Sun,May19,2024
ಕನ್ನಡ / English

ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ 12 ನೇ ಪುಣ್ಯ ಸ್ಮರಣೆಯ ದಿನ | Janata.news

12 Apr 2018
672

ಬೆಂಗಳೂರು : ಕನ್ನಡದ ನೆಚ್ಚಿನ ನಟ ದೇವತಾ ಮನುಷ್ಯ ವರನಟ ಡಾ.ರಾಜ್ ಕುಮಾರ್ ಅವರು ನಮ್ಮೆಲ್ಲರಿಂದ ದೂರವಾದ ದಿನವಿಂದು. ವರನಟ ಡಾ.ರಾಜ್‌ ಕುಮಾರ್‌ ಅವರ ಸಮಾಧಿಯ ಬಳಿ 12 ನೇ ಪುಣ್ಯ ತಿಥಿಯನ್ನು ಇಂದು ಆಚರಿಸಲಾಗುತ್ತಿದ್ದು, ಕಂಠೀರವ ಸ್ಟುಡಿಯೋದಲ್ಲಿ ಸಾವಿರಾರು ಅಭಿಮಾನಿಗಳು ಆಗಮಿಸಿ ನಮನ ಸಲ್ಲಿಸುತ್ತಾ, ಕರುನಾಡಲ್ಲಿ ಇನ್ನೊಮ್ಮೆ ಹುಟ್ಟಿ ಬರಲಿ ಅಣ್ಣಾವ್ರು ಎಂದು ಹಾರೈಸಿದರು. ಸಮಾಧಿಯನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿದ್ದು, ಸಮಾಧಿಗೆ ರಾಜ್‌ ಪುತ್ರರಾದ ಡಾ.ಶಿವರಾಜ್‌ ಕುಮಾರ್‌, ರಾಘವೇಂದ್ರ ರಾಜ್‌ ಕುಮಾರ್‌, ಪುನೀತ್‌ ರಾಜ್‌ ಕುಮಾರ್‌ ಸೇರಿದಂತೆ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದರು. ಪ್ರತಿ ವರ್ಷದಂತೆ ಈ ದಿನ ರಾಜ್‌ ಸ್ಮರಣಾರ್ಥವಾಗಿ ರಕ್ತದಾನ,ಅನ್ನದಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
Rajkumar
ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆಯ ಈ ದಿನದಂದು ಅಭಿಮಾನಿಗಳ ಜೊತೆ ಸೇರಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಣ್ಣಾವ್ರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಕನ್ನಡಿಗರ ಅಣ್ಣಾವ್ರರಾಗಿದ್ದ ಡಾ ರಾಜ್ ಕುಮಾರ್ ಮರೆಯಾಗಿ 12 ವಸಂತಗಳೇ ಕಳೆದಿದ್ದರೂ, ಇಂದಿಗೂ ಕನ್ನಡನಾಡಿನ ಮನೆ ಮನದಲ್ಲಿ ನೆಲೆಸಿದ್ದಾರೆ.

ಸಾಮಾನ್ಯವಾಗಿ ಬಾಲಿವುಡ್ ನಲ್ಲಿ ಘಟಾನುಘಟಿ ಕಲಾವಿದರು ಬಂದು ಹೋದರು, ಆದರೆ ಇಂದು ಅವರ ಚಿತ್ರವನ್ನು ಟೀವಿಯಲ್ಲೂ ನೋಡಲು ಸಿಗುವುದಿಲ್ಲ . ಆದರೆ ಇಂದಿಗೂ ಡಾ.ರಾಜಕುಮಾರ ಅಭಿನಯದ ಯಾವುದೇ ಚಿತ್ರ ಪ್ರಸಾರವಾದರೂ ಜಾಹಿರಾತುಗಳ ಸರಮಾಲೆಗಳೊಂದಿಗೆ ಪ್ರಸಾರವಾಗುವುದು. ಕೆಲವೊಮ್ಮೆ ಹೊಸ ಚಿತ್ರಗಳಿಗೂ ಅಷ್ಟರ ಮಟ್ಟಿಗೆ ಜಾಹೀರಾತು ಸಿಗುವುದು ಕಷ್ಟ. ಇದು ಡಾ.ರಾಜ್ ಅಭಿಮಾನಿಗಳ ಇಂದಿನ ಸಂಖ್ಯೆ ಗೆ ಹಿಡಿದ ಕನ್ನಡಿಯಾಗಿದೆ.

ತಮಿಳನಾಡಿನಲ್ಲಿ ಇಬ್ಬರು ಹಿರಿಯ ನಟರು ತಮ್ಮ ರಾಜಕೀಯ ಲಾಭಕ್ಕಾಗಿ ಗೊಂದಲದ ಹೇಳಿಕೆ ಕೊಡುತ್ತಿರುವ ಈ ಸಂಧರ್ಭದಲ್ಲಿ, ಕನ್ನಡ ನಾಡು ನುಡಿ ವಿಷಯ ಬಂದಾಗಲೆಲ್ಲ ಸದಾ ಕನ್ನಡಿಗರ ಶಕ್ತಿಯಾಗಿ ನಿಲ್ಲುತ್ತಿದ್ದ ಆ ಮಹಾನ್ ಚೇತನ ರಾಜಣ್ಣ ನನ್ನು ಕನ್ನಡಿಗರು ನೆನೆಸುತ್ತಾರೆ.
Rajkumar

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Dr. Rajkumar s 12th Memorial Day

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...