ಕಂಬಳದ ಉಸೈನ್ ಬೋಲ್ಟ್ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು | JANATA NEWS
ಮಂಗಳೂರು : ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು ದಾಖಲಾಗಿದೆ.
ಕಂಬಳ ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಮುಚ್ಚೂರು ಎಂಬುವವರು ದೂರು ನೀಡಿದ್ದಾರೆ.
ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಹಣ ಮತ್ತು ಸಾರ್ವಜನಿಕರಿಗೆ ವಂಚನೆ ಆರೋಪ ಕೇಳಿಬಂದಿದೆ. ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಅಕಾಡೆಮಿ ನಡೆಸುವ ಗುಣಪಾಲ ಕಡಂಬ ಮತ್ತು ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸ್ಕೈ ವೀವ್ ಮಾಲೀಕ ರತ್ನಾಕರ ಎಂಬವರ ವಿರುದ್ದ ಕ್ರಿಮಿನಲ್ ದೂರು ನೀಡಲಾಗಿದೆ.
RELATED TOPICS:
English summary :Criminal complaint against Usain Bolt Srinivasa Gowda of Kambala