Tue,May07,2024
ಕನ್ನಡ / English

ಬಜೆಟ್ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ, ನಿಮ್ಮೆಲ್ಲರನ್ನು ನಾನು ಗಮನಿಸುತ್ತಿದ್ದೇನೆ! | JANATA NEWS

10 May 2022
2119

ಬೆಂಗಳೂರು : ನನ್ನ ಸರ್ಕಾರ ಬಜೆಟ್ ಘೋಷಿತ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವನ್ನು ಸಹಿಸುವುದಿಲ್ಲ. ನಿಮ್ಮೆಲ್ಲರನ್ನು ನಾನು ಗಮನಿಸುತ್ತಿದ್ದೇನೆ. ನೀವೆಲ್ಲರೂ ನನ್ನ ರಡಾರ್ ಕಣ್ಗಾವಲಿನಲ್ಲಿದ್ದೀರಿ.

ನೀವು ಸರಿಯಾಗಿ ಕೆಲಸ ಮಾಡದಿದ್ದರೆ ನಾನು ನಿಮ್ಮನ್ನು ವಿಚಾರಿಸಿ ಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಸಿಇಓಗಳಿಗೆ ಮುಖ್ಯಮಂತ್ರಿ ಬಸವರಾಜ ಎಂ ಬೊಮ್ಮಾಯಿ ಎಚ್ಚರಿಸಿದರು.

ವಿಧಾನಸೌಧದಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಸಭೆ ಸಭೆ ನಡೆಯಿತು. ಸಭೆಯಲ್ಲಿ ಸಿಇಒಗಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ನೀವೆಲ್ಲರೂ ಯುವಕರಿದ್ದೀರಿ. ಒಳ್ಳೆಯ ಕೆಲಸ ಮಾಡಲು ದೇವರು ನಿಮಗೆ ಇದೊಂದು ಅವಕಾಶ ನೀಡಿದ್ದಾನೆ. ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಕರೆ ನೀಡಿದರು.

ಬಡವರ, ದೀನ ದಲಿತರ ಪರವಾದ ಕೆಲಸಗಳನ್ನು ಮಾಡಿ. ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣದಲ್ಲಿ ನಿಮ್ಮ ಕೊಡುಗೆಯನ್ನು ನೀಡಿ. ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡೋಣ. ನಾನು ನಿಮ್ಮ ಜೊತೆ ಇದ್ದೇನೆ ಎಂದು ಸಿಎಂ ಎಲ್ಲ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಅಭಯ ನೀಡಿದರು.

ಆದರೆ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮತ್ತು ಭ್ರಷ್ಟಾಚಾರವನ್ನು ಎಂದೂ ಸಹಿಸುವುದಿಲ್ಲ. ಅದಕ್ಕೆ ಅವಕಾಶವನ್ನೂ ಮಾಡಿಕೊಡುವುದಿಲ್ಲ. ಈ ಮಾತುಗಳನ್ನು ನೀವು ಸ್ಪಷ್ಟವಾಗಿ ನೆನಪಿನಲ್ಲಿಟ್ಟುಕೊಂಡು ಕೆಲಸ ಮಾಡಿ ಎಂದು ಸೂಚನೆ ನೀಡಿದರು.

ಬಹುತೇಕ ಕಾರ್ಯಕ್ರಮಗಳ ಅನುಷ್ಠಾನ ಹೊಣೆಗಾರಿಕೆ ನಿಮ್ಮ ಮೇಲಿದೆ ಎಂದರು. ಆಯಾ ವರ್ಷ ಕ್ರಿಯಾ ಯೋಜನೆಗಳು ಅದೇ ವರ್ಷದಲ್ಲಿ ಅನುಷ್ಠಾನವಾಗುವುದಿಲ್ಲ. ಆದರೆ ಕಾಲಮಿತಿಯೊಳಗೆ ಅನುಷ್ಠಾನವಾಗ ಬೇಕೆಂಬ ಧ್ಯೇಯವಿರಬೇಕು. ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಇಲಾಖೆಯ ಯೋಜನೆಗಳೇ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿಗೆ ಕಾರಣ. ಇವುಗಳ ಶೀಘ್ರ ಅನುಷ್ಠಾನಕ್ಕೆ ಗಮನಹರಿಸಿ ಎಂದರು.

ಶಾಲಾಮಕ್ಕಳಿಗೆ, ಮಹಿಳಾ ಸಬಲೀಕರಣ, ಸ್ತ್ರೀಶಕ್ತಿ ಸಂಘಗಳಿಗೆ ವಿಶೇಷ ಕಾರ್ಯಕ್ರಮ ಇವೆಲ್ಲ ಪ್ರಮುಖ ಕಾರ್ಯಕ್ರಮಗಳು. ಸಾರ್ವಜನಿಕರಿಗೆ ಒಳಿತು ಮಾಡುವ ನಿರ್ಧಾರಗಳನ್ನು ಧೈರ್ಯವಾಗಿ ತೆಗೆದುಕೊಳ್ಳಿ. ವ್ಯವಸ್ಥೆ ಮೇಲಿನ ವಿಶ್ವಾಸವನ್ನು ಪುನರ್ ಸ್ಥಾಪಿಸೋಣ.

ನಿಮ್ಮ ಕಾರ್ಯವೈಖರಿಯನ್ನು ಗಮನಿಸಲಾಗುತ್ತದೆ. ಸಾರ್ವಜನಿಕರು ತರುವ ಅರ್ಜಿಗಳಿಗೆ ಪರಿಹಾರ ಕೊಡುವ ಕೆಲಸವಾಗಬೇಕು. ನಿಮ್ಮ ಕಾರ್ಯದಲ್ಲಿ ನಿಖರತೆ ಇರಲಿ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಸೂಚಿಸಿದರು.

RELATED TOPICS:
English summary :No delay in the implementation of budget plans, I am keeping an eye on all of you!

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...