Mon,May06,2024
ಕನ್ನಡ / English

ಪರಪ್ಪನ‌ ಅಗ್ರಹಾರ ಜೈಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಢಿರ್​ ಭೇಟಿ | JANATA NEWS

12 Jul 2022
2512

ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಕ್ರಮಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಜೈಲಿಗೆ ಭೇಟಿ ನೀಡಿ ಪರಿಶೀಲಿಸಿದರು.

ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೊತೆ ಸಮಾಲೋಚನೆ ನಡೆಸಿ, ಜೈಲಿನಲ್ಲಿ ಕೈದಿಗಳು ಎದುರಿಸುತ್ತಿರುವ ಸಮಸ್ಯೆಗಳು, ರಕ್ಷಣಾ ವ್ಯವಸ್ಥೆ, ವೈದ್ಯಕೀಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.

ಕಾರಾಗೃಹಗಳಲ್ಲಿ ನಡೆಯುವ ಯಾವುದೇ ಅಕ್ರಮ ಚಟುವಟಿಕೆ ಸಹಿಸುವುದಿಲ್ಲ ಹಾಗೂ ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪರಪ್ಪನ ಅಗ್ರಹಾರ ಜೈಲಿನೊಳಗೆ ತಪಾಸಣೆ ಮಾಡಲಾಗಿದೆ. ಮುರುಗನ್ ಸಮಿತಿಯ ವರದಿ ಮೇಲೆ ಸಾಕಷ್ಟು ಜನರನ್ನು ವರ್ಗಾಯಿಸಲಾಗಿದೆ. ಡಿಐಜಿ ಸಹಿತ 25 ಜನರನ್ನು ವರ್ಗಾವಣೆ ಮಾಡಿದ್ದೇವೆ. ಮುರುಗನ್ ವರದಿಯಲ್ಲಿ ಹೆಸರಿದ್ದವರನ್ನು ಅಮಾನತು ಮಾಡಿದ್ದೇವೆ. 15 ಮಂದಿ ಜೈಲಿನ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. 3800 ವಿಚಾರಾದೀನ ಕೈದಿ, 1100 ಸಜಾ ಕೈದಿಗಳು ಜೈಲಲ್ಲಿದ್ದಾರೆ.

ಸಹಾಯ ಮಾಡುತ್ತಿದ್ದ ಸಿಬ್ಬಂದಿ ಮೇಲೆ ಎಫ್​ಐಆರ್ ಮಾಡಿ ಕ್ರಿಮಿನಲ್ ಕೇಸ್ ಹಾಕಲಾಗುತ್ತೆ. ಹರ್ಷ ಕೊಲೆ ಅಪರಾಧಿಗಳು ಗಮ್ಮತ್ತನಲ್ಲಿದ್ದರು, ಮೊಬೈಲ್ ಫೋನ್ ಬಳಸಿದ್ರು ಎಂಬುದರ ಕುರಿತು ತನಿಖೆ ನಡೆಸಲಾಗ್ತಿದೆ.

ಕೇಂದ್ರ ಕಾರಾಗೃಹಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಮೊಬೈಲ್ ಜಾಮರ್​ಗಳನ್ನು ಅಳವಡಿಸಲು ನಿರ್ಧರಿಸಲಾಗಿದ್ದು, 5ಜಿ ಸಾಮರ್ಥ್ಯದವರೆಗಿನ ಮೊಬೈಲ್ ಕರೆಗಳನ್ನು ನಿಷ್ಕ್ರಿಯಗೊಳಿಸುವಂತೆ ಕ್ರಮ ಕೈಗೊಳ್ಳಲಾಗುವುದು. ಜೈಲಿನೊಳಗಡೆ ಅಕ್ರಮವಾಗಿ ಮಾದಕ ವಸ್ತುಗಳ ಪೂರೈಕೆ, ಕಾನೂನು ಬಾಹಿರವಾಗಿ ಕೈದಿಗಳಿಗೆ ವಿಶೇಷ ಸವಲತ್ತುಗಳನ್ನು ನೀಡುವುದು ಹಾಗೂ ಮೊಬೈಲ್ ಬಳಕೆಯಂತಹ ಅಕ್ರಮ ಚಟುವಟಿಕೆಗಳಿಗೆ ಅಂಕುಶ ಹಾಕಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ಜೈಲಿನೊಳಗಿನ ಅಕ್ರಮ ನಡೆಯುತ್ತಿರುವ ಬಗ್ಗೆ ಕೈದಿಗಳು ಮಾಹಿತಿ ನೀಡಿದರೆ, ಅವರಿಗೆ ಶಿಕ್ಷೆ ಕಡಿಮೆ ಮಾಡಲಾಗುವುದು. ಸಿಬ್ಬಂದಿ ಹಿಡಿದುಕೊಟ್ಟರೆ ಅವರಿಗೆ 2000 ಬಹುಮಾನ ಕೊಡಲಾಗುತ್ತೆ ಎಂದು ಹೇಳಿದರು.

RELATED TOPICS:
English summary :Home Minister Araga Gyanendra Didhir visited Agrahara Jail in Parappan

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...