Thu,May09,2024
ಕನ್ನಡ / English

ಉನ್ನತ ಶಿಕ್ಷಣ, ರಾಜಕಾರಣಿಗಳು, ಶ್ರೀಮಂತರಿಗೆ ದುಡ್ಡು ಸಂಗ್ರಹಿಸುವ ಹುಂಡಿಯಾಗಿದೆ | JANATA NEWS

21 Mar 2022
3250

ಬೆಂಗಳೂರು : ರಾಜಕಾರಣಿಗಳು, ಶ್ರೀಮಂತರಿಗೆ ಉನ್ನತ ಶಿಕ್ಷಣವು ದುಡ್ಡು ಸಂಗ್ರಹ ಮಾಡುವ ಹುಂಡಿಯಾಗಿದೆ. ಇದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಉಕ್ರೈನ್ ನಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿ ನವೀನ್ ನ ಮೃತ ದೇಹ ಇಂದು ಭಾರತಕ್ಕೆ ಬಂದಿದ್ದು ಈ ಕುರಿತು ಟ್ವೀಟ್ ಮಾಡಿ ಸರಕಾರದ ವಿರುದ್ಧ ಕಿಡಿಕಾರಿದ ಅವರು, ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಒತ್ತೆ ಇಟ್ಟ ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಸಗಿದ ಪಾಪಕ್ಕೆ ಮುಗ್ಧ ವಿದ್ಯಾರ್ಥಿ ನವೀನ್ ಬಲಿ ಆಗಿದ್ದಾನೆ ಎಂದರು.

ದೂರದ ಉಕ್ರೇನ್ ದೇಶದಲ್ಲಿ ಜೀವ ಚೆಲ್ಲಿ ಹುಟ್ಟಿದೂರಿನಲ್ಲಿ ನಿಶ್ಚಲವಾಗಿ ಮಲಗಿದ್ದ ನವೀನ್ ಭಾರತದ ಆತ್ಮಸಾಕ್ಷಿಗೆ ಎದುರಾಗಿರುವ ದೊಡ್ಡ ಪ್ರಶ್ನೆ. ವಿದ್ಯೆ ಹೆಸರಿನಲ್ಲಿ ದಂಧೆ ನಡೆಸುವ ದುರಾಸೆಗೂ ಒಂದು ಸವಾಲು. ಹಾಗಾದರೆ, ಇನ್ನೆಷ್ಟು ನವೀನರು ಬಲಿಯಾಗಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.

ಖಾಸಗಿ ಕಾಲೇಜುಗಳಲ್ಲಿ ವೈದ್ಯ ಶಿಕ್ಷಣ ದುಬಾರಿ ಎಂದು ಸ್ವತಃ ಮುಖ್ಯಮಂತ್ರಿಯೇ ಒಪ್ಪಿದ್ದಾರೆ. ಹಾಗಾದರೆ, ಅಂತಹ ಕಾಲೇಜುಗಳಿಗೆ ಶಕ್ತಿ ತುಂಬುತ್ತಿರುವುದು ಏಕೆ?. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕನ್ನಡದ ಮಕ್ಕಳಿಗೆ ಸೀಟು ಸಿಗುತ್ತಿಲ್ಲ. ಟ್ಯೂಷನ್​​ಗಳಿಗೆ ಲಕ್ಷ ಲಕ್ಷ ಕಟ್ಟುವುದು ಬಡ, ಮಧ್ಯಮ ವರ್ಗದ ಮಕ್ಕಳಿಗೆ ಸಾಧ್ಯವಿಲ್ಲ ಎಂದಿದ್ದಾರೆ.

ಮೂತಿಗೆ ತುಪ್ಪ ಸವರುವಂತೆ ವೈದ್ಯ ಶಿಕ್ಷಣದ ಶುಲ್ಕವನ್ನು ಅಲ್ಪಸ್ವಲ್ಪ ಕಡಿಮೆ ಮಾಡಿ ಸದ್ಯಕ್ಕೆ ಪಾರಾಗುವುದಲ್ಲ. ನವೀನ್ ಸಾವಿನಿಂದ ಪಾಠ ಕಲಿತು ಅದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಹಾಗೂ ನೀಟ್‌ನಿಂದ ಹೊರ ಬರಲು ವಿಧಾನ ಮಂಡಲದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

RELATED TOPICS:
English summary :HD Kumaraswamy: Higher education .. It is a hoard of wealthy politicians

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...