Thu,May02,2024
ಕನ್ನಡ / English

ಪಾವಗಡ ಬಸ್ ದುರಂತ: ಸಾರಿಗೆ ಇಲಾಖೆಯ ಕರ್ತವ್ಯಲೋಪ ಮತ್ತು ದಿವ್ಯ ನಿರ್ಲಕ್ಷ್ಯವೇ ಕಾರಣ! | JANATA NEWS

20 Mar 2022
2804

ಬೆಂಗಳೂರು : ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಖಾಸಗಿ ಬಸ್‌ ದುರಂತದಲ್ಲಿ ಅಸುನೀಗಿದವರಿಗೆ ರಾಜ್ಯ ಸರಕಾರ ಕನಿಷ್ಠ 25 ಲಕ್ಷ ರೂ.

ಪರಿಹಾರ ನೀಡಬೇಕು. 5 ಲಕ್ಷ ರೂ. ಕೊಟ್ಟು ಕೈತೊಳೆದುಕೊಳ್ಳುವುದು ಸರಿಯಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.​ಡಿ. ಕುಮಾರಸ್ವಾಮಿ ಸರಣಿ ಟ್ವೀಟ್​ ಮಾಡಿದ್ದಾರೆ.

ತುಮಕೂರಿನ ಪಾವಗಡದಲ್ಲಿ ನಡೆದ ಬಸ್​ ದುರಂತಕ್ಕೆ ಸಾರಿಗೆ ಇಲಾಖೆಯ ಕರ್ತವ್ಯಲೋಪ ಮತ್ತು ದಿವ್ಯ ನಿರ್ಲಕ್ಷ್ಯವೇ ಕಾರಣ ಎಂದು ಕುಮಾರಸ್ವಾಮಿ ಆರೋಪಿಸಿದ್ದರೆ. ಇನ್ನು ಅಪಘಾತದಲ್ಲಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಎಷ್ಟೋ ಕನಸ್ಸುಗಳನ್ನು ಕಟ್ಟಿಕೊಂಡಿದ್ದ ವಿದ್ಯಾರ್ಥಿಗಳ ಜೀವ ಬಲಿಯಾಗಿವೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ದೊಡ್ಡ ಮೊತ್ತದ ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಆಗ್ರಹಿಸಿದ್ದಾರೆ

ಅಪಘಾತದಲ್ಲಿ ಗಾಯಗೊಂಡವರನ್ನು ತುಮಕೂರು ಆಸ್ಪತ್ರೆ ಹಾಗೂ ಗಂಭೀರ ಸ್ಥಿತಿಯಲ್ಲಿರೋರನ್ನು ಬೆಂಗಳೂರು ಆಸ್ಪತ್ರೆ ಗಳಿಗೆ ದಾಖಲಿಸಲಾಗಿದೆ. ಅಲ್ಲಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಗಳು ಸಿಗುತ್ತಿಲ್ಲ ಎಂಬ ವರದಿಗಳು ಬರ್ತಿವೆ. ಈ ಬಗ್ಗೆ ಸರ್ಕಾರ ಕೂಡಲೇ ಗಮನ ಹರಿಸಬೇಕು, ಓರ್ವ ಉಸ್ತುವಾರಿ ಅಧಿಕಾರಿ ನಿಯೋಜಿಸಬೇಕು ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಎಲ್ಲರಿಗೂ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ಕೊಡಿಸಬೇಕು

ಗಾಯಾಳುಗಳನ್ನು ಬೆಂಗಳೂರು, ತುಮಕೂರು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಿಗೆ ಅಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ವರದಿಗಳು ಬೆಳಗ್ಗೆಯಿಂದಲೂ ಮಾಧ್ಯಮಗಳಲ್ಲಿ ಬರುತ್ತಿವೆ. ಸರಕಾರ ಕೂಡಲೇ ತುರ್ತು ಗಮನ ಹರಿಸಿ, ಓರ್ವ ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಬೇಕು. ಎಲ್ಲರಿಗೂ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ಕೊಡಿಸಬೇಕು ಎಂದು ಹೆಚ್.​ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಬಸ್ಸಿನೊಳಗೆ ಪ್ರಯಾಣಿಕರು ಕಿಕ್ಕಿರಿದು ತುಂಬಿದ್ದರು. ಟಾಪ್‌ ತುಂಬಾ ಜನ ಕೂತಿದ್ದರು. ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಜನ ಹೆಚ್ಚಿದ್ದರೂ ಈ ಮಾರ್ಗದಲ್ಲಿ ಬಸ್‌ಗಳ ಸಂಚಾರ ಸರಿಯಾಗಿಲ್ಲ, ಏಕೆ? ಅಧಿಕಾರಿಗಳ ಉಪೇಕ್ಷೆ ಖಂಡನೀಯ ಎಂದು ಹೆಚ್.​ಡಿ. ಕುಮಾರಸ್ವಾಮಿ ಟ್ವೀಟ್​ ಮೂಲಕ ತಿಳಿಸಿದ್ದಾರೆ.

RELATED TOPICS:
English summary :25 lakh compensation for families of victims of Pavagada bus disaster

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...