Sun,May19,2024
ಕನ್ನಡ / English

ಬಿಜೆಪಿ ಸರ್ಕಾರಕ್ಕೆ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಲು ಧೈರ್ಯವಿಲ್ಲ. ಈ ಅಸಹಾಯಕತೆಗೆ ಕಾರಣ ಏನು? | JANATA NEWS

27 Jul 2022
1533

ಬೆಂಗಳೂರು : ಕೊಲೆಗೆಡುಕ ಶಕ್ತಿಗಳ ಮುಂದೆ ಸರ್ಕಾರ ಕೋಲೆ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಲು ಧೈರ್ಯವಿಲ್ಲ. ಈ ಅಸಹಾಯಕತೆಗೆ ಕಾರಣ ಏನು? ಎಂದು ಎಚ್‍ಡಿಕೆ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರ್ಕಾರ ಮೈಮರೆತಿದ್ದು ಯಾಕೆ? ಎಂದು ಸರ್ಕಾರವನ್ನು ಹೆಚ್​ಡಿಕೆ ಪ್ರಶ್ನೆ ಮಾಡಿದ್ದಾರೆ.

ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ ಏಕೆ? ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ! ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ. ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ! ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣೋದೇ ಇಲ್ಲ! ವೆಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಪ್ರತಿ ಕೊಲೆ ಅದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರ್ಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ, ಏಕೆ?
ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ! ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ.

ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ. ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣೋದೇ ಇಲ್ಲ. ರಾಜ್ಯದಲ್ಲಿ ಕೆಲ ಸಂಘಟನೆಗಳು ಬಡ ಯುವಕರನ್ನು ದಾರಿ ತಪ್ಪಿಸಿ ಸ್ವಾರ್ಥ ಸಾಧನೆಗಾಗಿ ಸಾವಿನ ದವಡೆಗೆ ದೂಡುತ್ತಿವೆ.

ಬಡ ಕುಟುಂಬಗಳ ಜೀವನಾಧಾರವಾಗಿರುವ ಯುವಕರನ್ನು ಬಲಿ ತೆಗೆದುಕೊಳ್ಳುತ್ತವೆ. ಈ ಬಗ್ಗೆ ಯುವಕರು, ಪೋಷಕರು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ. ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಲು ಧೈರ್ಯ ಇಲ್ಲ.

ಅಂಕೆಯೇ ಇಲ್ಲದ ಹಂತಕರ ಆಟಕ್ಕೆ ಇತಿಶ್ರೀ ಹಾಡಿ, ಹೆಡೆಮುರಿ ಕಟ್ಟಬೇಕು. ಅದು ಬಿಟ್ಟು ಅಬ್ಬರದ ಹೇಳಿಕೆಗಳಿಂದ ಉಪಯೋಗವೇನು? ಪ್ರತಿ ಕೊಲೆಗೂ ಕೋಮು ಬಣ್ಣ ಹಚ್ಚುವ ನಾಯಕರ ರಾಜಕೀಯ ತಲೆಯಲ್ಲಿ ಭಯಂಕರ ದುರುದ್ದೇಶವೇ ಅಡಗಿದೆ. ಕರ್ನಾಟವು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ, ಸೌಹಾರ್ದತೆ, ಸಹಿಷ್ಣುತೆಯ ಬೀಡು. ಭಾವನಾತ್ಮಕ ವಿಷಯಗಳಿಂದ ಬಂಡವಾಳ ಹೂಡಿಕೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹೊಡೆತ ಬಿದ್ದಿದೆ. ಹೊಸ ಕೈಗಾರಿಕೆಗಳು ಬರುತ್ತಿಲ್ಲ ಎಂದು ಟ್ವೀಟ್​ ಮಾಡಿದ್ದಾರೆ..

RELATED TOPICS:
English summary :The BJP government does not have the guts to blame the unseen hands behind the murders. What is the reason for this helplessness?

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...