Mon,May06,2024
ಕನ್ನಡ / English

ಹನಿಟ್ರ್ಯಾಪ್‍ಗೆ ಸಿಲುಕಿ, ಬಿಜೆಪಿ ಮುಖಂಡನ ಆತ್ಮಹತ್ಯೆ! | JANATA NEWS

16 May 2022
2991

ಬೆಂಗಳೂರು : ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಮುಖಂಡ ಅನಂತರಾಜು ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಅನಂತರಾಜು ಆತ್ಮಹತ್ಯೆಗೂ ಮುನ್ನ ಬರೆದಿರುವ ಡೇತ್ ನೋಟ್‍ನಲ್ಲಿ ಆತ್ಮಹತ್ಯೆಗೆ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ಹೇರೋಹಳ್ಳಿ ವಾರ್ಡ್​ನ ನಿವಾಸಿ, ಬಿಜೆಪಿ ಮುಖಂಡ ಅನಂತರಾಜು ಮೇ 12ರ ರಾತ್ರಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಬ್ಯಾಡರಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಡೇತ್ ನೋಟ್‍ನಲ್ಲಿ ಏನಿದೆ?
ಪ್ರಿಯ ಪತ್ನಿ ಸುಮ ಕ್ಷಮಿಸಿ ಬಿಡು, ನಿನಗೆ ಮೋಸ ಮಾಡಿದ್ದೇನೆ. ನಿನ್ನಲ್ಲಿ ಕ್ಷಮೆ ಕೇಳಲು ನಾನು ಅರ್ಹನಲ್ಲ. ಹೆಣ್ಣಿನ ಸಹವಾಸ ಮಾಡಿ ಅವಳಿಂದ ಪೋಟೋ ವೀಡಿಯೋಗಳ ಟ್ರ್ಯಾಪ್‍ಗೆ ಸಿಲುಕಿ, ಬ್ಲ್ಯಾಕ್‍ಮೇಲ್ ಮಾಡಿಸಿಕೊಂಡು ನಿನಗೆ ಮುಖ ತೋರಿಸಲು ಸಾಧ್ಯವಾಗ್ತಿಲ್ಲ. ತೃಪ್ತಿ, ತನ್ಮಯ ಮತ್ತು ಅಭಯ್‍ನನ್ನು ಚೆನ್ನಾಗಿ ನೋಡಿಕೊ.
ಇಂತಿ ನಿನ್ನ ಮೋಸಗಾರ.

ಕೆ.ಆರ್.ಪುರಂನ ನಿವಾಸಿ ರೇಖಾ ಮತ್ತು ಈಕೆಯ ಪತಿ ವಿನೋದ್ ಹಾಗೂ ಸ್ನೇಹಿತೆ ಸ್ಪಂದನ ಎಂಬುವವರು ಅಶ್ಲೀಲ ಫೋಟೋಗಳನ್ನ ಇಟ್ಟುಕೊಂಡು ಬ್ಲಾಕ್​ಮೇಲ್ ಮಾಡುತ್ತಿದ್ದರು. ಫೇಸ್​ಬುಕ್​ ಮೂಲಕ ರೇಖಾಳ ಪರಿಚಯ ಅನಂತರಾಜು ಆಗಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ರೇಖಾ ಮತ್ತು ಈಕೆಯ ಗಂಡ ವಿನೋದ್​, ಸ್ಪಂದನಾ ಮೂವರು ಸಂಚು ರೂಪಿಸಿ ಅನಂತರಾಜು ಅವರ ಖಾಸಗಿ ಫೋಟೋ ವಿಡಿಯೋ ಇಟ್ಟುಕೊಂಡು ಹಣಕ್ಕಾಗಿ ಹಿಂಸಿಸಿದ್ದಾರೆ. ಇವರ ಕಾಟ ಸಹಿಸಲಾಗದೆ ಈ ಹಿಂದೆಯೂ ಆತ್ಮಹತ್ಯೆಗೆ ಅನಂತರಾಜು ಯತ್ನಿಸಿದ್ದರು.

ಇಷ್ಟಕ್ಕೆ ಸುಮ್ಮನಾಗದ ರೇಖಾ, ಪದೆಪದೇ ಕಾಲ್​ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಳು. ಈ ಬಗ್ಗೆ ಅನಂತರಾಜು ಅವರ ಪತ್ನಿಗೆ ಗೊತ್ತಾಗಿ, ಹೆದರಬೇಡಿ ಎಂದು ಗಂಡನಿಗೆ ಧೈರ್ಯ ತುಂಬಿದ್ದರು. ಆದರೂ ಆ ಗ್ಯಾಂಗ್​ ಬ್ಲ್ಯಾಕ್​ಮೇಲ್​ ಮಾಡುತ್ತಲೇ ಇತ್ತು. ಇದರಿಂದ ಬೇಸತ್ತ ಅನಂತರಾಜು ನೇಣಿಗೆ ಶರಣಾಗಿದ್ದಾರೆ ಎಂದು ಡೆತ್​ನೋಟ್ ಸಮೇತ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಅನಂತರಾಜು ಪತ್ನಿ ಸುಮ ದೂರು ದಾಖಲಿಸಿದ್ದಾರೆ.

RELATED TOPICS:
English summary :BJP leader commits suicide because of Honeytrap

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...