Mon,May06,2024
ಕನ್ನಡ / English

ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಆಗಿದ್ದ ದುರ್ನಾತದ ಬಗ್ಗೆ ದಾಖಲೆ ನೀಡಬಲ್ಲೆ | JANATA NEWS

16 Jul 2022
2446

ಬೆಂಗಳೂರು : ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಎಷ್ಟು ದುರ್ನಾತ ಆಗುತ್ತಿತ್ತು ಎಂಬ ಬಗ್ಗೆ ದಾಖಲೆ ಕೊಡಬಲ್ಲೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸವಾಲು ಹಾಕಿದರು.‌

ಪಿಎಸ್ ಐ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ಆರೋಪಕ್ಕೆ ತಿರುಗೇಟು ನೀಡಿದರು. ಪಿಎಸ್​ಐ ಅಕ್ರಮದ ತ‌ನಿಖೆ ಪ್ರಾಮಾಣಿಕವಾಗಿ ನಡೆಯುತ್ತಿದೆ. ಯಾವ ಒತ್ತಡ ಏನೂ ಇಲ್ಲ, ಗಂಭೀರವಾಗಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸಿಐಡಿಗೆ ಫ್ರೀ ಹ್ಯಾಂಡ್ ನೀಡಿದ್ದೇವೆ. ಮಧ್ಯವರ್ತಿ, ಹಣ ಕೊಟ್ಟವರ ವಿರುದ್ಧವೂ ಕ್ರಮ ಆಗುತ್ತಿದೆ. ಇನ್ನೊಮ್ಮೆ ಪರೀಕ್ಷೆಯಲ್ಲಿ ಇಂತಹ ಘಟನೆ ಆಗಬಾರದು. ತನಿಖೆ ಆಗುತ್ತಿದೆ, ಯಾವುದೇ ಊಹೆಯ ಮಾತು ಹೇಳಲ್ಲ ಎಂದರು.

ಸಿಐಡಿಗೆ ಫ್ರೀ ಹ್ಯಾಂಡ್ ನೀಡಿದ್ದೇವೆ. ಹಾಗಿದ್ದರೂ ವಿರೋಧ ಪಕ್ಷದ ಮುಖಂಡರು ಇಂತಹ ಹೇಳಿಕೆ ಕೊಟ್ಟು ರಾಜಕೀಯ ಮಾಡಬಾರದು ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಿರಿಯ ರಾಜಕಾರಣಿಗಳು. ಅವರ ಆಡಳಿತ ಅವಧಿಯಲ್ಲಿ ಎಷ್ಟು ಹೊಲಸು ಹಾಗೂ ದುರ್ನಾತವಿತ್ತು ಎಂಬ ಬಗ್ಗೆ ದಾಖಲೆ ನೀಡಬಲ್ಲೆ. ಇವಾಗ ಚಾರಿತ್ರ್ಯ ಹರಣ ಮಾಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ನನ್ನ ಅವಧಿಯಲ್ಲಿ ಹಗರಣಗಳು ನಡೆಸಿದ್ದರೆ ಅದನ್ನು ತನಿಖೆ ಮಾಡಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ, ಸಮಯ ಬಂದಾಗ ಯಾವುದೇ ಇತರ ಪ್ರಕರಣದ ತನಿಖೆ ಮಾಡುವುದು ತಪ್ಪಲ್ಲ. ನಮ್ಮ ಕಣ್ಣ ಮುಂದೆ ಇರುವುದು ಸದ್ಯ ಪಿಎಸ್ಐ ಹಗರಣದ ತನಿಖೆ. ಈ ಪ್ರಕರಣದಲ್ಲಿ ಮಧ್ಯವರ್ತಿ, ಹಣ ಕೊಟ್ಟವರ ವಿರುದ್ಧವೂ ಕ್ರಮ ಆಗುತ್ತಿದೆ. ಇನ್ನೊಮ್ಮೆ ಪರೀಕ್ಷೆಯಲ್ಲಿ ಇಂತಹ ಘಟನೆ ಆಗಬಾರದು. ಸದ್ಯ ತನಿಖೆ ಆಗುತ್ತಿದೆ, ಗೃಹ‌ ಸಚಿವನಾಗಿ ನಾನು ಯಾವುದೇ ಊಹೆಯ ಮಾತು ಹೇಳಲ್ಲ ಎಂದರು.

ಜೈಲುಗಳಲ್ಲಿ ಗಾಂಜಾ ಪೂರೈಕೆ, ಅಕ್ರಮ ನಡೆಯದಂತೆ ಬಿಗಿ ಕ್ರಮ ವಹಿಸಲಾಗುವುದು. ಒಂದೆರಡು ಜೈಲುಗಳಲ್ಲಿ ಕೆಲವರು ಇದ್ದಾರೆ. ಅದನ್ನು ಸರಿಪಡಿಸುತ್ತೇವೆ. ಮುರುಗನ್ ಸಮಿತಿ ವರದಿ ಆಧಾರದಲ್ಲಿ ಹರಪ್ಪನ ಅಗ್ರಹಾರದಲ್ಲಿ 15 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. 30 ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಫೋನ್, ನಿಷೇಧಿತ ವಸ್ತು ಬಳಕೆ ಮಾಡಿದರೆ ಎಫ್​ಐಆರ್​ ಆಗುತ್ತಿದೆ. ಕೈದಿಗಳ ಶಿಕ್ಷೆ ಪ್ರಮಾಣ ಮುಗಿದ ಬಳಿಕ ಐದು ವರ್ಷ ಶಿಕ್ಷೆ ವಿಧಿಸುವ ಅವಕಾಶ ಇದೆ ಎಂದರು.

RELATED TOPICS:
English summary :Can give a record about the bad smell that happened during the Congress regime

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...