Thu,Sep11,2025
ಕನ್ನಡ / English

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ? | JANATA NEWS

19 May 2022
3145

ಬೆಂಗಳೂರು : ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಕೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಡ್ಗೆವಾರ್ ಭಾಷಣವನ್ನ ಪಠ್ಯದಲ್ಲಿ ಸೇರಿಸಿದರೆ ತಪ್ಪೇನಿದೆ ? ಅಷ್ಟಕ್ಕೂ ಕಾಂಗ್ರೆಸ್ ಗೆ ಹೆಡ್ಗೆವಾರ್ ಕಂಡರೆ ಭಯ ಯಾಕೆ ? ಎಂದು ಪ್ರಶ್ನಿಸಿದರು. ಹೆಡ್ಗೆವಾರ್ ಅವರ ಪ್ರೇರಣೆಯಿಂದಲೇ ಕೋಟ್ಯಂತರ ಜನ ದೇಶಪ್ರೇಮದ ಕೆಲಸ ಮಾಡುತ್ತಿದ್ದಾರೆ. ಅವರ ಪ್ರೇರಣೆಯಿಂದಲೇ ಕೆಲಸ ಮಾಡುತ್ತಿದ್ದೇವೆ. ಅದು ನಮ್ಮ ಬದ್ಧತೆ ಎಂದರು.

ಸಮಾಜದಲ್ಲಿದ್ದ ವಿಷಯವೊಂದನ್ನು ಕನ್ನಡಕ್ಕೆ ಸೇರಿಸಲಾಗಿದೆ. ನಾರಾಯಣಗುರು, ಭಗತ್ ಸಿಂಗ್ ವಿಚಾರವನ್ನು ಕೈಬಿಟ್ಟಿಲ್ಲ. ಹೆಡಗೆವಾರ್ ಅವರ ವಿಷಯ ಸೇರಿಸಿವುದರಿಂದ ಏನೋ ತಪ್ಪಾಗಿದೆ ಎಂದು ನನಗೆ ಅನ್ನಿಸುವುದಿಲ್ಲ. ದೇಶದ ಸ್ವಾಭಿಮಾನ, ಶೌರ್ಯದ ಬಗ್ಗೆ ಹೇಳಬೇಕು ಎನ್ನುವ ಚಿಂತನೆ ಮೊದಲಿನಿಂದಲೂ ಇತ್ತು. ಮೆಕಾಲೆ ರೂಪಿಸಿದ ಶಿಕ್ಷಣ ಪದ್ಧತಿಯ ಹಿಡಿತದಿಂದ ನಾವು ಬಿಡಿಸಿಕೊಳ್ಳಬೇಕು.

ಭಾರತೀಯ ಶಿಕ್ಷಣ ಪದ್ಧತಿ ಬರಬೇಕು. ಭಾರತದ ಮಕ್ಕಳಿಗೆ ಮೊಘಲರ ಶಿಕ್ಷಣ, ಟಿಪ್ಪುವಿನ ಶಿಕ್ಷಣ, ಔರಂಗಾಜೇಬನ ಶಿಕ್ಷಣ ಬೇಕು ಎಂಬುದು ನಮ್ಮ ವಾದವಲ್ಲ. ಭಾರತದ ಶಿಕ್ಷಣ ನಮಗೆ ಬೇಕಿದೆ. ಪಠ್ಯಪುಸ್ತಕ ಪರಿಷ್ಕರಣೆಗೆಂದು ರೂಪಿಸಿದ್ದ ತಜ್ಞರ ಸಮಿತಿ ಇದನ್ನು ಒಪ್ಪಿದೆ. ಹೀಗಾಗಿಯೇ ಪಠ್ಯ ಪುಸ್ತಕ ಪರಿಷ್ಕರಿಸಲಾಗಿದೆ ಎಂದು ಹೇಳಿದರು.

ಚಕ್ರವರ್ತಿ ಸೂಲಿಬೆಲೆ ಅವರು ತಾಯಿ ಭಾರತಿಗೆ ವಂದಿಸುವೆ ಎಂದು ಲೇಖನ ಬರೆದಿದ್ದಾರೆ. ಅದರಲ್ಲಿ ತಪ್ಪೇನಿದೆ? ತಾಯಿ ಭಾರತಿ ಎಂಬ ವಿಚಾರವನ್ನೂ ವಿರೋಧಿಸುವುದು ಯಾಕೆ? ಎಂದು ಪ್ರಶ್ನಿಸಿದರು.

RELATED TOPICS:
English summary :There is nothing wrong with Hedgewar s inclusion of his ideas in the text

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...