Thu,May02,2024
ಕನ್ನಡ / English

ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್ | JANATA NEWS

23 Jun 2022
2889

ಬೆಂಗಳೂರು : ಕೆಂಪೇಗೌಡರ ಅಧ್ಯಾಯವಿದ್ದ ಪರಿಷ್ಕೃತ ಪಠ್ಯದ ಪ್ರತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿದು ಹಾಕಿದ್ದು ತಪ್ಪು, ಎಂದು ಕಂದಾಯ ಸಚಿವ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದರು.

ಅವರು ವಿಧಾನಸೌಧದಲ್ಲಿ ಇಂದು ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಫ್ರೀಡಂ ಪಾರ್ಕನಲ್ಲಿ ಪಠ್ಯ ಪರಿಷ್ಕರಣೆ ವಿರೋಧಿಸಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಪರಿಷ್ಕೃತಗೊಂಡ ಪಠ್ಯದ ಪ್ರತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿದು ಹಾಕಬಾರದಿತ್ತು. ಅದರಲ್ಲಿ ಕೆಂಪೇಗೌಡರ ಅಧ್ಯಾಯವಿತ್ತು. ಅದನ್ನು ಹರಿದು ಹಾಕಿದ್ದು ಎಷ್ಟು ಸರಿ, ಎಂದು ಪ್ರಶ್ನಿಸಿದರು.

ಅದರ ಬದಲು ಅವರು ಹಿಂದೆ ಮಾಡಿದ್ದ ಪಠ್ಯಪುಸ್ತಕ ಬಗರೂರು ರಾಮಚಂದ್ರಪ್ಪ ಅವರು ಮಾಡಿದ್ದ ಪಠ್ಯಪುಸ್ತಕವನ್ನು ಹರಿದ ಹಾಕಬೇಕಾಗಿತ್ತು. ಅದರಲ್ಲಿ ಕೆಂಪೇಗೌಡರ ಬಗ್ಗೆ ಇತಿಹಾಸ ಇರಲಿಲ್ಲ, ಅವರ ಚಿತ್ರ ಕೂಡ ಇರಲಿಲ್ಲ. ಈಗ ಪರಿಷ್ಕರಿಸಲ್ಪಟ್ಟ ಪಠ್ಯದಲ್ಲಿ ಕೆಂಪೇಗೌಡರ ಇತಿಹಾಸ ಇದೆ ಇದನ್ನು ಹರಿದು ಹಾಕಿದ್ದು ಎಷ್ಟು ಸರಿ ಎಂದು ನಾನು ಪ್ರಶ್ನೆಯನ್ನು ಮಾಡುತ್ತಿದ್ದೇನೆ, ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರದ ಕಾಲದ ಪಠ್ಯಪುಸ್ತಕದ ಬಗ್ಗೆ ಸಚಿವ ಅಶೋಕ್ ಅವರು ಮಾತಾಡುತ್ತ, ಇವರಿಗೆ ಹಿಂದೂ ಇರಬಾರದು, ಹಿಂದೂ ಸಮುದ್ರ ಇರಬಾರದು, ಹಿಂದೂ ಪದ ಇರಬಾರದು, ಹಿಂದೂ ದೇವರ ಹೆಸರು ಇರಬಾರದು, ಸ್ವತಂತ್ರ ಹೋರಾಟಗಾರರ ಹೆಸರು ಇರಬಾರದು. ಗಜನಿ ಮೊಹಮ್ಮದ್, ಔರಂಗಜೇಬ್, ಖಿಲ್ಜಿ, ಟಿಪ್ಪು ಹೈದರಾಲಿ ಇವರ ಬಗ್ಗೆ ಮಕ್ಕಳಿಗೆ ಜಾಸ್ತಿ ತಿಳಿಯಬೇಕು. ಇದನ್ನು ನಿರಂತರವಾಗಿ ಸಿದ್ದರಾಮಯ್ಯನವರ ಸರ್ಕಾರ ಮಾಡಿದೆ. ಇದನ್ನೆಲ್ಲ ನಾವು ತೆಗೆದುಹಾಕಿದ್ದೇವೆ. ಭಾರತೀಯ ಪರಂಪರೆ, ಭಾರತೀಯ ಸಂಸ್ಕೃತಿ ನೆಲದ ಸಂಸ್ಕೃತಿಯನ್ನು ಬಿಂಬಿಸುವಂತಹ ಒಂದು ಪಠ್ಯಪುಸ್ತಕವನ್ನು ನಾವು ಕೊಟ್ಟಿದ್ದೇವೆ, ಎಂದು ಸಚಿವ ಅಶೋಕ್ ಅವರು ಪಠ್ಯಪುಸ್ತಕ ಪರಿಷ್ಕರಣೆಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

RELATED TOPICS:
English summary :DK.Shivakumar torning text copy which had Kempegowda chapter is wrong - Min.Ashok

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...