Sat,May18,2024
ಕನ್ನಡ / English

ಕಸದ ವಾಹನಗಳ ಮೇಲೆ ಬಿಬಿಎಂಪಿ ನಾಮಫಲಕ ನಿಷೇಧ | JANATA NEWS

24 Jul 2022
4432

ಬೆಂಗಳೂರು : ಪಾಲಿಕೆ ಕಸದ ವಾಹನಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಪ್ರಮುಖವಾಗಿ ವಾಹನಗಳ ಮೇಲೆ ಬಿಬಿಎಂಪಿ ನಾಮಫಲಕ ಹಾಕುವಂತಿಲ್ಲ ಎಂದು ನಿರ್ದೇಶನ ನೀಡಿದೆ.

ಪಾಲಿಕೆಯ ಘನತ್ಯಾಜ್ಯ ನಿರ್ವಹಣಾ ವಿಭಾಗದ ಗುತ್ತಿಗೆದಾರರ ಮೂಲಕ ಸರಬರಾಜು ಮಾಡಲಾದ ಎಲ್ಲ ಆಟೋ ಟಿಪ್ಪರ್ ಗಳು, ಕಾಂಪ್ಯಾಕ್ಟರ್‌ಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬಿಬಿಎಂಪಿ ಎಂದು ನಮೂದಿಸುವುದನ್ನು ತಕ್ಷಣದಿಂದ ನಿಷೇಧಿಸಿ ಆದೇಶ ಹೊರಡಿಸಿದೆ.

ಈ ಸಂಬಂಧ ಬಿಬಿಎಂಪಿಯ ಮುಖ್ಯ ಆಯುಕ್ತರ ನಿರ್ದೇಶನದ ಮೇರೆಗೆ ಘನತ್ಯಾಜ್ಯ ವಿಭಾಗ ಹಾಗೂ ಯೋಜನಾ ವಿಭಾಗದ ವಿಶೇಷ ಆಯುಕ್ತರು ರವರು ಸುತ್ತೋಲೆ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆ, ಸಾಗಾಣೆ ಮತ್ತು ವಿಲೇವಾರಿಯಲ್ಲಿ ಗುತ್ತಿಗೆದಾರರ ಕಾರ್ಯನಿರ್ವಹಿಸುತ್ತಿರುವ ವಾಹನಗಳ ಮೇಲೆ ಗುತ್ತಿಗೆದಾರರು 'ಪಾಲಿಕೆಯ ಮೂಲಕ ಸೇವೆಯಲ್ಲಿ/ ಬಿಬಿಎಂಪಿ/ಬಿಬಿಎಂಪಿ ಸೇವೆಯಲ್ಲಿ/ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ' ಎಂದು ನಮೂದಿಸಿಕೊಂಡು/ ನಾಮಫಲಕಗಳನ್ನು ಅನಧಿಕೃತವಾಗಿ ಹಾಕಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಗಮನಿಸಲಾಗಿರುತ್ತದೆ ಎಂದಿದ್ದಾರೆ.

ಮುಂದುವರಿದು, ಪಾಲಿಕೆ ವತಿಯಿಂದ ಕಾರ್ಯನಿರ್ವಹಿಸುವ ಕಾಮಗಾರಿಗಳಿಗೆ ಅವಶ್ಯವಿರುವ ನಿರ್ಮಾಣ ಸಾಮಗ್ರಿಗಳ ಸಾಗಾಣೆ ಮಾಡುವ ವಾಹನಗಳ‌ ಮೇಲೆ ಪಾಲಿಕೆಯ ಸೇವೆಯಲ್ಲಿ ಎಂದು ನಮೂದಿಸಿಕೊಂಡು/ನಾಮಫಲಕಗಳನ್ನು ಅನಧಿಕೃತವಾಗಿ ಹಾಕಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಗಮನಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ವಾಹನ ಚಲಾಯಿಸುವ ದೈಹಿಕ ಸಧೃಡತೆಯ ಪ್ರಮಾಣ ಪತ್ರ, ವಾಹನದ ಫಿಟ್ನೆಸ್ ಸರ್ಟಿಫಿಕೇಟ್, ಇನ್ಸುರೆನ್ಸ್ ಪ್ರಮಾಣ ಪತ್ರಗಳ ತಪಾಸಣೆ ಹಾಗೂ ಅವಶ್ಯ ಕಾಯ್ದೆಗಳನ್ವಯ ಇತರ ತಪಾಸಣೆಗಳನ್ನು ಸಂಬಂಧಿಸಿದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಆರೋಗ್ಯ ಪರಿವೀಕ್ಷಕರುಗಳು ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ.

ವಲಯ ಮತ್ತು ವಾರ್ಡ್ ಮಾರ್ಷಲ್‌ಗಳು, ಕಿರಿಯ ಆರೋಗ್ಯ ಪರಿವೀಕ್ಷಕರು, ರಸ್ತೆಗಳಲ್ಲಿ ಅನಧಿಕೃತವಾಗಿ ಪಾಲಿಕೆಯ ಹೆಸರನ್ನು ನಮೂದಿಸಿರುವ ನಾಮಫಲಕಗಳನ್ನು ಹಾಕಿರುವ ವಾಹನಗಳನ್ನು, ಗುತ್ತಿಗೆದಾರರ ವಾಹನಗಳ ಮೇಲೆ ಪಾಲಿಕೆಯ ಸೇವೆಯಲ್ಲಿ, ಬಿಬಿಎಂಪಿ ಎಂದು ನಮೂದಿಸಿ ನಾಮಫಲಕ ಅಳವಡಿಸಿರುವುದನ್ನು ತೆಗೆಸಲು ಕ್ರಮಕೈಗೊಳ್ಳಬೇಕು.

ನಾಮಫಲಕಗಳನ್ನು ಅಳವಡಿಸಿರುವುದು ಪೋಲಿಸ್ ಇಲಾಖೆ ಮತ್ತು ಇತರ ಅಧಿಕಾರಿಗಳ ಗಮನಕ್ಕೆ ಬಂದರೆ, ಅಂತಹ ವಾಹನಗಳ ಚಾಲಕರ ಮೇಲೆ ಮತ್ತು ಮಾಲೀಕರ ಮೇಲೆ ಕಾನೂನಾತ್ಮಕವಾಗಿ ಕ್ರಮಜರುಗಿಸಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ.

RELATED TOPICS:
English summary :BBMP nameplate ban on garbage vehicles

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...