Sun,May19,2024
ಕನ್ನಡ / English

ಕರ್ನಾಟಕವನ್ನು ಕಗ್ಗೊಲೆಗಳ ಕರ್ನಾಟಕವನ್ನಾಗಿ ಮಾಡಿದ ಕುಖ್ಯಾತಿ ಬಿಜೆಪಿ ಪಕ್ಷದ್ದೇ | JANATA NEWS

30 Jul 2022
2299

ಬೆಂಗಳೂರು : ಕರ್ನಾಟಕವನ್ನು ʼಕಗ್ಗೊಲೆಗಳ ಕರ್ನಾಟಕʼವನ್ನಾಗಿ ಮಾಡಿದ ಕುಖ್ಯಾತಿ ಬಿಜೆಪಿ ಪಕ್ಷದ್ದೇ. ಕಮಲದ ರೆಕ್ಕೆಗಳಿಗೆ ಅಂಟಿಕೊಂಡಿರುವ ರಕ್ತದ ಕಲೆಗಳು, ನಿಮ್ಮ ಪಾಪದ ಕೊಡವನ್ನು ತುಂಬಿಸುತ್ತಿವೆ ಎಂದು ಟ್ವೀಟ್​ ಮೂಲಕ ಹೆಚ್​.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

ಕಾರ್ಯಕರ್ತರನ್ನು 'ಮತೀಯ ವ್ಯಸನಿ'ಗಳನ್ನಾಗಿ ಮಾಡಿ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ಅಸಲಿ ಮುಖವನ್ನು ಮಾಜಿ ಸಚಿವ ಕೆಎಸ್.ಈಶ್ವರಪ್ಪ ಕಳಬಿಚ್ಚಿಟ್ಟಿದ್ದಾರೆ. ಇದು ಅತ್ಯಂತ ಹೇಯ ಮತ್ತು ಪಾತಕ, ರಾಕ್ಷಸೀ ರಾಜಕಾರಣದ ಪರಾಕಾಷ್ಠೆ. ಕಂಡೋರ ಮಕ್ಕಳ ಕಗ್ಗೊಲೆ, ಬಡ ಯುವಕರ ನೆತ್ತರಿನ ಮೇಲೆ ಸುಖದಸೌಧ ಕಟ್ಟುತ್ತಿರುವ ಬಿಜೆಪಿಗೆ ಪಾಪಪ್ರಜ್ಞೆ ಇಲ್ಲ. ಸಹಪಾಠಿಯ ಕೊಲೆಗೆ ಪ್ರತಿಯಾಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರೆ, ಅವರ ಆತ್ಮಸ್ಥೈರ್ಯವನ್ನೇ ಅಣಕಿಸುವ, ಅವರ ನೈತಿಕತೆಯನ್ನೇ ಶಂಕಿಸುವ ಈಶ್ವರಪ್ಪನವರು ಬಿಜೆಪಿಯ ನೈಜ ಮುಖವಾಡ ಎಂದು ಕುಮಾರಸ್ವಾಮಿ ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ.

ಬಾವುಟ ಕಟ್ಟಲು, ಕರಪತ್ರ ಹಂಚಲು, ಮತ ಕೇಳಲು, ಟೆಂಟ್‌ ಹಾಕಲು, ಗೆದ್ದವರನ್ನು ಭುಜದ ಮೇಲೆ ಹೊತ್ತು ಮೆರವಣಿಗೆ ಮಾಡಲು ಇದೇ ಯುವಕರು ಬೇಕು. ಇಂಥ ಯುವಕರಿಗೆ ನಾಯಕರಾದವರೇ ಧರ್ಮದ ಅಪೀಮಿನ ಅಮಲೇರಿಸಿ, ಅವರ ಜೀವಕ್ಕೆ ಸಂಚಕಾರ ತಂದು, ಅವರ ಕುಟುಂಬಗಳನ್ನು ಬೀದಿಪಾಲು ಮಾಡುವ ಕಿರಾತಕ, ಕೊಲೆಗೆಡುಕ ರಾಜಕಾರಣಕ್ಕೆ ಈಶ್ವರಪ್ಪನವರೇ ಪರಾಕಾಷ್ಠೆ ಎಂದು ಕಿಡಿಕಾರಿದ್ರು.

ರಾಜೀನಾಮೆ ಒಪ್ಪಿದರೆ ನಿಮ್ಮ ಗತಿ ಏನು? ನಿಮ್ಮ ಜಾಗಕ್ಕೆ ಹೊಸಬರು ಬರುತ್ತಾರೆ!, ಬಿಜೆಪಿಗೆ ಕಾರ್ಯಕರ್ತರು ಸಿಗುವುದಿಲ್ಲವೇ? ಯುವಮೋರ್ಚಾ ಕಾರ್ಯಕರ್ತರು ಈಗಷ್ಟೇ ಕಣ್ಣು ಬಿಡುತ್ತಿದ್ದಾರೆ. ಪಕ್ಷಕ್ಕೆ ಅವರ ಕೊಡುಗೆ ಏನು?" ಎಂದು ಪ್ರಶ್ನಿಸಿರುವ ಈಶ್ವರಪ್ಪ, ಸಭ್ಯ ರಾಜಕಾರಣದ ಎಲ್ಲೆ ಮೀರಿ ಅಹಂಕಾರ ಪ್ರದರ್ಶಿಸಿದ್ದಾರೆ ಎಂದು ಹೆಚ್​ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಭಾರತ ಬಿಜೆಪಿ ಎತ್ತ ಸಾಗುತ್ತಿದೆ ಎನ್ನುವುದಕ್ಕೆ ಈಶ್ವರಪ್ಪ ಹೇಳಿಕೆಯೇ ಸಾಕ್ಷಿ. ನೆತ್ತರಿನ ಸುಪ್ಪತ್ತಿಗೆಯ ಮೇಲೆ ಮೆರೆಯುತ್ತಿರುವ ಈಶ್ವರಪ್ಪ, ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹರ್ಷನ ಕೊಲೆ ಸಂದರ್ಭದಲ್ಲಿ ವರ್ತಿಸಿದ ರೀತಿ ಎಲ್ಲರೂ ಬಲ್ಲರು. ಇವರು ಬಿಜೆಪಿಯ ರಕ್ಕಸ ಮುಖವನ್ನು ಅನಾವರಣ ಮಾಡಿದ್ದಾರೆ. ಕಗ್ಗೊಲೆಯಾದ ಬಡ ಯುವಕರ ಆತ್ಮಘೋಷದ ಶಾಪ ಬಿಜೆಪಿಗೆ ತಟ್ಟದೇ ಇರದು ಎಂದು ಟೀಕಿಸಿದ್ದಾರೆ.

RELATED TOPICS:
English summary :It is the infamous BJP party that made Karnataka the Karnataka of massacres

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...