Sun,May05,2024
ಕನ್ನಡ / English

ಗುಜರಾತ್‌ನಲ್ಲಿ ನಡೆಸಿದ ಚುನಾವಣಾ ಪ್ರಚಾರಕ್ಕಾಗಿ : ಪಂಜಾಬನ ಎಎಪಿ ಸರ್ಕಾರದಿಂದ ರೂ.45 ಲಕ್ಷ ಖರ್ಚು | JANATA NEWS

08 May 2022
2786

ಚಂಡೀಗಢ : ಆಮ್ ಆದ್ಮಿ ಪಕ್ಷದ(ಎಎಪಿ) ಪಂಜಾಬ್ ಸರ್ಕಾರವು ಏಪ್ರಿಲ್ 1-3 ರಂದು ಗುಜರಾತ್‌ನಲ್ಲಿ ನಡೆದ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪ್ರಚಾರಕ್ಕಾಗಿ ರೂ.45 ಲಕ್ಷ ಬಿಲ್ ಪಾವತಿಸಬೇಕಾಗಿದೆ, ಎಂದು ವರದಿಯಾಗಿದೆ.

ಮಾರ್ಚ್‌ನಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಪಂಜಾಬ್‌ನ ಎಎಪಿ ಸಿಎಂ ಭಗವಂತ್ ಮಾನ್ ಮತ್ತು ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ - ಗುಜರಾತ್ ರಾಜ್ಯದಲ್ಲಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲು ಹೋಗಿದ್ದರು, ಏಕೆಂದರೆ ಈ ವರ್ಷ ಡಿಸೆಂಬರ್‌ನಲ್ಲಿ ರಾಜ್ಯದಲ್ಲಿ ಚುನಾವಣೆಗಳು ನಡೆಯಲಿವೆ.

ಪಕ್ಷಗಳ ಚುನಾವಣಾ ಪ್ರಚಾರಕ್ಕಾಗಿ ಮಾನ್ ಅವರ ಭೇಟಿಗಾಗಿ ಬಾಡಿಗೆಗೆಂದು ತೆಗೆದುಕೊಂಡ ವಿಮಾನಕ್ಕಾಗಿ ನಾಗರಿಕ ವಿಮಾನಯಾನ ಇಲಾಖೆಯು ಪಂಜಾಬ್ ಸರ್ಕಾರಕ್ಕೆ 45 ಲಕ್ಷ ರೂಪಾಯಿಗಳ ಬಿಲ್ ನೀಡಿದೆ.

ಈ ಬಗ್ಗೆ ಆರ್‌ಟಿಐ ಸಲ್ಲಿಸಿದ ಬಳಿಕ ಈ ವಿಷಯ ಬಹಿರಂಗವಾಗಿದೆ. ಭಟಿಂಡಾ ನಿವಾಸಿ ಹರ್ಮಿಲಾಪ್ ಸಿಂಗ್ ಗ್ರೆವಾಲ್ ಅವರು ಆರ್‌ಟಿಐಗೆ ನೀಡಿದ ಪ್ರತಿಕ್ರಿಯೆಯಲ್ಲಿ ಪಂಜಾಬ್ ಸರ್ಕಾರವು ಪ್ರವಾಸಕ್ಕಾಗಿ 44,85,967 ರೂ ಬಿಲ್ ಸ್ವೀಕರಿಸಿದೆ ಎಂದು ಹೇಳಿದೆ.

ಇದೇ ರೀತಿಯ ಮತ್ತೊಂದು ಪ್ರವಾಸವನ್ನು ಏಪ್ರಿಲ್ 6 ರಂದು ಹಿಮಾಚಲ ಪ್ರದೇಶಕ್ಕೆ ಮಾಡಲಾಗಿದೆ. ಆದರೆ, ಏಪ್ರಿಲ್ 6 ರ ಪ್ರವಾಸದ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.

ಭಗವಂತ್ ಮಾನ್ ಅದೇ ವ್ಯಕ್ತಿ, ಪಂಜಾಬ್‌ನಲ್ಲಿಯೂ ಸಹ ಹೆಲಿಕಾಪ್ಟರ್‌ಗಳ ಬಳಸಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಅಣಕಿಸುತ್ತಿದ್ದ, ಎಂದು ಹರ್ಮಿಲಾಪ್ ಸಿಂಗ್ ಗ್ರೆವಾಲ್ ಹೇಳಿದ್ದಾರೆ. ಆದಾಗ್ಯೂ, ಮನ್ ಈಗ ಅದೇ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಪಕ್ಷವನ್ನು ಉತ್ತೇಜಿಸಲು ಭೇಟಿ ನೀಡುವುದು ಸಂಪೂರ್ಣವಾಗಿ ಖಾಸಗಿಯಾಗಿದೆ. ಇದು ಪಂಜಾಬ್‌ನ ಕಲ್ಯಾಣಕ್ಕೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ, ಎಂದು ಅವರು ಹೇಳಿದರು.

RELATED TOPICS:
English summary : Rs. 45 lakh spent by AAP government in Punjab for election campaign in Gujarat

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...