ಕಾರಿನ ನಡುವೆ ಭೀಕರ ಅಪಘಾತ: ಕಾಂಗ್ರೆಸ್ ಮುಖಂಡನ ದುರ್ಮರಣ, 8ಕ್ಕೂ ಹೆಚ್ಚು ಮಂದಿಗೆ ಗಾಯ | JANATA NEWS
ಸಿದ್ದಾಪುರ : ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಿದ್ದಾಪುರ ತಾಲೂಕಿನ ಶಿರೂರು ಬಳಿ ನಡೆದಿದೆ.
ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಮತ್ತು ಎದುರುಗಡೆಯಿಂದ ಬಂದ ಕಾರಿನ ಮಧ್ಯೆ ಡಿಕ್ಕಿಯಾಗಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ. ಗೌಡ ಕಬ್ಬಿನ್ಮನೆ ಮೃತಪಟ್ಟು 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಎರಡು ವಾಹನಗಳಲ್ಲಿದ್ದ 8 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.