Mon,May20,2024
ಕನ್ನಡ / English

ಇಂದು ಸಿಎಂ ದೆಹಲಿ ಪ್ರವಾಸ: ಸಂಪುಟ ವಿಸ್ತರಣೆಗೆ ಗರಿಗೆದರಿದ ಚಟುವಟಿಕೆ | JANATA NEWS

05 Apr 2022
2703

ಬೆಂಗಳೂರು : ಇಂದಿನಿಂದ ಎರಡು ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.

ಪ್ರವಾಸದ ವೇಳಾಪಟ್ಟಿ ಪ್ರಕಾರ, ಮಂಗಳವಾರ ಮಧ್ಯಾಹ್ನ 1.55ರ ವಿಮಾನದಲ್ಲಿ ದೆಹಲಿಗೆ ತೆರಳಿ ರಾತ್ರಿ 7ಕ್ಕೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡಲಿದ್ದಾರೆ. ಕರ್ನಾಟಕ ಭವನದಲ್ಲಿ ತಂಗುವರು. ಬುಧವಾರ ಕೇಂದ್ರದ ಹಲವು ಸಚಿವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಸಂಬಂಧ ರ್ಚಚಿಸಲಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮೇಕೆದಾಟು, ಮಹಾದಾಯಿ, ಕೃಷ್ಣ ಮೇಲ್ದಂಡೆ, ಭದ್ರಾ ಮೇಲ್ದಂಡೆ ಮತ್ತು ಇತರ ನೀರಾವರಿ ಯೋಜನೆಗಳ ಬಗ್ಗೆ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಚರ್ಚಿಸಿ.. ಅಡೆತಡೆ, ಆಡಳಿತಾತ್ಮಕ ಮತ್ತು ತಾಂತ್ರಿಕ ಕೆಲಸಗಳ ಬಗ್ಗೆ ಮಾತುಕತೆ ನಡೆಸಿ ನಿರ್ದಿಷ್ಟ ಸಮಯದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

ನಾಳೆ ಬೆಳಗ್ಗೆ ಜಿಎಸ್​​ಟಿ ವಿಚಾರ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗುತ್ತೇನೆ. ನಂತರ ಸಂಗೊಳ್ಳಿ ರಾಯಣ್ಣ ಶಾಲೆಯನ್ನು ಸೈನಿಕ ಶಾಲೆಯನ್ನಾಗಿ ಮಾಡಲು ಒಪ್ಪಿಗೆ ಸಿಕ್ಕಿದೆ. ಅದರ ಬಗ್ಗೆ ಕೆಲವು ವಿಚಾರಗಳನ್ನು ಮಾತನಾಡಬೇಕಿದೆ. ಹಾಗಾಗಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗುತ್ತೇನೆ.

ಇಂಧನ ಸಚಿವರನ್ನು ಭೇಟಿಯಾಗುವ ಪ್ರಯತ್ನ ನಡೆಸುತ್ತಿದ್ದೇನೆ. ಇದಕ್ಕೆ ಇನ್ನೂ ಸಮಯಾವಕಾಶ ನಿಗದಿಯಾಗಿಲ್ಲ. ಅವಕಾಶ ಸಿಕ್ಕಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಾಗುತ್ತದೆ ಎಂದರು.

ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ದೆಹಲಿ ಬೇಟಿ ವೇಳೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೆಲವು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ.

ಏಪ್ರಿಲ್ ಎರಡನೇ ವಾರದಲ್ಲಿ ಸಚಿವ ಸಂಪುಟ ಪುನಾಚನೆಯಾಗಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಮತ್ತು ನಿಗಮ, ಮಂಡಳಿಗಳ ನೇಮಕಾತಿಗೆ ಒಪ್ಪಿಗೆ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

RELATED TOPICS:
English summary :Todays CM Delhi Tour: Accelerated Activity for Volume Expansion

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...