Mon,May06,2024
ಕನ್ನಡ / English

ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸರ್ಕಾರದಿಂದ ಅರಿಶಿನ-ಕುಂಕುಮ ವಿತರಣೆ: ಶಶಿಕಲಾ ಜೊಲ್ಲೆ | JANATA NEWS

01 Aug 2022
2644

ಬೆಂಗಳೂರು : ಈ ಬಾರಿಯ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿನ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮಾನ್ಯ ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ಅವರ ನಿರ್ದೇಶನದ ಮೇರೆಗೆ ಸುತ್ತೋಲೆಯನ್ನು ಹೊರಡಿಸಲಾಗಿದೆ.

ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಬಹಳ ಮಹತ್ವಪೂರ್ಣವಾದ ಸ್ಥಾನವನ್ನು ನೀಡಿ ಗೌರವಿಸಲಾಗುತ್ತದೆ. ಪ್ರತಿ ವರ್ಷ ಶ್ರೀ ವರಮಹಾಲಕ್ಷ್ಮಿ ವ್ರತ, ಸ್ವರ್ಣಗೌರಿ ವ್ರತ ಮತ್ತು ನವರಾತ್ರಿಗಳಲ್ಲೀಯೂ ಸಹ ಸ್ತ್ರೀ ದೇವತೆಯನ್ನು ಪೂಜಿಸಿ ಆರಾಧಿಸಲಾಗುತ್ತದೆ. ಶ್ರೀ ವರಮಹಾಲಕ್ಷ್ಮಿ ವ್ರತದ ದಿನದಂದು ಮಹಿಳೆಯರು ಮನೆಯಲ್ಲಿ ಪೂಜೆಯನ್ನು ನೆರವೇರಿಸಿ ದೇವಾಲಯಗಳಿಗೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸುವ ಸಂಪ್ರದಾಯವಿದೆ.

ಈ ಸಂಪ್ರದಾಯಕ್ಕೆ ಮತ್ತಷ್ಟು ಇಂಬು ನೀಡುವ ಹಾಗೂ ರಾಜ್ಯದ ಮುಜರಾಯಿ ದೇವಸ್ಥಾನಗಳ ವತಿಯಿಂದ ಮಹಿಳೆಯರಿಗೆ ವಿಶೇಷವಾಗಿ ಮಂಗಳದ್ರವ್ಯಗಳನ್ನು ಹಾಗೂ ಹಸಿರು ಬಳೆಗಳನ್ನು ನೀಡುವುದರ ಮೂಲಕ ಗೌರವಿಸಬೇಕು ಎನ್ನುವ ಉದ್ದೇಶದಿಂದ ಇತ್ತೀಚಿಗೆ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು.

ಈ ಬಾರಿ ಶ್ರೀ ವರಮಹಾಲಕ್ಷ್ಮಿ ವ್ರತದ ದಿನದಂದು ಮಹಿಳೆಯಿರಿಗೆ ವಿಶೇಷ ಗೌರವ ನೀಡುವುದು ನಮ್ಮ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದ್ದು, ಲಕೋಟೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿರುವ 6 ಹಸಿರು ಬಳೆಗಳು ಹಾಗೂ ಕಸ್ತೂರಿ ಅರಿಶಿಣ-ಕುಂಕುಮವನ್ನು ವಿತರಿಸಬೇಕು ಎಂದು ದೇವಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ

RELATED TOPICS:
English summary :Arishina-Kumkum distribution by Govt on Varamahalakshmi festival: Shashikala Jolle

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...