Tue,May07,2024
ಕನ್ನಡ / English

ಸಾರಿಗೆ ಇಲಾಖೆ ಸಿಬ್ಬಂದಿಗಳಿಗೆ ಸಿಹಿಸುದ್ದಿ: ಸಚಿವ ಬಿ.ಶ್ರೀರಾಮುಲು | ಜನತಾ ನ್ಯೂಸ್

13 Mar 2022
2274

ಬೆಂಗಳೂರು : ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿ ನೀಡಿದ್ದು ಸಾರಿಗೆ ಇಲಾಖೆಯ ಸಿಬ್ಬಂದಿಗಳಿಗೆ ಸಂಬಳ ಒಂದು ವಾರದೊಳಗೆ ಬಾಕಿ ಸಂಬಳ ನೀಡಲಾಗುವುದು ಎಂದು ಹೇಳಿದ್ದಾರೆ.

ಮುಂದಿನ ತಿಂಗಳಿಂದ ಸಿಬ್ಬಂದಿಗೆ ನಿರಂತರವಾಗಿ ಸಂಬಳ ನೀಡಲಾಗುತ್ತದೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ 3 ಸಾವಿರ ಕೋಟಿ ಇಲಾಖೆಗೆ ನೀಡಿದ್ದಾರೆ. 3 ಸಾವಿರ ಕೋಟಿ ಸಂಬಳ ನೀಡಲು ಕೊಟ್ಟಿದ್ದಾರೆ. ಇನ್ನು ಮುಂದೆ ಚಾಲಕರ, ನಿರ್ವಾಹಕರು ಹಾಗೂ ಸಿಬ್ಬಂದಿ ಸಂಬಳಕ್ಕೆ ಕಾಯಬೇಕಿಲ್ಲ. ಅಡಮಾನ ಇಟ್ಟಿದ್ದು ವೈಯಕ್ತಿಕ ಬಳಕೆಗೆ ಅಲ್ಲ. ಸಿಬ್ಬಂದಿ ಭವಿಷ್ಯದ ನಿಧಿಗಾಗಿ ಎಂದು ಸ್ಪಷ್ಟಪಡಿಸಿದ ರಾಮುಲು, ನಮ್ಮ ಇಲಾಖೆ ದಿವಾಳಿ ಆಗಿದೆ ಅಂತ ಹೇಳುತ್ತಾರಲ್ಲ. ಇದು ಲಾಭದಾಯಕ ಮಾಡುವ ಉದ್ದೇಶ ಅಲ್ಲ ಎಂದರು.

ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹುಬ್ಬಳ್ಳಿ ಕಡೆ 16 ಎಕರೆ ಅಡಮಾನ ಇಡಲಾಗಿದೆ. ಕಲ್ಯಾಣ ಕರ್ನಾಟಕದಲ್ಲೂ ಕೆಲವು ಜಮೀನು ಅಡಮಾನ ಇಡಲಾಗಿದೆ. ಸಂಸ್ಥೆ ಜಾಗ ಅಡಮಾನ ಇಟ್ಟ ಹಣ ಸಿಬ್ಬಂದಿ ಭವಿಷ್ಯ ನಿಧಿಗೆ ನೀಡಲಾಗಿದೆ. ಕಡಿಮೆ ದರದಲ್ಲಿ ಬಡ್ಡಿ ಇದ್ದ ಕಾರಣ ಆಸ್ತಿ ಅಡಮಾನ ಇಡಲಾಗಿದೆ. ಇನ್ನೂ ಒಂದೂವರೆ ತಿಂಗಳ ಸಂಬಳ ಮಾತ್ರ ಬಾಕಿ ಇದೆ ಎಂದರು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಗರದ ಗಾರ್ಮೆಂಟ್ಸ್ ನ ಮಹಿಳಾ ನೌಕರರಿಗೆ ಬಂಪರ್ ಗಿಫ್ಟ್ ನೀಡಿದೆ. ಬಿಎಂಟಿಸಿಯಿಂದ ನಗರದ 3 ಲಕ್ಷ ಮಹಿಳಾ ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ.

ವನಿತಾ ಸಂಗಾತಿ ಯೋಜನೆ ಅಡಿಯಲ್ಲಿ ಗಾರ್ಮೆಂಟ್ಸ್ ಕಾರ್ಮಿಕರಿಗೆ ಪಾಸ್ ವಿತರಣೆ ಮಾಡಲು ಬಿಎಂಟಿಸಿ ಮುಂದಾಗಿದೆ. ಇದು ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಬಜೆಟ್ ನಲ್ಲಿ ಉಚಿತ ಬಸ್ ಪಾಸ್ ನೀಡೋದಾಗಿ ಹೇಳಿದ್ದರು. ಅಂದು ಬಜೆಟ್ ಮಂಡಿಸಿದ್ದ ಯಡಿಯೂರಪ್ಪನವರು ವನಿತಾ ಸಂಗಾತಿ ಹೆಸರಿನಲ್ಲಿ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದರು. ಈ ಮೂಲಕ ಮಹಿಳಾ ಕಾರ್ಮಿಕರ ಬದುಕಿಗೆ ನೆರವಾಗಲು ಹೊರಟಿರುವ ಸರ್ಕಾರ ಮತ್ತು ಬಿಎಂಟಿಸಿ ಮುಂದಾಗಿದೆ ಎಂದು ತಿಳಿಸಿದರು.

RELATED TOPICS:
English summary :Good news for sarige department:

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...