ನ್ಯಾಯಮೂರ್ತಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ: ಎಚ್ ಡಿ ಕುಮಾರಸ್ವಾಮಿ | JANATA NEWS

ಬೆಂಗಳೂರು : ಸಿಜೆಐ ಎನ್ ವಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸ್ವಾತಂತ್ರ್ಯ ಭಾರತದಲ್ಲಿ ನಾವು 75 ವರ್ಷ ಸಾಗಿದ್ದೇವೆ. ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಸಿ ಹೇಳಿರುವ ಮಾತುಗಳನ್ನು ಎಲ್ಲರೂ ಕೇಳಲೇಬೇಕು. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ-ಪ್ರತಿಪಕ್ಷಗಳ ಜುಗುಲ್ʼಬಂದಿ ಇದ್ದರೆ ದೇಶಕ್ಕೆ ಶ್ರೇಯಸ್ಸು ಎಂದು ಹೆಚ್ ಡಿಕೆ ಟ್ವೀಟ್ ನಲ್ಲಿ ಅಭಿಪ್ರಾಯ ವನ್ನು ಶೇರ್ ಮಾಡಿದ್ದಾರೆ .
ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವಿಚಾರಣೆಯೇ ಇಲ್ಲದೆ ದೀರ್ಘಕಾಲ ಬಂಧನದಲ್ಲಿ ಇರಿಸುವುದೂ ಒಂದು ಶಿಕ್ಷೆಯೇ ಸರಿ. ಆತುರ, ವಿವೇಚನೆ ಇಲ್ಲದ ಬಂಧನಗಳು, ಜಾಮೀನು ಪಡೆಯುವಲ್ಲಿನ ಕಷ್ಟಗಳ ಬಗ್ಗೆಯೂ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಮಾನ್ಯ ಮುಖ್ಯ ನ್ಯಾಯಮೂರ್ತಿಗಳ ಮಾತುಗಳು ಹೊಣೆಗೇಡಿತನದ ಆಡಳಿತದ ಕಣ್ತೆರೆಸಲಿ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.