Sun,May19,2024
ಕನ್ನಡ / English

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಮಾಡಲು ಅವಕಾಶ ಇಲ್ಲ: ಜಮೀರ್ ಅಹ್ಮದ್ ಖಾನ್ | JANATA NEWS

08 Aug 2022
1748

ಬೆಂಗಳೂರು : ಚಾಮರಾಜ ಪೇಟೆಯಲ್ಲಿ ಇರುವ ಈದ್ಗಾ ಮೈದಾನದಲ್ಲಿ ಗಣೇಶನ ಹಬ್ಬ ಆಚರಣೆಗೆ ಅವಕಾಶ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್​ ಖಾನ್​ ಹೇಳಿದ್ದು, ಹಿಂದುಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ.

ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಸ್ಥಳ ಪರಿಶೀಲನೆಗೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವದ ತ್ರಿವರ್ಣ ಧ್ವಜಾರೋಹಣ, ಜನವರಿ 26ರಂದು ಗಣರಾಜ್ಯೋತ್ಸವ ವೇಳೆ ತ್ರಿವರ್ಣ ಧ್ವಜಾರೋಹಣ ಹಾಗೂ ಕನ್ನಡ ರಾಜ್ಯೋತ್ಸವದ ವೇಳೆ ಕನ್ನಡ ಧ್ವಜಾರೋಹಣಕ್ಕೆ ಮಾತ್ರ ಅವಕಾಶ ಇದೆ, ಆದ್ರೆ ಗಣೇಶ ಹಬ್ಬದ ಆಚರಣೆ ಮಾಡುವುದಿಲ್ಲ ಎಂದು ಕಾಂಗ್ರೆಸ್​ ಶಾಸಕ ಜಮೀರ್ ಅಹಮ್ಮದ್​ ಖಾನ್ ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಚಾಮರಾಜಪೇಟೆಯ ಈದ್ಗಾ ಮೈದಾನ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಹೇಳಿದೆ. ಇದರ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಾಸಕರು, 1999ಕ್ಕಿಂತ ಮೊದಲು ವಕ್ಫ್ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎರಡೂ ಕಂದಾಯ ಇಲಾಖೆ ಅಧೀನದಲ್ಲೇ ಇದ್ದವು. ಎಸ್​.ಎಂ ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದಾಗ ವಕ್ಫ್ ಮಂಡಳಿಯನ್ನು ಪ್ರತ್ಯೇಕಿಸಿದರು. ಮೈದಾನದ ವಿಚಾರವನ್ನು ವಕ್ಫ್ ಮಂಡಳಿಯವರು ನೋಡಿಕೊಳ್ಳುತ್ತಾರೆ. ಸದ್ಯ ನಾವು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸುವ ತಯಾರಿಯಲ್ಲಿದ್ದೇವೆ ಎಂದು ಹೇಳಿದರು.

ನಮಾಜ್​ ಮಾಡಬಹುದು ಅಂದ ಮೇಲೆ ಗಣೇಶೋತ್ಸವಕ್ಕೆ ಏಕೆ ಅವಕಾಶವಿಲ್ಲ ಎಂದು ಹಿಂದುಪರ ಸಂಘಟನೆಗಳು ಗರಂ ಆಗಿವೆ.

ಅತ್ತ ಚಾಮರಾಜಪೇಟೆ ಆಟದ ಮೈದಾನವನ್ನು ಕಂದಾಯ ಇಲಾಖೆಯ ಸ್ವತ್ತು ಎಂದು ಘೋಷಣೆ ಮಾಡಿರುವ ಬಿಬಿಎಂಪಿ, ಮೈದಾನದ ಸುಪರ್ದಿಯನ್ನು ಪಾಲಿಕೆಗೆ ನೀಡುವಂತೆ ಮನವಿ ಸಲ್ಲಿಸಲು ಸಿದ್ಧತೆ ಮಾಡುತ್ತಿದೆ. ಹಲವು ದಿನಗಳಿಂದ ಚಾಮರಾಜಪೇಟೆ ಮೈದಾನದ ಮಾಲೀಕತ್ವದ ವಿಚಾರ ಮುನ್ನೆಲೆಗೆ ಬಂದಿದ್ದು, ವಕ್ಫ್​ ಮಂಡಳಿಯು ತನ್ನ ಆಸ್ತಿಯೆಂದು ಹೇಳಿಕೊಂಡಿತ್ತು. ಈ ಬಗ್ಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಿದೆ ವಿಫಲ ಆಗಿದ್ದರಿಂದ ಕಂದಾಯ ಇಲಾಖೆಯ ಆಸ್ತಿಯೆಂದು ಬಿಬಿಎಂಪಿ ಜಂಟಿ ಆಯುಕ್ತರ ಅರೆನ್ಯಾಯಿಕ ಪ್ರಾಧಿಕಾರ ತೀರ್ಮಾನಿಸಿದೆ.

RELATED TOPICS:
English summary :No permission to celebrate Ganeshotsav in Chamarajpet ground: Jameer Ahmed Khan

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...