Thu,May02,2024
ಕನ್ನಡ / English

ನೇಕಾರ, ಮೀನುಗಾರರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ! | JANATA NEWS

11 Apr 2022
3030

ಉಡುಪಿ : ಈ ವರ್ಷ ನೇಕಾರರ ಹಾಗೂ ಮೀನುಗಾರರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿ ಜಿಲ್ಲೆ ಉಚ್ಚಿಲ ಕ್ಷೇತ್ರದ ಮಹಾಲಕ್ಷ್ಮೀ ದೇವಸ್ಥಾನದ ಆವರಣದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮೀನುಗಾರಿಕೆಯನ್ನು ಲಾಭದಾಯಕವನ್ನಾಗಿಸಲು ಕೇಂದ್ರ ಸರ್ಕಾರದ ಯೋಜನೆಯೊಂದಿಗೆ ಸಂಯೋಜಿಸಿ 100 ಆಳ ಸಮುದ್ರ ಮೀನುಗರಿಕಾ ದೋಣಿಗಳನ್ನು ಒದಗಿಸಲಾಗುವುದು. ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮೀನುಗಾರರಿಗೆ 5000 ಮನೆಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ಮೀನುಗಾರ ವೃತ್ತಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ಪ್ರತಿ ಗ್ರಾಮಪಂಚಾಯತಿ ಕೆರೆಗಳಲ್ಲಿ ಮೀನುಗಾರರಿಗೆ ಕೆರೆಗಳನ್ನು ಮೀಸಲಿಟ್ಟು, ಮೀನಿನ ಕೃಷಿಗೆ ಪ್ರೋತ್ಸಾಹ ನೀಡಲಾಗುವುದು. ಕರಾವಳಿ ಜಿಲ್ಲೆಗಳ ಮೀನುಗಾರರಿಗೆ 10 ತಿಂಗಳಿಗೆ ಬೇಕಾಗುವ ಡೀಸೆಲ್ ವೆಚ್ಚವನ್ನು ಸಂಪೂರ್ಣವಾಗಿ ಸಬ್ಸಿಡಿ ನೀಡಲಾಗುವುದು ಎಂದರು

ಸ್ತ್ರೀಶಕ್ತಿ ಸಂಘಗಳ ಸಾಲಗಳ ಮರುಪಾವತಿ ಶೇ.95 ರಷ್ಟಿದೆ. ಇದು ಮಹಿಳೆಯರ ಪರಿಶ್ರಮ ಹಾಗೂ ಪ್ರಮಾಣಿಕತೆಯನ್ನು ತೋರಿಸುತ್ತದೆ. ರಾಜ್ಯದ ಆರ್ಥಿಕತೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. 500 ಕೋಟಿ ರೂ. ವೆಚ್ಚದಲ್ಲಿ ಆಯಂಕರ್ ಬ್ಯಾಂಕ್ ಜೋಡಿಸಿ ಸ್ತ್ರೀ ಶಕ್ತಿ ಸಂಘಗಳಿಗೆ 1.5 ಲಕ್ಷ ರೂ.ಗಳಷ್ಟು ಸಾಲ ಸೌಲಭ್ಯ ನೀಡಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ 100 ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸಲಾಗುವುದು. ರಾಜ್ಯದ ಆಯ್ದ ಜಿಲ್ಲೆಗಳಲ್ಲಿ 1000 ಹಾಸ್ಟೆಲ್‍ಗಳ ಕ್ಲಸ್ಟರ್ ನಿರ್ಮಿಸಲಾಗುವುದು. ಮೊಗವೀರ ಸಮುದಾಯದ ಮಕ್ಕಳಿಗೆ ವಸತಿ ನಿಲಯ ಸೌಲಭ್ಯವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪೂರೈಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮೊಗವೀರರ ಮಹಾಸಂಘ ಕೋರಿರುವಂತೆ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ 5 ಕೋಟಿ ರೂ.ಗಳನ್ನು ಮುಜರಾಯಿ ಇಲಾಖೆ ಮೂಲಕ ನೀಡಲಾಗುವುದು ಎಂದರು.

RELATED TOPICS:
English summary :Farmer Vidyani Nidhi Scheme to be extended to Fishermens Children

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...