Sat,May18,2024
ಕನ್ನಡ / English

ಪಿಎಸ್ಐ ನೇಮಕಾತಿ ಪ್ರಕರಣ: ಎಡಿಜಿಪಿ ಅಮೃತ್​ ಪೌಲ್​ ಬಂಧನ | JANATA NEWS

04 Jul 2022
2211

ಬೆಂಗಳೂರು : ಪಿಎಸ್​​ಐ ಅಕ್ರಮ ಕೇಸ್​ ಸಂಬಂಧ ಎಡಿಜಿಪಿ ಅಮೃತ್‌ ಪೌಲ್‌ ಅರೆಸ್ಟ್​ ಮಾಡಲಾಗಿದೆ. ಮೊದಲ ಬಾರಿಗೆ ಎಡಿಜಿಪಿ ದರ್ಜೆಯ ಅಧಿಕಾರಿಯೊಬ್ಬರನ್ನು ಪಿಎಸ್​ಐ ಹುದ್ದೆ ನೇಮಕಾತಿ ಹಗರಣ ಪ್ರಕರಣದಲ್ಲಿ ಬಂಧಿಸುವ ಮೂಲಕ ಸಿಐಡಿ ಅಧಿಕಾರಿಗಳು ಪ್ರಭಾವಿ ವ್ಯಕ್ತಿಯನ್ನ ಬಂಧಿಸಿದ್ದಾರೆ.

ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಹಾಗೂ ಅಭ್ಯರ್ಥಿಗಳು ಸೇರಿದಂತೆ ಸಿಐಡಿ ಬೆಂಗಳೂರು ವಿಭಾಗದ ಅಧಿಕಾರಿಗಳು 20ಕ್ಕಿಂತ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ರನ್ನು ಐಎಸ್​​ಡಿ ಗೆ ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಎಡಿಜಿಪಿ ಅಮೃತ್‌ ಪೌಲ್‌ ಕೂಡ ಈ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಇವರ ಅವಧಿಯಲ್ಲೇ ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆದಿತ್ತು.

ಕೇಸ್​ ಸಂಬಂಧ ಎಸ್‌ಪಿ ದರ್ಜೆಯ ತನಿಖಾಧಿಕಾರಿ ಎಡಿಜಿಪಿ ಅಮೃತ್‌ ಪೌಲ್‌ ಅವರನ್ನು ಸುದೀರ್ಘ ವಿಚಾರಣೆ ಮಾಡಿದ್ದರು. ಈ ಸಂಬಂಧ ಮೂರು ಬಾರಿ ವಿಚಾರಣೆ ಎದುರಿಸಿದ್ದ ಅಮೃತ್​ ಪೌಲ್​ ಅವರು ಸೋಮವಾರ ಬೆಳಗ್ಗೆ ಸಿಐಡಿ ಕಚೇರಿಗೆ ನಾಲ್ಕನೇ ಬಾರಿಗೆ ವಿಚಾರಣೆ ಎದುರಿಸಲು ಆಗಮಿಸಿದ್ದರು.

ಇಂದು ಸಹ ವಿಚಾರಣೆಗೆ ಹಾಜರಾಗಲು ಸಿಐಡಿ ನೋಟಿಸ್ ಜಾರಿ ಮಾಡಿದ್ದರು. ವಿಚಾರಣೆ ವೇಳೆ ಪೌಲ್ ಅವರು ನಡೆಸಿದ್ದ ಅವ್ಯವಹಾರದ ಬಗ್ಗೆ ಸಾಕ್ಷ್ಯ ಲಭ್ಯವಾದ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.

RELATED TOPICS:
English summary :PSI recruitment case: ADGP Amrit Paul arrested

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...