Mon,May06,2024
ಕನ್ನಡ / English

ಪ್ರಧಾನಿ ನರೇಂದ್ರ ಮೋದಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ | JANATA NEWS

13 Jun 2022
3385

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಆಡಳಿತದ ವೈಫಲ್ಯವನ್ನು ಮರೆಮಾಚಲು ಇಂತಹ ಕೆಲಸಗಳನ್ನು ಸರ್ಕಾರಿ ಸಂಸ್ಥೆಗಳು ಮೂಲಕ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಸೋಮವಾರ ನವದೆಹಲಿಯಲ್ಲಿ ಇಡಿ ವಿಚಾರಣೆಗೆ ಹಾಜರಾದ ರಾಹುಲ್‌ಗಾಂಧಿ ಎಐಸಿಸಿ ಕಚೇರಿಯಿಂದ ಸುಮಾರು 7 ಕಿ.ಮೀ. ಪಾದಯಾತ್ರೆ ನಡೆಸಿ ಇಡಿ ಕಚೇರಿ ತಲುಪಿದರು. ದೆಹಲಿಯಲ್ಲಿ ಇದು ಬೃಹತ್ ಪ್ರತಿಭಟನೆಯ ರೂಪ ಪಡೆದಿದೆ. ಈ ಹಿನ್ನೆಲಯಲ್ಲಿ ಕರ್ನಾಟಕವೂ ಸಹಿತ ಹಲವು ರಾಜ್ಯಗಳಲ್ಲಿ ಇದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ಇಡಿ ಕಚೇರಿ ಮುಂದೆ ನಡೆಸಿದ ಹೋರಾಟದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಸಹಿತ ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಿದ್ದರು.

ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಇ.ಡಿ ನೋಟಿಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿಯ ದ್ವೇಷ ರಾಜಕಾರಣ ಖಂಡಿಸಿ ಕೆಪಿಸಿಸಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಸರ್ಕಾರದ ಎಲ್ಲ ಸ್ವತಂತ್ರ ಸಂಸ್ಥೆಗಳನ್ನು ಅವರ ಕೈಗೊಂಬೆಗಳಾಗಿ ಮಾಡಿಕೊಳ್ಳುತ್ತಿದ್ದಾರೆ.

ಅದು ರಿಸರ್ವ್ ಬ್ಯಾಂಕ್, ಸಿಎಜಿ, ಸಿಬಿಐ, ಇ.ಡಿ, ಎನ್‍ಎಸ್‍ಎಸ್‍ಒ ಇವು ಯಾವುದೇ ಇರಬಹುದು. ಈ ಎಲ್ಲಾ ಸಂಸ್ಥೆಗಳು ತಮ್ಮ ತಾಳಕ್ಕೆ ತಕ್ಕಂತೆ ಕುಣಿಯುವಂತೆ ಮಾಡಿಕೊಂಡಿದ್ದಾರೆ. ಇ.ಡಿ ಹಾಗೂ ಆದಾಯ ತೆರಿಗೆ ಇಲಾಖೆಗಳನ್ನು ವಿರೋಧ ಪಕ್ಷದವರ ಮೇಲೆ ಛೂ ಬಿಡುವ ಕೆಲಸ ಮಾಡುತ್ತಿದ್ದಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವತ್ತೂ ಕೂಡ ಸ್ವಾಯತ್ತ ಸಂಸ್ಥೆಗಳನ್ನು ಈ ರೀತಿ ದುರುಪಯೋಗ ಮಾಡಿಕೊಂಡ ಉದಾಹರಣೆಗಳಿಲ್ಲ ಎಂದು ಕಿಡಿಕಾರಿದರು.

ನರೇಂದ್ರ ಮೋದಿ ಅವರಿಗೆ ರಾಜ್ಯದ ಗುತ್ತಿಗೆದಾರರ ಸಂಘದವರು ಬಿಜೆಪಿ ಸರ್ಕಾರ 40% ಕಮಿಷನ್ ಕೇಳುತ್ತಿದೆ ಎಂದು ಪತ್ರ ಬರೆದಿದ್ದರು, ಈ ಭ್ರಷ್ಟರ ಮೇಲೆ ಇ.ಡಿ ಛೂ ಬಿಟ್ಟಿದ್ದೀರ ಮೋದಿಜೀ? ಯಾರ ಮೇಲಾದರೂ ಕೇಸ್ ಹಾಕಿದ್ದೀರ? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೇನು ಲೂಟಿ ಹೊಡೆದಿದ್ದಾರ? ಮೋದಿ ಅವರು ನಾ ಖಾವೂಂಗಾ, ನಾ ಖಾನೆದೂಂಗ ಅನ್ನೋದು ಬರೀ ಸುಳ್ಳು. ದೇಶದ ಸ್ವಾತಂತ್ರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಟ್ರಸ್ಟಿಗಳ ಮೇಲೆ ಇ.ಡಿ ಛೂ ಬಿಟ್ಟಿದೀರಲ್ಲವೇ ನಾಚಿಕೆಯಾಗಲ್ವ ನಿಮಗೆ ಎಂದು ಪ್ರಶ್ನಿಸಿದರು..

RELATED TOPICS:
English summary :Prime Minister Narendra Modi is doing revenge politics

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...