Sun,May19,2024
ಕನ್ನಡ / English

ಕಾಶ್ಮೀರಿ ಶಿಕ್ಷಕರ ಕಾಯಂ ಗೊಳಿಸಿದ ಸುಳ್ಳು ಹೇಳಿಕೆ : ದೆಹಲಿ ಕೇಜ್ರಿವಾಲ್ ಸರ್ಕಾರದ ವಿರುದ್ಧ ಶಿಕ್ಷಕರ ಸಂಘದ ವಾಗ್ದಾಳಿ | JANATA NEWS

29 Mar 2022
2463

ನವದೆಹಲಿ : ಕಾಶ್ಮೀರಿ ಪಂಡಿತ್ ಅಧ್ಯಾಪಕರ ಸಂಘವು, ಶಿಕ್ಷಕರ ಉದ್ಯೋಗ ಖಾಯಂ ಗೊಳಿಸಿದೆ, ಎಂಬ ಸುಳ್ಳು ಹೇಳಿಕೆ ನೀಡಿದ ದೆಹಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಕಾಶ್ಮೀರಿ ವಲಸಿಗ ಶಿಕ್ಷಕರ ಸೇವೆಯನ್ನು ಕಾಯಂಗೊಳಿಸಿದ್ದೇವೆ ಎಂಬ ದೆಹಲಿ ಸರ್ಕಾರದ ಸುಳ್ಳು ಹೇಳಿಕೆಯನ್ನು ಬಲವಾಗಿ ಖಂಡಿಸಿದ ಕಾಶ್ಮೀರಿ ಪಂಡಿತ್ ಅಧ್ಯಾಪಕರ ಮಂಡಳಿಯು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ, ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರವು ಅವರ ಸೇವೆಯನ್ನು ಕಾಯಂಗೊಳಿಸುವಿಕೆಯನ್ನು ಕೊನೆಯವರೆಗೂ ವಿರೋಧಿಸಲು ಪ್ರಯತ್ನಿಸಿದೆ, ಎಂದು ಉಲ್ಲೇಖಿಸಿದೆ.

ಕಾಶ್ಮೀರಿ ವಲಸೆ ಶಿಕ್ಷಕರ ಸೇವೆಗಳನ್ನು ಕ್ರಮಬದ್ಧಗೊಳಿಸಿದ ಕೀರ್ತಿಯನ್ನು ತಮ್ಮ ಹೆಗಲಿಗೆ ಏರಿಸಿಕೊಳ್ಳಲು ಪ್ರಯತ್ನಿಸಿದ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರವನ್ನು ಕಾಶ್ಮೀರಿ ಪಂಡಿತ್ ಶಿಕ್ಷಕರ ಮಂಡಳಿ ಸೋಮವಾರ ತೀವ್ರವಾಗಿ ಟೀಕಿಸಿದೆ.

"ಕಾಶ್ಮೀರಿ ವಲಸೆ ಶಿಕ್ಷಕರ ಸೇವೆಗಳನ್ನು ಕ್ರಮಬದ್ಧಗೊಳಿಸಿದ್ದು ತಾವೇ ಎಂದು ದೆಹಲಿ ಸರ್ಕಾರ ನೀಡಿರುವ ಹೇಳಿಕೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ" ಎಂದು ಸರ್ಕಾರಿ ಶಾಲಾ ಶಿಕ್ಷಕರ ಸಂಘ (ವಲಸಿಗ) ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ.

ಹೇಳಿಕೆಯಲ್ಲಿ, ಶಿಕ್ಷಕರ ಸಂಸ್ಥೆಯು ದೆಹಲಿಯಲ್ಲಿ ಅವರ ಸೇವೆಗಳನ್ನು ಕ್ರಮಬದ್ಧಗೊಳಿಸಲು ಕಾರಣವಾದ ಘಟನೆಗಳ ದಿನಾಂಕವನ್ನು ಪಟ್ಟಿ ಮಾಡಿದೆ.

ಶಿಕ್ಷಕರ ಸಂಘವು ಅವರು ಜೂನ್ 6, 2010 ರಂದು ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ ಎಂದು ಹೇಳಿಕೊಂಡರು. ದೆಹಲಿ ಹೈಕೋರ್ಟ್‌ ನ ಏಕ ಪೀಠವು ಐದು ವರ್ಷಗಳ ನಂತರ 2015 ರಲ್ಲಿ ಅವರ ಸೇವೆಗಳನ್ನು ಕ್ರಮಬದ್ಧಗೊಳಿಸುವ ಮೂಲಕ ಅವರ ಪರವಾಗಿ ತೀರ್ಪು ನೀಡಿತು.

ಅದೇ ತೀರ್ಪನ್ನು ದೆಹಲಿ ಸರ್ಕಾರವು ಹೈಕೋರ್ಟ್‌ನ ದ್ವಿಸದಸ್ಯ ಪೀಠದಲ್ಲಿ ಪ್ರಶ್ನಿಸಿದೆ. ಮೇ 21, 2018 ರಂದು ಪೀಠವು ಕಾಶ್ಮೀರಿ ಪಂಡಿತರ ಸೇವೆಗಳನ್ನು ಕಾಯಂಗೊಳಿಸುವಿಕೆಯನ್ನು ದೆಹಲಿ ಸರ್ಕಾರಕ್ಕೆ ನಿರ್ದೇಶಿಸಿದ ತೀರ್ಪು ನೀಡಿತು, ಎಂದು ಶಿಕ್ಷಕರ ಮಂಡಳಿಯು ಹೇಳಿಕೊಂಡಿದೆ.

ಹೈಕೋರ್ಟ್ ಆದೇಶವು ಅವರ ಪರವಾಗಿ ತೀರ್ಪು ನೀಡಿದ ನಂತರ, ದೆಹಲಿ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು 2018 ರಲ್ಲಿ ದೆಹಲಿ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತು, ಅದರ ನಂತರ ಬೇರೆ ದಾರಿಯಿಲ್ಲದೇ, 2019 ರಲ್ಲಿ ಕಾಶ್ಮೀರಿ ಪಂಡಿತ್ ಶಿಕ್ಷಕರ ಸೇವೆಗಳನ್ನು ಕ್ರಮಬದ್ಧಗೊಳಿಸಲಾಯಿತು.

“ಕಾಶ್ಮೀರಿ ಪಂಡಿತ್ ಶಿಕ್ಷಕರ ಸೇವೆಗಳನ್ನು ಕ್ರಮಬದ್ಧಗೊಳಿಸಲು ದೆಹಲಿ ಸರ್ಕಾರವು ಎಂದಿಗೂ ಆಸಕ್ತಿ ಹೊಂದಿಲ್ಲ ಎಂಬುದನ್ನು ಮೇಲಿನ ಘಟನೆಗಳು ಸ್ಪಷ್ಟವಾಗಿ ಸೂಚಿಸುತ್ತವೆ. ವಾಸ್ತವವಾಗಿ, ದೆಹಲಿ ಸರ್ಕಾರವು ಕಾಯಂಗೊಳಿಸುವಿಕೆಯನ್ನು ಕೊನೆಯವರೆಗೂ ವಿರೋಧಿಸಿತು, ”ಎಂದು ಹೇಳಿಕೆ ತಿಳಿಸಿದೆ.

RELATED TOPICS:
English summary : Kashmiri Teachers Permanent False Statement : Teachers Body Strongly Slams Delhi Kejriwal Govt Claims

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...