Sun,May05,2024
ಕನ್ನಡ / English

ಜಿ.ಟಿ.ದೇವೇಗೌಡರ ಮೊಮ್ಮಗಳ ನಿಧನ! | JANATA NEWS

15 May 2022
6303

ಬೆಂಗಳೂರು : ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಅವರ ಮೊಮ್ಮಗಳು ಅನಾರೋಗ್ಯದಿಂದ ಸಾವನ್ನಪ್ಪಿದ್ದಾಳೆ.

ಅನಾರೋಗ್ಯದಿಂದ ಬಳಲುತ್ತಿದ್ದ 3 ವರ್ಷದ ಗೌರಿಯನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆಕೆ ಶನಿವಾರ ತಡರಾತ್ರಿ ನಿಧನ ಹೊಂದಿದ್ದಾಳೆ. ಜಿಡಿ ಹರೀಶ್ ಗೌಡ ಪುತ್ರಿಯಾಗಿರುವ ಗೌರಿ ಕಳೆದ 6 ತಿಂಗಳಿನಿಂದ ಬೋನ್​ ಕ್ಯಾನ್ಸರ್​​​ನಿಂದ ಬಳಲುತ್ತಿದ್ದಳು.

ಮಾಜಿ ಸಚಿವ ಜಿ. ಟಿ. ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಮಗು ಗೌರಿ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಮಗುವಿನ ಆತ್ಮಕ್ಕೆ ಶಾಂತಿ ಕರುಣಿಸಿ, ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಮಾಜಿ ಸಚಿವರು, ಆತ್ಮೀಯರು ಆದ ಜಿ.ಟಿ ದೇವೇಗೌಡರ ಮೊಮ್ಮಗಳು ಗೌರಿ ಸಾವಿನ ಸುದ್ದಿ ತಿಳಿದು ಅತೀವ ಸಂಕಟವಾಯಿತು. ಬದುಕಿ ಬಾಳಬೇಕಿದ್ದ ಎಳೆಯ ಕಂದಮ್ಮನ ಅಗಲಿಕೆಯಿಂದ ನೊಂದಿರುವ ಜಿ.ಟಿ ದೇವೇಗೌಡರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತ ಗೌರಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ, ಮಗುವಿನ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಜಿ.ಟಿ ದೇವೇಗೌಡರು ಹಾಗೂ ಆಕೆಯ ತಂದೆ, ತಾಯಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ.

ಶಾಸಕರಾದ ಜಿ.ಟಿ ದೇವೇಗೌಡ ಅವರ 3 ವರ್ಷದ ಮೊಮ್ಮಗಳು ಗೌರಿಯ ನಿಧನದ ಸುದ್ದಿ ಕೇಳಿ ನಿಜಕ್ಕೂ ಮನಸ್ಸಿಗೆ ನೋವುಂಟಾಯಿತು. ಬದುಕು ಕೆಲವೊಮ್ಮೆ ತುಂಬಾ ಅನಿಶ್ಚಿತ ಮತ್ತು ಕ್ರೂರ. ಆಕೆಯ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸುವ ಶಕ್ತಿಯನ್ನು ದೇವರು ಆ ಕುಟುಂಬಕ್ಕೆ ಕೊಡಲಿ ಎಂದು ಡಿಕೆಎಸ್ ಟ್ವೀಟ್ ಮಾಡಿದ್ದಾರೆ.

ಮಾಜಿ ಸಚಿವ ಜಿ.ಟಿ.ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಹಸುಗೂಸು ಗೌರಿ ಅನಾರೋಗ್ಯದಿಂದ ಅಸುನೀಗಿರುವ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ. ಆ ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಸ್ಥರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Death of GT Deve Gowdas granddaughter

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...