Sun,May19,2024
ಕನ್ನಡ / English

ಮೂರು ಲಕ್ಷಕ್ಕೆ ಸುಪಾರಿ ಪಡೆದು ಕೊಲೆ ಮಾಡಿದ ಮಹಿಳೆ | JANATA NEWS

07 Jul 2022
4021

ಕಲಬುರಗಿ : ಕಲಬುರಗಿ ನಗರದ ವಾಜಪೇಯಿ ಬಡಾವಣೆಯಲ್ಲಿ ವಾರದ ಹಿಂದೆ ಭೀಕರವಾಗಿ ಕೊಲೆಯಾದ ದಯಾನಂದ್ ಲಾಡಂತಿ ಎಂಬ 26 ವರ್ಷದ ಯುವಕನ ಸಾವಿನ ರಹಸ್ಯವನ್ನು ಕೊನೆಗೂ ಪೊಲೀಸರು ಭೇದಿಸಿದ್ದಾರೆ.

ದಯಾನಂದ್ ಆಳಂದ ತಾಲೂಕಿನ ಸುಕ್ರವಾಡಿ ಗ್ರಾಮದ ನಿವಾಸಿ ಕೊಲೆಯಾದವನಾಗಿದ್ದಾನೆ. ಈತನನ್ನು ಪ್ರೇಯಸಿ ಅಂಬಿಕಾ ಆಂಡ್ ಗ್ಯಾಂಗ್ ನಿಂದ ಮೂರು ಲಕ್ಷಕ್ಕೆ ಸುಪಾರಿ ಪಡೆದು ಕೊಲೆ ಮಾಡಲಾಗಿದೆ.

ದಯಾನಂದ್ ದುಬೈನಲ್ಲಿ ಪೇಟಿಂಗ್ ಕೆಲಸ ಮಾಡುತ್ತಿದ್ದರು. ನಾಲ್ಕೈದು ತಿಂಗಳ ಹಿಂದಷ್ಟೇ ಊರಿಗೆ ಬಂದಿದ್ದರು. ಮತ್ತೆ ದುಬೈಗೆ ಹೋಗಲು ಸಿದ್ದತೆ ನಡೆಸಿದ್ದರು. ಆದರೆ ಜೂನ್ 24 ರಂದು ಪಾಸಪೋರ್ಟ್ ಕೆಲಸದ ನಿಮಿತ್ತ ಹೊರಗೆ ಹೋದಾಗ ಕೊಲೆ ಆಗಿತ್ತು. ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಗ್ರಾಮದವರೇ ಇಬ್ಬರು ಕೊಲೆ ಮಾಡಿದ್ದಾರೆ ಅಂತ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು.

ಯಾದಗಿರಿ ಜಿಲ್ಲೆಯ ಕೊಡೆಕಲ್​ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಪ್ರಾಥಮಿಕ ಸುರಕ್ಷಾ ಅಧಿಕಾರಿ ಎಂದು ಕೆಲಸ ಮಾಡುತ್ತಿದ್ದಳು ಅಂಬಿಕಾ, ಇಪ್ಪತ್ತು ದಿನದ ಹಿಂದಷ್ಟೇ ದಯಾನಂದ್​ನ ನಂಬರ್ ಪಡೆದು, ಮಿಸ್​ ಕಾಲ್​ ಕೊಟ್ಟು ನಂತರ ಸ್ನೇಹ ಬೆಳೆಸಿದ್ದಾಳೆ. ಜೂನ್ 24ರಂದು ದಯಾನಂದ್​ಗೆ ಕಲಬುರಗಿಗೆ ಬರುವಂತೆ ಹೇಳಿದ್ದಳು.

ಕಲಬುರಗಿಗೆ ಬಂದಿದ್ದ ದಯಾನಂದ್​ನನ್ನು ತನ್ನ ಸ್ಕೂಟಿ ಮೇಲೆ, ವಾಜಪೇಯಿ ಬಡಾವಣೆ ಬಳಿ ಕರೆದುಕೊಂಡು ಹೋಗಿದ್ದಳು. ಅಲ್ಲಿ ಆಟೋದಲ್ಲಿ ಬಂದಿದ್ದ ಕಲಬುರಗಿ ನಗರದ ಶಹಬಜಾರ್ ನಿವಾಸಿಗಳಾದ ಕೃಷ್ಣಾ, ನೀಲಕಂಠ, ಸುರೇಶ್, ಸಂತೋಷ್ ಅನ್ನೋರ ಮುಂದೆ ದಯಾನಂದ್ ನನ್ನು ನಿಲ್ಲಿಸಿದ್ದಳು. ಅಂಬಿಕಾಳೆ ಸ್ವತಃ ಮುಂದೆ ನಿಂತು, ದಯಾನಂದ್​ನನ್ನು ಕೊಲೆ ಮಾಡಿಸಿದ್ದಾಳೆ ಎನ್ನಲಾಗಿದೆ.

ಶುಕ್ರವಾಡಿ ಗ್ರಾಮದವನೇ ಆದ ಸುನೀಲ್ ಎಂಬಾತ, ದಯಾನಂದ್ ನನ್ನು ಕೊಲೆ ಮಾಡಲು ಅಂಬಿಕಾಳಿಗೆ ಮೂರು ಲಕ್ಷಕ್ಕೆ ಸೂಪಾರಿ ನಿಡಿದ್ದನು.

ಮೂರು ಲಕ್ಷಕ್ಕೆ ಸುಪಾರಿ ಪಡೆದ ಅಂಬಿಕಾ ಮತ್ತು ಆಕೆಯ ಸಹಚರರು ದಯಾನಂದ್​ನ ಕೊಲೆ ಮಾಡಿ ಅದರ ವಿಡಿಯೋ ಮಾಡಿದ್ದಾರೆ. ವಿಡಿಯೋ ಮಾಡಿದ ಬಳಿಕ ಮಿಲಿಟರಿಯಲ್ಲಿರುವ ಸುನೀಲ್​ಗೆ ಕಳಿಸಿದ್ದಾಳೆ.

ಕೊಲೆಯ ಲೈವ್ ವೀಡಿಯೋ ಮಾಡಿ ತಾನು ಬಚಾವ್ ಆಗೋದಕ್ಕೆ ಪ್ಲ್ಯಾನ್ ಮಾಡಿದ್ದಳು. ಆದರೆ ಇದೀಗ ತಾನೇ ತೋಡಿದ್ದ ಅಂಬಿಕಾ ಖೆಡ್ಡಾಗೆ ತಾನೇ ಬಿದ್ದಿದ್ದಾಳೆ. ಘಟನೆ ಸಂಬಂಧ ವಿಶ್ವವಿದ್ಯಾಲಯ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

RELATED TOPICS:
English summary :A woman who got betel nut for three lakhs and killed her

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...