Sun,May05,2024
ಕನ್ನಡ / English

₹2.35 ಕೋಟಿ ಲೂಟಿಗೆ ಭೋವಿ ಅಭಿವೃದ್ಧಿ ನಿಗಮದಲ್ಲಿ ಯತ್ನ ಆರೋಪ | JANATA NEWS

04 May 2022
4002

ಬೆಂಗಳೂರು : ನಕಲಿ ಸಹಿ ಮಾಡಿ ಸರ್ಕಾರಿ ಹಣ ಮಂಜೂರಾತಿಗೆ ಯತ್ನಿಸಿ ಕೆಎಎಸ್ ಅಧಿಕಾರಿಗಳಿಗೆ ಬೆದರಿಸಿದ್ದ ಆರೋಪದಡಿ ಭೋವಿ ಅಭಿವೃದ್ಧಿ ನಿಗಮ ನಿರ್ದೇಶಕ ರವಿಕುಮಾರ್ ವಿರುದ್ಧ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಭೋವಿ ಅಭಿವೃದ್ಧಿ ನಿಗಮದ ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ಸಹಿಯನ್ನ ನಕಲು ಮಾಡಿ 2.35 ಕೋಟಿ ಲೂಟಿ ಮಾಡಲು ಪ್ಲಾನ್ ಮಾಡಿರುವ ಆರೋಪ ರವಿಕುಮಾರ್ ಮೇಲೆ ಇದೆ. ಹೀಗಾಗಿ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಐಪಿಸಿ 420 ಅಡಿಯಲ್ಲಿ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಹಾಗೂ ಪ್ರಧಾನ ವ್ಯವಸ್ಥಾಪಕ ಡಾ. ಬಿ.ಕೆ ನಾಗರಾಜಪ್ಪ ದೂರು ದಾಖಲಿಸಿದ್ದಾರೆ. ದಾಖಲಾಗುತ್ತಿದ್ದಂತೆ ರವಿಕುಮಾರ್ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಸರ್ಕಾರದ ಉದ್ಯಮಶೀಲತಾ ಯೋಜನೆಯಡಿ ಸಾಲಸೌಲಭ್ಯ ಕೋರಿ ಭೋವಿ ನಿಗಮಕ್ಕೆ ಸಾಕಷ್ಟು ಅರ್ಜಿಗಳು ಬಂದಿದ್ದವು. ಈ ಪೈಕಿ ನಕಲಿ ಜಾತಿ ಪತ್ರ ಹಾಗೂ ಅಂಕಪಟ್ಟಿ ಸಲ್ಲಿಸಿದ್ದ ಹಲವು ಅರ್ಜಿಗಳು ತಿರಸ್ಕೃತವಾಗಿದ್ದವು. ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಕಲಬುರಗಿ, ವಿಜಯಪುರ, ಚಿಕ್ಕಬಳ್ಳಾಪುರ, ಬಳ್ಳಾರಿ ಸೇರಿ ವಿವಿಧ‌ ಜಿಲ್ಲೆಗಳಿಂದ ಬಂದಿದ್ದ ಅರ್ಜಿಗಳ ಪೈಕಿ‌ 60 ಮಂದಿ‌ ಫಲಾಪೇಕ್ಷಿಗಳ ಅರ್ಜಿಗಳಿಗೆ ವ್ಯವಸ್ಥಾಪಕಿ ನಿರ್ದೇಶಕಿ ಲೀಲಾವತಿ ಹಾಗೂ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ಅವರ ಸಹಿಗಳನ್ನ ಫೋರ್ಜರಿ ಮಾಡಿ ಮಂಜೂರಾತಿಗೆ ಸಲ್ಲಿಸಿದ್ದ ಎನ್ನಲಾಗ್ತಿದೆ.

ಕಳೆದ ಮಾರ್ಚ್​ನಲ್ಲಿ ನಿಗಮಕ್ಕೆ ಸೇರಿದ್ದ ಐಸಿಐಸಿಐ ಬ್ಯಾಂಕ್​ನ ಚೆಕ್​ಗಳು ಕಳುವಾಗಿದ್ದವು. ಹೀಗಾಗಿ ಐಸಿಐಸಿಐ ಬ್ಯಾಂಕ್​ಗೆ ಭೋವಿ ಅಭಿವೃದ್ಧಿ ನಿಗಮ ದೂರು ನೀಡಿತ್ತು. ಇತ್ತ ಕಳುವಾಗಿದ್ದ ಚೆಕ್ ಬಳಸಿ ರಾಯಚೂರು ಜಿಲ್ಲೆಗೆ 52 ಲಕ್ಷ ರೂಪಾಯಿ ಹಣವನ್ನ ನಿರ್ದೇಶಕ ರವಿಕುಮಾರ್ ಜಮಾ ಮಾಡಿದ್ದರಂತೆ. 52 ಲಕ್ಷ ಅಕ್ರಮವಾಗಿ ಜಮಾ ಮಾಡಿರುವುದಲ್ಲದೇ 60 ಅಕ್ರಮ ಫಲಾಪೇಕ್ಷಿಗಳ ಹೆಸರಲ್ಲಿ ಒಂದು ಕೋಟಿ 83 ಲಕ್ಷ ಹಣ ಮಂಜೂರಾತಿಗೆ ಸಹಿ ಫೊರ್ಜರಿ ಮಾಡಿದ್ದರು.

ಇತ್ತೀಚೆಗೆ ನಡೆದ ಭೋವಿ ಅಭಿವೃದ್ದಿ ನಿಗಮ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ರವಿಕುಮಾರ್ ಅಕ್ರಮ ಬೆಳಕಿಗೆ ಬಂದಿತ್ತು. ರವಿಕುಮಾರ್ ಅಕ್ರಮದ ಬಗ್ಗೆ ಪ್ರಶ್ನಿಸಲು ಮುಂದಾದ ಕೆ.ಎ.ಎಸ್ ಅಧಿಕಾರಿಗಳಿಗೆ ರವಿ ಧಮ್ಕಿ‌ ಹಾಕಿದ್ದ ಎನ್ನಲಾಗ್ತಿದೆ.

RELATED TOPICS:
English summary :Bhovi Development Corporation accused of attempted robbery about ₹2.35 crore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...