Mon,May06,2024
ಕನ್ನಡ / English

ಇಂತಹ ನೂರು ಜನರು ಮಸಿ ಬಳಿಯುವ ಪ್ರಯತ್ನ ಮಾಡಿದ್ರು ಅದಕ್ಕೆ ನಾನು ಹೆದರುವುದಿಲ್ಲ. | JANATA NEWS

02 May 2022
3100

ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ತಮ್ಮ ಸಹೋದರ ಭಾಗಿಯಾಗಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಸಚಿವ ಸಿಎನ್ ಅಶ್ವಥ್ ನಾರಾಯಣ್ ಅವರು, ಅಶ್ವತ್ಥ ನಾರಾಯಣ್ ಮೇಲೆ ಇಂತಹ ನೂರು ಜನರು ಮಸಿ ಬಳಿಯುವ ಪ್ರಯತ್ನ ಮಾಡಿದ್ರು ಅದಕ್ಕೆ ನಾನು ಹೆದರುವುದಿಲ್ಲ ಎಂದಿದ್ದಾರೆ.

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ತಮ್ಮ ಕುಟುಂಬದ ಹೆಸರು ಕೇಳಿಬಂದ ನಂತರ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅಶ್ವಥ್ ನಾರಾಯಣ್ ಅವರು, ಗಾಳಿಯಲ್ಲಿ ಗುಂಡು ಹಾರಿಸುವ KPCC ಅಧ್ಯಕ್ಷರ ಕೀಳುಮಟ್ಟದ ರಾಜಕಾರಣ ಇಂದು ನಿನ್ನೆಯದಲ್ಲ. ನಿರಾಧಾರ ಆರೋಪ ಮಾಡುವ ಬದಲು ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.

ಅಕ್ರಮದಲ್ಲಿ ಭಾಗಿಯಾದವರಿಗೆ ಶಿಕ್ಷೆ ಆಗುತ್ತೆ, ಉಪ್ಪು ತಿಂದವರು ನೀರು ಕುಡಿಯಲೇಬೇಕು ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಸಚಿವ ಅಶ್ವತ್ಥ್​ ನಾರಾಯಣ್​ ಹೇಳಿದ್ದಾರೆ. ಆಧಾರ ಸಹಿತವಾಗಿ ಒಂದೇ ಒಂದು ಹೇಳಿಕೆಯನ್ನು ಅವ್ರು ಕೊಟ್ಟಿಲ್ಲ, ಅವನು ಯಾವ ವ್ಯಕ್ತಿ ಎಂಬುದೇ ನನಗೆ ಗೊತ್ತಿಲ್ಲ. ನನ್ನ ರಾಜಕೀಯ ಜೀವನ ಪಾರದರ್ಶಕವಾಗಿದೆ ಎಂದು ಸಚಿವ ಆಶ್ವತ್ಥ ನಾರಾಯಣ ಹೇಳಿದ್ದಾರೆ.

ರಾಮನಗರ ಜಿಲ್ಲೆ ಇವರನ್ನು ಸಂಪೂರ್ಣವಾಗಿ ಯಾರು ಒಪ್ಪಿಲ್ಲ, ಅವರು ಬರೀ ಕನಕಪುರಕ್ಕೆ ಮಾತ್ರ ಸೀಮಿತ ಆಗಿದ್ದಾರೆ. ಆಧಾರ ಇಲ್ಲದೇ ಯಾರಾದರೂ ಆರೋಪ ಮಾಡ್ತಾರಾ ಎಂದು ಪ್ರಶ್ನೆ ಮಾಡಿದ್ರು. ಒಬ್ಬ ಮುಖ್ಯಮಂತ್ರಿ ಆಗ್ತಿದ್ದಾರೆ ಅಂತ ಅವ್ರೇ ಅಂದುಕೊಂಡು ಆರೋಪ ಮಾಡ್ತಾರೆ ಅಂದರೆ, ನನ್ನ ಕಂಡರೆ ಅವರಿಗೆ ಎಷ್ಟು ಭಯ ಇರಬಹುದು ಎಂದು ನೀವೇ ನೋಡಿ ಎಂದಿದ್ದಾರೆ.

ನನ್ನಂತ ವ್ಯಕ್ತಿ ಮೇಲೆ ಆರೋಪ ಮಾಡ್ತಾರೆ ಅಂದರೆ ಇವರನ್ನು ಸುಮ್ಮನೆ ಬಿಡೋಕೆ ಆಗುತ್ತಾ?, ಡಿ.ಕೆ ಶಿವಕುಮಾರ್​ ಬಂಡವಾಳವನ್ನು ಒಂದೊಂದಾಗಿಯೇ ಬಿಚ್ಚಿಡುತ್ತೇನೆ ಎಂದಿದ್ದಾರೆ..

ಡಿಕೆಶಿ ಒಬ್ಬ ಕಡು ಭ್ರಷ್ಟ ಅಂತಾ ಇದೇ ಉಗ್ರಪ್ಪ ಹೇಳಿದ್ದ. ಇವನಿಗೆ ನಾಚಿಕೆ ಆಗೋಲ್ವಾ?, ನಮ್ಮ ಕುಟುಂಬ ಏನು ಡಿಕೆಶಿ ಕುಟುಂಬ ತರ ಅಲ್ಲ, ಕೆಲ ರಾಜಕಾರಣಿಗಳು ಎಲ್ಲವನ್ನೂ ಬಿಟ್ಟಿರ್ತಾರೆ. ಅಶ್ವತ್ಥ ನಾರಾಯಣ್ ಮೇಲೆ ಇಂತಹ ನೂರು ಜನರು ಮಸಿ ಬಳಿಯುವ ಪ್ರಯತ್ನ ಮಾಡಿದ್ರು ಅದಕ್ಕೆ ನಾನು ಹೆದರುವುದಿಲ್ಲ ಎಂದಿದ್ದಾರೆ.

RELATED TOPICS:
English summary : I dont care if a hundred people tried to soot.

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...