Sat,May11,2024
ಕನ್ನಡ / English

ಅಗ್ನಿಪಥ್ ಯೋಜನೆಗೆ ಪ್ರತಿಭಟನೆ, ಕಾಂಗ್ರೆಸ್​ನಿಂದ ಬೆಂಕಿಗೆ ತುಪ್ಪ ಸುರಿಯುವ ಕೆಲಸ | JANATA NEWS

19 Jun 2022
2203

ಬೆಂಗಳೂರು : ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಸೇನೆ ಹಾಗೂ ಯುವ ಶಕ್ತಿಗೆ ಚೈತನ್ಯ ತುಂಬುವುದಾಗಿದೆ. ಸದೃಢ, ಶಿಸ್ತುಬದ್ಧ, ಕಠಿಣ ಪರಿಶ್ರಮ ಯುವ ಸಮೂಹವನ್ನು ರೂಪಿಸುವ ದೂರಾಲೋಚನೆಯ ಮಹೋನ್ನತ ಉದ್ದೇಶ ಹೊಂದಿದೆ ಎಂದರು.

ಸಶಕ್ತ ಯುವಕರ ಜನಸಂಖ್ಯೆ ಯನ್ನು ಸಿದ್ದ ಮಾಡುವ ದೃಷ್ಟಿಯಿಂದ ಹಾಗೂ ಸಶಸ್ತ್ರ ಪಡೆಗಳಲ್ಲಿ ಯುವಶಕ್ತಿ ಯನ್ನು ತುಂಬುವ ಮಹತ್ವಾಕಾಂಕ್ಷೆ ಇದೆ.. ಅಗ್ನಿಪಥ್ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ ಇದೆ. 17 – 21 ವರ್ಷ ಉತ್ತಮ ತರಬೇತಿ ಪಡೆದರೆ, ಬೇರೆ ಅವಕಾಶಗಳು ಸಿಗುತ್ತವೆ. ಮಿಲಿಟರಿ ಹಾಗೂ ಅರೆಮಿಲಿಟರಿ ಪಡೆಗಳಲ್ಲಿ ಅವಕಾಶ ಸಿಗಲಿದೆ ಎಂದು ಹೇಳಿದರು.

ಪರೀಕ್ಷೆ ಬರೆದವರಿಗೆ ಆತಂಕ ಇದೆ. ಅದನ್ನು ಕೇಂದ್ರ ಸರ್ಕಾರ ಗಮನಿಸಿ ಪರಿಹಾರ ನೀಡುವ ವಿಶ್ವಾಸವಿದೆ. ಆದರೆ ಈ ನೆಪದಲ್ಲಿ ರೈಲುಗಳಿಗೆ ಬೆಂಕಿ ಹಚ್ಚುವುದು, ಖಂಡಿತವಾಗಿಯೂ ಕ್ಷಮಿಸಲಾಗದ ಅಪರಾಧ. ಪ್ರಯಾಣಿಕರಿಗೆ ತೊಂದರೆ, ಆಸ್ತಿಪಾಸ್ತಿ ನಷ್ಟವಾಗಿದೆ. ಜವಾಬ್ದಾರಿ ಇರುವವರು ಯಾರೂ ಈ ರೀತಿ ಮಾಡುವುದಿಲ್ಲ. ಇದೊಂದು ರಾಜಕೀಯ ಪ್ರೇರಿತ ಕೃತ್ಯ. ಜನ ಸ್ವಲ್ಪ ದಿನಗಳಲ್ಲಿಯೇ ಅರ್ಥ ಮಾಡಿಕೊಳ್ಳುತ್ತಾರೆ ಎಂದರು.

ಬೆಂಕಿಗೆ ತುಪ್ಪ ಸುರಿಯವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿಕೆ, ಪ್ರತಿಭಟನೆಯಲ್ಲಿ ಭಾಗಿಯಾಗಿರುವುದು ಎತ್ತಿ ತೋರಿಸುತ್ತದೆ. ಜವಾಬ್ದಾರಿಯುತ ಪ್ರತಿಪಕ್ಷಕ್ಕೆ ಸಲ್ಲದ ನಡೆಯಿದು ಎಂದು ಬೊಮ್ಮಾಯಿ‌ ಕಿಡಿಕಾರಿದರು.

RELATED TOPICS:
English summary :Opposition to the Agnipath project, the burning of ghee by the Congress

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...