Tue,May07,2024
ಕನ್ನಡ / English

ಪರಿಷ್ಕೃತ ಪಠ್ಯಕ್ರಮವನ್ನು ಕಸದ ಬುಟ್ಟಿಗೆ ಎಸೆಯಿರಿ: ಸಿದ್ದರಾಮಯ್ಯ | JANATA NEWS

05 Jun 2022
3463

ಬೆಂಗಳೂರು : ರಾಜ್ಯ ಸರ್ಕಾರದ ಪರಿಷ್ಕೃತ ಪಠ್ಯ ಕ್ರಮವನ್ನು ಕೂಡಲೇ ಕಸದಬುಟ್ಟಿಗೆ ಎಸೆಯಿರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿಷ್ಕರಣೆ ಮಾಡಲಾಗಿದೆ ಎಂದು ಸಚಿವ ಬಿ. ಸಿ. ನಾಗೇಶ್ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನುವುದನ್ನು ಸಚಿವರು ಬಹಿರಂಗಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪರಿಷ್ಕೃತ ಪಠ್ಯಜಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ. ಇವರನ್ನು ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮಿಯರಲ್ಲ, ಹಿಂದೂಗಳೇ ಅಲ್ವಾ ಎಂದು ಪ್ರಶ್ನಿಸಿದ್ದಾರೆ.

ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ ದಲಿತ ಹಾಗೂ ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲವಲ್ಲಾ? ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ? ಬಸವಣ್ಣ,ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿತಲಾಯಿತೇ? ಅವಮಾನ ಮಾಡಲಾಯಿತೇ? ನಾರಾಯಣ ಗುರಿ, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿ ತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತೇ? ಹಾಗೆಂದು ಹೇಳಿಬಿಡಿ ಎಂದಿದ್ದಾರೆ.

ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

RELATED TOPICS:
English summary :Throw the revised syllabus into the trash: Siddaramaiah

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...