / English

ಉಕ್ರೇನ್‌ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯವೇನು? | ಜನತಾ ನ್ಯೂಸ್

07 Mar 2022
2621

ಬೆಂಗಳೂರು : ಆಪರೇಷನ್‌ ಗಂಗಾ ಹೆಸರಿನಲ್ಲಿ ಕೇಂದ್ರ ಸರ್ಕಾರ ಉಕ್ರೇನ್‌ನಿಂದ ಭಾರತದ ವಿದ್ಯಾರ್ಥಿಗಳನ್ನು ಏರ್‌ಲಿಫ್ಟ್‌ ಮಾಡಿದೆ ಎಂಬುದೇನೋ ಸರಿ. ಆದರೆ, ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಬಂದಿರುವ ಆ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯವೇನು? ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ. ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಗತಿಯೇನು? ಎಂದು ಸರಣಿ ಟ್ವೀಟ್​ ಮೂಲಕ ಕೇಳಿದ್ದಾರೆ.

ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್‌ʼಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ.. ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ.

ಪ್ರತಿ ಕಾಲೇಜು ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ. 2,65,720 ಕೋಟಿ ರೂ.ಬಜೆಟ್‌ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರ್ಕಾರವೇ ನೀಡಲಿ. ನೀಟ್‌ ಮೂಲಕ ಶೇ.50 ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎರಡೂ ಸರ್ಕಾರಗಳು ಅಂತಃಕರಣದಿಂದ ಆಲೋಚಿಸಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :HD Kumaraswamy: What is the future of medical students returning from Ukraine?

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...