Thu,May02,2024
ಕನ್ನಡ / English

75 ದಿನಗಳ ಉಚಿತ ಬೂಸ್ಟರ್ ಡೋಸ್ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ, ಲಸಿಕೆ ಪಡೆಯಲು ಕರೆ | JANATA NEWS

16 Jul 2022
2431

ಬೆಂಗಳೂರು : ಕೊರೋನಾ ಲಸಿಕೆ ಅಮೃತ ಮಹೋತ್ಸವ ಅಭಿಯಾನದ ಅಂಗವಾಗಿ ಮುಂದಿನ 75 ದಿನಗಳವರೆಗೆ 18 ವರ್ಷ ಮೇಲ್ಪಟ್ಟ ನಾಗರಿಕರು ಉಚಿತವಾಗಿ ಮುನ್ನೆಚ್ಚರಿಕಾ ಡೋಸ್ ಅಥವಾ ಬೂಸ್ಟರ್ ಡೋಸ್ ಕೋವಿಡ್ ಲಸಿಕೆ ಪಡೆದುಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಬೆಂಗಳೂರಿನಲ್ಲಿ ಲಸಿಕಾಕರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಶೇ.100ಕ್ಕೂ ಅಧಿಕ ಪ್ರಮಾಣದಲ್ಲಿ ಎರಡೂ ಡೋಸ್ ಲಸಿಕೆ ನೀಡಿದೆ. 3ನೇ ಡೋಸ್ ಅನ್ನು ಕೂಡ ಮುಂದಿನ 75 ದಿನಗಳಲ್ಲಿ ರಾಜ್ಯದ 18 ರಿಂದ 59 ವಯೋಮಿತಿಯ ನಾಲ್ಕೂವರೆ ಕೋಟಿ ಜನರಿಗೆ ಕೊಡಬೇಕು ಎನ್ನುವ ಗುರಿ ಇದೆ. ಈ ಗುರಿ ತಲುಪಲು ಪೂರಕ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದೇವೆ.

ಸದ್ಯ ಎಲ್ಲೆಡೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಹೀಗಾಗಿ ಮುಜಾಗೃತ ಕ್ರಮವಾಗಿ ಕರ್ನಾಟಕದಲ್ಲಿ 75 ದಿನಗಳ ಲಸಿಕೆ ಅಭಿಯಾನದಲ್ಲಿ 7500 ಕೇಂದ್ರಗಳಲ್ಲಿ ಲಸಿಕೆಗಳನ್ನು ನಿರಂತರವಾಗಿ ನೀಡಲಾಗುತ್ತಿದ್ದು, ಆರೋಗ್ಯ ಕಾರ್ಯಕರ್ತರು ಅಭಿಯಾನ ರೀತಿಯಲ್ಲಿ ಕೆಲಸ ಮಾಡಲು ಸರ್ಕಾರ ಎಲ್ಲ ಸಹಕಾರ ನೀಡಲಿದೆ. ಆರೋಗ್ಯವಂತ ಸಮಾಜ, ಆರ್ಥಿಕವಾಗಿ ಸಬಲವಾದ ಸಮಾಜವನ್ನು ನಿರ್ಮಿಸುತ್ತದೆ. ಆರೋಗ್ಯ, ಶಿಕ್ಷಣ ಸರಿಯಾಗಿದ್ದರೆ ಮಾತ್ರ ರಾಜ್ಯ ಪ್ರಗತಿಹೊಂದಲು ಸಾಧ್ಯ. ಈ ದಿಸೆಯಲ್ಲಿ ಲಸಿಕೆ ಅಭಿಯಾನ ಮಹತ್ವದ ಹೆಜ್ಜೆಯಾಗಿದೆ ಎಂದು ಸಿಎಂ ಹೇಳಿದರು.

janata

ಕೋವಿಡ್ ಬಂದವರಲ್ಲಿ ಕೋವಿಡ್ ನಂತರ ಪರಿಣಾಮಗಳು ಇದ್ದೇ ಇರುತ್ತದೆ. ಈ ಪರಿಣಾಮಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವ ಮೂಲಕ ಅದನ್ನು ಕುಗ್ಗಿಸಬಹುದಾಗಿದೆ. ಈ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಕೇಂದ್ರ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದೆ. ಕೇಂದ್ರ ಸರ್ಕಾರ 'ಹರ್ ಘರ್ ದಸ್ತಕ್' ಅಭಿಯಾನದ ಮೂಲಕ ಮನೆ ಮನೆಗೆ ತೆರಳಿ ಲಸಿಕೆ ನೀಡುವ ಕಾರ್ಯಕ್ರಮ ನಡೆಸುತ್ತಿದೆ ಎಂದರು.

ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಡೋಸ್ ನ್ನು ಉಚಿತವಾಗಿ ನೀಡಲು ಆದೇಶಿಸಿದ್ದು, ಲಸಿಕೆಗಳನ್ನು ಪೂರೈಸಿದ್ದಾರೆ. ಇದೊಂದು ಮಹತ್ವಾಕಾಂಕ್ಷೆಯ ಕಾರ್ಯಕ್ರಮ.

ಯಾವ ದೇಶದಲ್ಲೂ ಕೊರೊನಾ ಲಸಿಕೆಯನ್ನು ಉಚಿತ ನೀಡಿಲ್ಲ. ವಿದೇಶದಲ್ಲಿ ಕೊರೊನಾ ಪರೀಕ್ಷೆ ಮಾಡಲು ಕೂಡ 10,000 ರೂ. ಕೊಡಬೇಕು. ಭಾರತದಲ್ಲಿಯೇ ಲಸಿಕೆಗಳನ್ನು ತಯಾರಿಸಿ, 130 ಕೋಟಿ ಜನಸಂಖ್ಯೆಗೆ ಯಶಸ್ವಿಯಾಗಿ ಲಸಿಕೆ ನೀಡಿ ಸಾಂಕ್ರಾಮಿಕ ನಿರ್ವಹಣೆಯೊಂದಿಗೆ ನಿಯಂತ್ರಣವನ್ನೂ ಮಾಡಲಾಯಿತು. ಕೊರೊನಾ ನಿಯಂತ್ರಣ ಮಾಡುವಲ್ಲಿ ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ಕೊಡುಗೆ ದೊಡ್ಡದು ಎಂದರು.

RELATED TOPICS:
English summary :CM Bommai drives for 75 days free booster dose campaign, calls to get vaccine

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...