Mon,May06,2024
ಕನ್ನಡ / English

ಆಂತರಿಕ ಪ್ರಜಾಪ್ರಭುತ್ವ ಎಂದರೆ, ನರೇಂದ್ರ ಮೋದಿ ಮುಂದೆ ಸತ್ತಸೊಂಟ ದವರಂತೆ ನಡುಬಗ್ಗಿಸಿ ತಲೆ ಅಲ್ಲಾಡಿಸುವುದಾ? | JANATA NEWS

04 Jul 2022
1885

ಬೆಂಗಳೂರು : ಆಪರೇಷನ್ ದಕ್ಷಿಣ್ ಎಂಬ ಸ್ಲೋಗನ್ ಮೂಲಕ ಬಿಜೆಪಿ ಪಕ್ಷವು ಪ್ರಾದೇಶಿಕ ಪಕ್ಷಗಳನ್ನು ಸಂಪೂರ್ಣವಾಗಿ ಮೂಲೋತ್ಪಾಟನೆ ಮಾಡಿ, ಪ್ರತಿಪಕ್ಷ ಮತ್ತು ಪ್ರಜಾಪ್ರಭುತ್ವ ಮುಕ್ತ ಭಾರತ ನಿರ್ಮಾಣ ಮಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಹೈದರಾಬಾದ್ ನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಆಪರೇಷನ್ ದಕ್ಷಿಣ್ ಹೆಸರಿನಲ್ಲಿ ದಕ್ಷಿಣ ಭಾರತದಲ್ಲಿ ತನ್ನ ನೆಲೆಯನ್ನು ವಿಸ್ತರಿಸುವ ಬಿಜೆಪಿ ಆಕ್ರಮಣಶೀಲತೆಯನ್ನು ಮಾಜಿ ಸಿಎಂ ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಮುಖ್ಯವಾಗಿ ಜೆಡಿಎಸ್ ಬಗ್ಗೆ ಮಾತನಾಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೇಲೆ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.

ಜೆಡಿಎಸ್‌ ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲ ಎಂದು ಮಾಜಿ ಸಚಿವ ಸಿ. ಟಿ‌. ರವಿ ಹೇಳಿದ್ದಾರೆ. ರವಿ ಅವರೇ, ಆಂತರಿಕ ಪ್ರಜಾಪ್ರಭುತ್ವ ಎಂದರೆ, ನರೇಂದ್ರ ಮೋದಿ ಮುಂದೆ 'ಸತ್ತಸೊಂಟ' ದವರಂತೆ ನಡುಬಗ್ಗಿಸಿ ತಲೆ ಅಲ್ಲಾಡಿಸುವುದಾ? ಜೀ ಜೀ ಎನ್ನುತ್ತಾ ಜೀ ಹುಜೂರ್‌ ಎನ್ನುವುದಾ? 25 ಸಂಸದರ ಯೋಗ್ಯತೆ ಏನು? ಅವರಿಗೆಷ್ಟು ಸ್ವಾತಂತ್ರ್ಯ ಕೊಟ್ಟಿದ್ದೀರಿ? ಎಂದು ಎಂದು ಎಚ್‌.ಡಿ. ಕುಮಾರಸ್ವಾಮಿ ಖಾರವಾಗಿ ತಿರುಗೇಟು ನೀಡಿದ್ದಾರೆ.

ಆಪರೇಷನ್‌ ದಕ್ಷಿಣ್‌ ಬಗ್ಗೆ ಕಿಡಿಕಾರಿರುವ ಅವರು, ಇದು ಬಿಜೆಪಿಯ ಹೊಸ ಸ್ಲೋಗನ್.!! ಹೈದರಾಬಾದ್‌ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾವನಾನ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು, ಜನರ ಮನಸ್ಸುಗಳನ್ನು ಒಡೆದು ʼರಾವಣ ರಾಜಕೀಯʼದ ವಿನಾಶಕಾರಿ ದಾರಿಗೆ ಹಿಡನ್‌ ಅಜೆಂಡಾ ಸಿದ್ಧ ಮಾಡಲಾಯಿತಾ? ಹೇಳಿ ಮಾನ್ಯ ಸಿ.ಟಿ.ರವಿ ಯವರೇ? ಎಂದು ವ್ಯಂಗ್ಯವಾಡಿದ್ದಾರೆ.

ನೆಮ್ಮದಿಯ ಸಮಾಜಕ್ಕೆ ಕೋಮುವಿಷ ಪ್ರಾಶಣ ಮಾಡುವ ಇಂಜೆಕ್ಷನ್. ಧರ್ಮ, ದೇವರು, ಜಾತಿ, ಭಾಷೆ, ಆಚಾರ, ಆಹಾರ, ವ್ಯಾಪಾರಗಳನ್ನು ಎಳೆತಂದು, ಅಸಹಿಷ್ಣುತೆ ಸೃಷ್ಟಿಸಿ ಭಾರತವನ್ನು ಧರ್ಮದ ಆಧಾರದಲ್ಲಿ ಒಡೆದುಹಾಕುವುದಾ? ಕರ್ನಾಟಕದ ನಂತರ ನಿಮ್ಮ ಮುಂದಿನ ಗುರಿ ದಕ್ಷಿಣ ಭಾರತ. ಹೌದಲ್ಲವೇ ಸಿ.ಟಿ.ರವಿಯವರೇ? ಎಂದು ಕುಮಾರಸ್ವಾಮಿ ಅವರು ಕುಟುಕಿದ್ದಾರೆ.

RELATED TOPICS:
English summary :BJPs aim is to build a democratic India through Operation Dakshin

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...