Sun,May05,2024
ಕನ್ನಡ / English

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ | JANATA NEWS

30 Jun 2022
4358

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಅನಾನುಕೂಲವಾಗುವ ಕಡೆಗಳಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದೆ.

ಮಂಗಳೂರು, ಬೆಳ್ತಂಗಡಿ, ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ 24ಗಂಟೆಯಿಂದಲೂ ನಿರಂತರವಾಗಿ ಗುಡುಗು, ಮಿಂಚು, ಗಾಳಿ ಸಹಿತ ಭಾರಿ ಮಳೆ ಸುರಿಯುತ್ತಲೇ ಇದೆ. ಹಲವೆಡೆ ತಗ್ಗು ಪ್ರದೇಶಗಳು ತುಂಬುತ್ತಿದ್ದು, ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ.

ಇದರಿಂದ ಮಕ್ಕಳ ಸಂಚಾರಕ್ಕೆ ತೊಂದರೆ ಆಗುವ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರಜೆ ಘೋಷಿಸಿದ್ದಾರೆ.

ಬುಧವಾರದಿಂದ ಗುರುವಾರ ಬೆಳಗ್ಗೆ 8.30ರ ವೇಳೆಗೆ ಉಡುಪಿ ಜಿಲ್ಲೆಯ ನಾಡಾದಲ್ಲಿ 24.8ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಮಾವಳ್ಳಿಯಲ್ಲಿ 21ಸೆಂ.ಮೀ ಅಧಿಕ ಮಳೆ ಸುರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮುಂದಿನ ನಾಲ್ಕು ದಿನ ಮುಂದುವರಿಯಲಿದೆ. ಕರಾವಳಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಬೀಳಲಿರುವ ಕಾರಣಕ್ಕೆ ಶುಕ್ರವಾರ ಈ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಎಚ್ಚರಿಕೆ ನೀಡಲಾಗಿದೆ.

RELATED TOPICS:
English summary :Heavy rain in Dakshina Kannada: Vacation for school and college

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...