Thu,May02,2024
ಕನ್ನಡ / English

ಬಿರ್ಭೂಮ್ ಹಿಂಸಾಚಾರದ ಚರ್ಚೆಗೆ ಬಿಜೆಪಿ ಆಗ್ರಹ : ವಿಧಾನಸಭೆಯಲ್ಲಿ ಟಿಎಂಸಿ, ಬಿಜೆಪಿ ಶಾಸಕರ ನಡುವೆ ಕುಸ್ತಿ | JANATA NEWS

28 Mar 2022
3251

ಕೊಲ್ಕೊತ್ತಾ : ಬಿರ್ಭೂಮ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹತ್ಯಾಕಾಂಡದ ಕುರಿತು ವಿರೋಧ ಪಕ್ಷದ ಬಿಜೆಪಿ ಶಾಸಕರು ಗದ್ದಲವನ್ನು ಸೃಷ್ಟಿಸಿದ ಬೆನ್ನಲ್ಲೇ ಪ್ರತಿಪಕ್ಷಗಳ ಶಾಸಕರೊಂದಿಗೆ ಆಡಳಿತರೂಡ ತೃಣಮೂಲ ಕಾಂಗ್ರೆಸ್(ಟಿಎಂಸಿ) ಶಾಸಕರು ಕೈಕೈ ಮಿಲಾಯಿಸಿದ ಪರಿಣಾಮ, ಪಶ್ಚಿಮ ಬಂಗಾಳ ವಿಧಾನಸಭೆ ಸೋಮವಾರ ಅಶಿಸ್ತಿನ ದೃಶ್ಯಗಳಿಗೆ ಸಾಕ್ಷಿಯಾಯಿತು.

ಬಿರ್ಭೂಮ್ ಹಿಂಸಾಚಾರದ ಕುರಿತು ಸದನದ ನೆಲದ ಮೇಲೆ ಟಿಎಂಸಿ ಮತ್ತು ಬಿಜೆಪಿ ಶಾಸಕರ ನಡುವೆ ಘರ್ಷಣೆ ನಡೆದ ನಂತರ, ಸುವೇಂದು ಅಧಿಕಾರಿ ಸೇರಿದಂತೆ 5 ಬಿಜೆಪಿ ಶಾಸಕರನ್ನು ಮುಂದಿನ ಸೂಚನೆ ಬರುವವರೆಗೆ ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದೆ.

ಕೊನೆಯ ದಿನದಲ್ಲಾದರೂ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಚರ್ಚೆ ನಡೆಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿದವು, ಸರ್ಕಾರ ನಿರಾಕರಿಸಿತು. ನಮ್ಮ 8-10 ಶಾಸಕರೊಂದಿಗೆ ಘರ್ಷಣೆಗೆ ಅವರು ಸಿವಿಲ್ ಡ್ರೆಸ್‌ನಲ್ಲಿರುವ ಕೋಲ್ಕತ್ತಾ ಪೊಲೀಸ್ ಸಿಬ್ಬಂದಿಯನ್ನು ಕರೆತಂದರು, ಎಂದು ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಗಂಭೀರ ಆರೋಪ ಮಾಡಿದ್ದಾರೆ.

ವರದಿಗಳ ಪ್ರಕಾರ, ಇತ್ತೀಚಿನ ಬಿರ್ಭೂಮ್ ಹಿಂಸಾಚಾರದ ಬಗ್ಗೆ ಆಡಳಿತಾರೂಢ ಟಿಎಂಸಿ ಶಾಸಕರು ಮತ್ತು ಪ್ರಮುಖ ವಿರೋಧ ಪಕ್ಷ ಬಿಜೆಪಿ ಸದನದಲ್ಲಿ ಪರಸ್ಪರ ಮಾತಿನ ಚಕಮಕಿ ನಡೆಸಿದ ನಂತರ ವಿಧಾನಸಭೆಯ ಒಳಗೆ ಕಲಾಪಕ್ಕೆ ಅಡ್ಡಿಯಾಯಿತು.

ಆಡಳಿತಾರೂಢ ಟಿಎಂಸಿ ಶಾಸಕರು ವಿರೋಧ ಪಕ್ಷದ ಬಿಜೆಪಿ ಶಾಸಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿಡಿಯೋವನ್ನು ಹಂಚಿಕೊಂಡಿರುವ ಅಮಿತ್ ಮಾಳವಿಯಾ ಅವರು, ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಸಂಪೂರ್ಣ ಕೋಲಾಹಲ ಉಂಟಾಗಿದೆ. ಬಂಗಾಳದ ಗವರ್ನರ್ ನಂತರ, ಟಿಎಂಸಿ ಶಾಸಕರು ಈಗ ಮುಖ್ಯ ಸಚೇತಕ ಮನೋಜ್ ಟಿಗ್ಗಾ ಸೇರಿದಂತೆ ಬಿಜೆಪಿ ಶಾಸಕರ ಮೇಲೆ ಹಲ್ಲೆ ನಡೆಸಿದ್ದಾರೆ, ಏಕೆಂದರೆ ಅವರು ರಾಮ್‌ಪುರಹತ್ ಹತ್ಯಾಕಾಂಡದ ಕುರಿತು ಸದನದ ನೆಲದ ಮೇಲೆ ಚರ್ಚೆಗೆ ಒತ್ತಾಯಿಸಿದರು. ಮಮತಾ ಬ್ಯಾನರ್ಜಿ ಏನನ್ನು ಮುಚ್ಚಿಡಲು ಪ್ರಯತ್ನಿಸುತ್ತಿದ್ದಾರೆ?, ಎಂದು ಪ್ರಶ್ನಿಸಿದ್ದಾರೆ.

ಎಏನ್ಐ ನೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಅವರು, ಅನಾರುಲ್ ಹುಸೇನ್ ರಚಿಸಿದ ರಾಮ್‌ಪುರಹಟ್ ಘಟನೆಯ ಅದೇ ಪರಿಸ್ಥಿತಿಯನ್ನು ಟಿಎಂಸಿ ಶಾಸಕರು ಮತ್ತು ಅವರ ಪೊಲೀಸರಿಂದ ನೋಡಿದ್ದೇವೆ. ಇದರ ವಿರುದ್ಧ ಇಂದು ಮಧ್ಯಾಹ್ನ 2 ಗಂಟೆಗೆ ಮೆರವಣಿಗೆ ಮಾಡುತ್ತೇವೆ. ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸ್ಪೀಕರ್‌ಗೆ ನನ್ನ ದೂರನ್ನು ಬರೆಯುತ್ತೇನೆ. ಕೇಂದ್ರದ ಮಧ್ಯಸ್ಥಿಕೆ ಅಗತ್ಯ, ಎಂದು ಹೇಳಿದ್ದಾರೆ.

RELATED TOPICS:
English summary : BJP urges debate on Birbhum violence: Wrestling between TMC, BJP MLAs in assembly

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...