Sat,May18,2024
ಕನ್ನಡ / English

ಮೈಕ್ ಬಳಸುವ ಮಸೀದಿ, ಮಂದಿರಗಳಿಗೆ ನೋಟಿಸ್, ಹೈಕೋರ್ಟ್ ಆದೇಶದಂತೆ ಕಟ್ಟುನಿಟ್ಟಿನ ಕ್ರಮ | JANATA NEWS

05 Apr 2022
2440

ಬೆಂಗಳೂರು : ದೇವಸ್ಥಾನ ಮತ್ತು ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ಡೆಸಿಬಲ್ ಪ್ರಕಾರ ಎಲ್ಲರೂ ನಿಯಮ ಪಾಲನೆ ಮಾಡಬೇಕು.

ಮಂದಿರ, ಮಸೀದಿ, ಚರ್ಚ್‌ಗಳಿಗೆ ಈ ನೋಟಿಸ್ ನೀಡಲಾಗಿದ್ದು, ಶಬ್ಧಮಾಲಿನ್ಯ ರೂಲ್ಸ್‌ ಸರಿಯಾಗಿ ಪಾಲಿಸುವಂತೆ ತಾಕೀತು ಮಾಡಲಾಗಿದೆ.

ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ವಿವಾದ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ 6 ತಿಂಗಳ ಹಿಂದೆಯೇ ಹೈಕೋರ್ಟ್ ಆದೇಶ ನೀಡಿದೆ. ಹೈಕೋರ್ಟ್ ನಿರ್ದೇಶನದಂತೆ ಪೊಲೀಸರು ಕೆಲಸ ಮಾಡುತ್ತಾ ಇದ್ದಾರೆ.

ಮಸೀದಿ, ಮಂದಿರ, ಕಾರ್ಖಾನೆ, ಪಬ್ ಸೇರಿ ಎಲ್ಲರಿಗೂ ನೋಟಿಸ್ ನೀಡಲಾಗಿದೆ. ಧಾರ್ಮಿಕ ಮುಖಂಡರ ಜತೆ ಈ ಬಗ್ಗೆ ಸಭೆ ನಡೆಸಲಾಗಿದೆ. ಅವರಿಗೂ ಮಾರ್ಗದರ್ಶನ ನೀಡಲಾಗಿತ್ತು. ಅದರಂತೆ ಧರ್ಮಗುರುಗಳು ನಡೆದುಕೊಂಡಿದ್ದಾರೆ. ಹೈಕೋರ್ಟ್ ಆದೇಶವನ್ನು ಪಾಲನೆ ಮಾಡಲೇಬೇಕು. ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಶಿಕ್ಷೆ ಆಗುತ್ತೆ. ಆದೇಶ ಉಲ್ಲಂಘಿಸಿದ ಕಡೆ ಮೈಕ್​ಗಳನ್ನ ಜಪ್ತಿ ಮಾಡಿದ್ದೇವೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದ್ದಾರೆ.

ಸ್ಥಳೀಯ ಮಟ್ಟದಲ್ಲಿ ಡಿಸಿಪಿ ಹಾಗೂ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಧ್ವನಿವರ್ಧಕ ಅಳವಡಿಸಿರುವ ಸ್ಥಳಗಳಿಗೆ ತೆರಳಿ ನೋಟಿಸ್ ನೀಡುವ ಕೆಲಸ ಮಾಡಿದ್ದೇವೆ. ಆಡಳಿತ ಮಂಡಳಿಯವರಿಗೂ ಅರಿವು ಮೂಡಿಸಿದ್ದೇವೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಮ್ಮವರಿಗೆ ಟ್ರೈನಿಂಗ್ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದರು.

ಹೈಕೋರ್ಟ್‌ ಆದೇಶ ಏನಿದೆ ಅದನ್ನು ಪಾಲಿಸಬೇಕು. ಕಾನೂನು ಉಲ್ಲಂಘನೆ ಮಾಡಿದವರಿಗೆ ಶಿಕ್ಷೆ ಆಗುತ್ತೆ. ಇನ್ನು ಬೆಂಗಳೂರು ನಗರದಲ್ಲಿ ಮಾತ್ರ ಈಗಾಗಲೇ 40ಕ್ಕೂ ಹೆಚ್ಚು ಕೇಸ್‌ ದಾಖಲು ಮಾಡಲಾಗಿದೆ. ಬೆಂಗಳೂರಿನ ಹಲವೆಡೆ ಮೈಕ್‌ಗಳನ್ನ ಜಪ್ತಿ ಮಾಡಲಾಗಿದೆ. ಎಲ್ಲರೂ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.

RELATED TOPICS:
English summary :The mosque used by Mike, the notice to the mosques, strict action as ordered by the High Court

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...