Sat,Apr27,2024
ಕನ್ನಡ / English

ರಾಜ್ಯದಲ್ಲಿ ಎಂಇಎಸ್‌ ನಿಷೇಧಿಸುವಂತೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಒತ್ತಾಯ | JANATA NEWS

02 May 2022
2781

ಬೆಂಗಳೂರು : ರಾಜ್ಯದಲ್ಲಿ ಎಂಇಎಸ್ ಪುಂಡರ ಹಾವಳಿ ಹೆಚ್ಚಾಗಿದೆ. ಈ ನೆಲದಲ್ಲೇ ಇದ್ದು, ಈ ನೆಲದ ವಿರುದ್ಧವೇ ಬಾಲ ಬಿಚ್ಚುತ್ತಿದ್ದಾರೆ. ಸರ್ಕಾರ ಈ ಕೂಡಲೇ ಎಂಇಎಸ್ ನಿಷೇಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮೂಲಕ ಹೇಳಿಕೆ ನೀಡಿರುವ ಅವರು “ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು (ಎಂಇಎಸ್‌) ನಿಷೇಧಿಸಿ ಎಂದು ಇಡೀ ಕರ್ನಾಟಕವೇ ಒಕ್ಕೊರಲಿನಿಂದ ಆಗ್ರಹ ಮಾಡಿತ್ತು. ಬಿಜೆಪಿ ಸರಕಾರ ಅಸಡ್ಡೆ ತೋರಿದ ಪರಿಣಾಮ ಪುಂಡರು ಮತ್ತೆ ಬಾಲ ಬಿಚ್ಚಿದ್ದಾರೆ. ಭಾಷೆ-ಭಾಷೆಗಳ ಜನರ ನಡುವೆ ಬೆಂಕಿ ಹಚ್ಚುವ ಇವರು ಭಯೋತ್ಪಾದಕರು” ಎಂದು ಆರೋಪಿಸಿದ್ದಾರೆ.

ಮಹಾರಾಷ್ಟ್ರ ದಿನದ ನೆಪದಲ್ಲಿ ಎಂಇಎಸ್‌ ಪುಂಡರು ನಾಡದ್ರೋಹ ಎಸಗಿದ್ದಾರೆ. ಕರ್ನಾಟಕದಲ್ಲೇ ಇದ್ದು ಕನ್ನಡ ನೆಲದ ವಿರುದ್ಧ ವಿಧ್ವಂಸಕ ಕೃತ್ಯ ಎಸಗಿರುವ ಶುಭಂ ಶೆಳಕೆ ಎಂಬ ಧೂರ್ತನು ಫೇಸ್‌ಬುಕ್‌ನಲ್ಲಿ ರಾಜ್ಯವನ್ನು ಒಡೆಯುವ ಸಂದೇಶ ಪೋಸ್ಟ್‌ ಮಾಡಿದ್ದಾನೆ. ವಿಡಿಯೋ ಮೂಲಕ ಕನ್ನಡಿಗರನ್ನು ಕೆಣಕಿದ್ದಾನೆ.

ಕರ್ನಾಟಕದ ಭೂಪಟವನ್ನು ತಿರುಚಿ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ‌ ನಾಡದ್ರೋಹಿ ಗ್ರಾಫಿಕ್ ಮಾಡಿ ಅದನ್ನು ಪೋಸ್ಟ್‌ ಮಾಡಿರುವ ಶೆಳಕೆಗೆ ಚಳಿ ಬಿಡಿಸಬೇಕಿದೆ ಎಂದು ಕಿಡಿಕಾರಿದ್ದಾರೆ

ಸಂಯುಕ್ತ ಮಹಾರಾಷ್ಟ್ರಕ್ಕೆ ಬೆಳಗಾವಿ ರಕ್ತ ಹೋರಾಟದ ಮುನ್ನುಡಿ ಬರೆದಿದೆ" ಎಂದು ಉದ್ರೇಕಕಾರಿ ಬರಹ ಬರೆದ ಅವನ ವಿರುದ್ಧ ಭಯೋತ್ಪಾದಕ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಬೇಕು. ಬೆಳಗಾವಿ ಗಲಾಟೆಯಲ್ಲಿ ಜೈಲು ಸೇರಿದ್ದ ಶುಭಂ ಶೆಳಕೆ, ಈಗ ರಾಜಾರೋಷವಾಗಿ ಓಡಾಡಿಕೊಂಡಿದ್ದಾನೆ ಎಂದರೆ ಏನರ್ಥ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಕನ್ನಡಿಗರ ಸರಕಾರ ಇದೆಯಾ? ಅಥವಾ ಮಹಾರಾಷ್ಟ್ರದ ಬಾಲಂಗೋಚಿ ಆಡಳಿತ ಉಂಟಾ? ತಲೆಯ ಮೇಲೆ ಕೇಸರಿ ಪೇಟ, ಭುಜದ ಮೇಲೆ ಕೇಸರಿಶಾಲು ಧರಿಸಿ ಪೋಸು ಕೊಡುವ ಎಂಇಎಸ್ ಪುಂಡರ ಮೇಲೆ ಪ್ರಕರಣ ದಾಖಲಿಸಲು ಬಿಜೆಪಿ ಸರಕಾರದ ಮನಸ್ಸು ಒಪ್ಪುತ್ತಿಲ್ಲವಾ? ಸ್ಪಷ್ಟಪಡಿಸಲಿ.

ಬಿಜೆಪಿ ಸರಕಾರಕ್ಕೆ ಇರುವುದು ಒಂದೇ ಆಯ್ಕೆ. ಎಂಇಎಸ್ ಅನ್ನು ಕೂಡಲೇ ನಿಷೇಧಿಸಬೇಕು ಹಾಗೂ ಕಿಡಿಗೇಡಿ ಶೆಳಖೆಯನ್ನು ಬಂಧಿಸಿ ರಾಜ್ಯದಿಂದ ಹೊರಹಾಕಬೇಕು. ಇಲ್ಲವಾದರೆ ʼಬಿಜೆಪಿಯನ್ನು ಮಹಾರಾಷ್ಟ್ರ ಏಕೀಕರಣ ಸಮಿತಿಯ ಬಾಲʼ ಎನ್ನದೇ ವಿಧಿ ಇಲ್ಲ. ʼರಾಜ್ಯವಿರೋಧಿ ರಾಷ್ಟ್ರೀಯವಾದʼವನ್ನು ಕನ್ನಡಿಗರು ಎಂದೂ ಸಹಿಸುವುದಿಲ್ಲ ಎನ್ನುವುದನ್ನು ಬಿಜೆಪಿ ನೆನಪಿನಲ್ಲಿ ಇಟ್ಟುಕೊಂಡರೆ ಒಳ್ಳೆಯದು ಎಂದು ಎಚ್ಚರಿಕೆ ನೀಡಿದ್ದಾರೆ.

RELATED TOPICS:
English summary :Hd Kumaraswamy: insists on banning MES in the state

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ನ್ಯೂಸ್ MORE NEWS...