Thu,May02,2024
ಕನ್ನಡ / English

ಮೇ 5 ರಿಂದ 20ರ ವರೆಗೆ ಟ್ರಾನ್ಸ್ ಫಾರ್ಮರ್ ನಿರ್ವಹಣಾ ಅಭಿಯಾನ | JANATA NEWS

04 May 2022
4124

ಬೆಂಗಳೂರು : ರಾಜ್ಯಾದ್ಯಂತ ಮೇ 5 ರಿಂದ 20 ರವರೆಗೆ ಟ್ರಾನ್ಸ್‌ಫಾರ್ಮರ್‌ ನಿರ್ವಹಣಾ ಅಭಿಯಾನ ನಡೆಸಲು ಇಂಧನ ಇಲಾಖೆ ನಿರ್ಧರಿಸಿದೆ.

ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಾನ್ಸ್ ಫಾರ್ಮರ್ ಸಂಬಂಧಿತ ಅವಘಡ ತಪ್ಪಿಸುವುದಕ್ಕಾಗಿ ರಾಜ್ಯಾದ್ಯಂತ ಮೇ 5 ರಿಂದ 20 ರ ವರೆಗೆ ಟ್ರಾನ್ಸಫಾರ್ಮರ್ ನಿರ್ವಹಣಾ ಅಭಿಯಾನ ನಡೆಸಲು ಇಂಧನ ಇಲಾಖೆ ನಿರ್ಧರಿಸಿದೆ.

ಕಳೆದ ಒಂದು ತಿಂಗಳಲ್ಲಿ ನಡೆದ ಟ್ರಾನ್ಸ್ ಫಾರ್ಮರ್ ದುರಂತಗಳ ಹಿನ್ನೆಲೆಯಲ್ಲಿ ಈ ಅಭಿಯಾನ ನಡೆಸಲು ತೀರ್ಮಾನಿಸಲಾಗಿದ್ದು, ಎಲ್ಲ ಹಂತದ ಅಧಿಕಾರಿಗಳಿಗೂ ಈ ಅಭಿಯಾನದಲ್ಲಿ ಭಾಗವಹಿಸುವಂತೆ ಇಂಧನ ಸಚಿವ ವಿ.ಸುನಿಲ್ ಕುಮಾರ್ ನಿರ್ದೇಶನ ನೀಡಿದ್ದಾರೆ.

ರಾಜ್ಯದಲ್ಲಿ 15 ವರ್ಷಕ್ಕಿಂತ ಹಳೆಯ ವಿದ್ಯುತ್​ ಪರಿವರ್ತಕಗಳು ಸಾಕಷ್ಟು ಪ್ರಮಾಣದಲ್ಲಿವೆ. ಮಳೆಗಾಲದಲ್ಲಿ ಅವುಗಳ ನಿರ್ವಹಣಾ ಸಮಸ್ಯೆ ಉಂಟಾಗುತ್ತಿದೆ. ಸಿಡಿಲು, ಇತ್ಯಾದಿ ಕಾರಣಗಳಿಂದ ಪರಿವರ್ತಕಗಳ ಹಾನಿ ಸಾಧ್ಯತೆ ಇದೆ. ಜೊತೆಗೆ ಅಧಿಕ ಲೋಡ್​​ನಿಂದ ಟ್ರಾನ್ಸ್​ಫಾರ್ಮರ್​ಗೆ ಹಾನಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲು ಅಭಿಯಾನ ನಡೆಸಲಾಗುತ್ತಿದೆ.

ಅಭಿಯಾನದಲ್ಲಿ ಎಲ್ಲ ಹಂತದ ಅಧಿಕಾರಿಗಳೂ ಭಾಗಿಯಾಗಬೇಕು. ಪ್ರತಿ ದಿನ ಪರಿಶೀಲನೆ ನಡೆಸಿದ ಟ್ರಾನ್ಸ್ ಫಾರ್ಮರ್ ಗಳ ವಿವರ, ಅವುಗಳಲ್ಲಿ ಕಂಡು ಬಂದ ನ್ಯೂನ್ಯತೆ, ಯಾವ ಕಾರಣಕ್ಕಾಗಿ ತೊಂದರೆ ಕಾಣಿಸಿಕೊಂಡಿದೆ ಎಂಬ ವಿವರವನ್ನು ಕೇಂದ್ರ ಕಚೇರಿಗೆ ಪ್ರತಿ ದಿನ ಕಳುಹಿಸಿಕೊಡುವಂತೆ ಸೂಚನೆ ನೀಡಲಾಗಿದೆ.

ಪ್ರತಿ ವರ್ಷವೂ ಈ ರೀತಿ ಅಭಿಯಾನ ನಡೆಸುವುದರಿಂದ ಟ್ರಾನ್ಸ್ ಫಾರ್ಮರ್ ಗಳ ಕ್ಷಮತೆ ಹೆಚ್ಚಲಿದೆ. ಟ್ರಾನ್ಸ್ ಫಾರ್ಮರ್ ಗಳ ರಿಪೇರಿಗೆ ಇಂಧನ ಇಲಾಖೆ ಪ್ರತಿವರ್ಷ 150 ಕೋಟಿ ರೂ. ವೆಚ್ಚ ಮಾಡುತ್ತದೆ.

ನಿರ್ವಹಣಾ ಕೆಲಸವನ್ನು ಕಾಲ ಕಾಲಕ್ಕೆ ನಡೆಸಿದರೆ ರಿಪೇರಿ ವೆಚ್ಚ ತಗ್ಗಿಸುವುದಕ್ಕೆ ಸಾಧ್ಯವಿದೆ. ಜತೆಗೆ ಎಲ್ಲಿ ಹೊಸ ಟ್ರಾನ್ಸ್ ಫಾರ್ಮರ್ ಗಳ ತುರ್ತು ಅಗತ್ಯವಿದೆ ಎಂಬುದನ್ನೂ ಈ ಅಭಿಯಾನದ ಮೂಲಕ ತಿಳಿದುಕೊಳ್ಳುವುದಕ್ಜೆ ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹದಿನೈದು ದಿನಗಳ‌ ಕಾಲ ಅಭಿಯಾನ ನಡೆಸಲು ಸೂಚನೆ ನೀಡಲಾಗಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ್ದಾರೆ.

RELATED TOPICS:
English summary :Transformer Management Campaign from May 5 to 20

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...