Mon,Apr29,2024
ಕನ್ನಡ / English

ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು? ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಎಚ್​ಡಿ ಕುಮಾರಸ್ವಾಮಿ | JANATA NEWS

08 Aug 2022
2510

ಬೆಂಗಳೂರು : ಮೈಸೂರು ನಗರದಲ್ಲಿ ನಿನ್ನೆಯಷ್ಟೇ ನಡೆದಿದ್ದ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಜೆಡಿಎಸ್ ಕೊಡುಗೆ ಏನು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದರು.

ಸಿದ್ದರಾಮಯ್ಯ ಪ್ರಶ್ನೆಗೆ ಸರಣಿ ಟ್ವೀಟ್ ಮೂಲಕ ಹೆಚ್.ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಇಂದು ಎಚ್​.ಡಿ.ಕುಮಾರಸ್ವಾಮಿ ಉತ್ತರ ನೀಡಿದ್ದಾರೆ. ಅಧಿಕಾರದ ದುರಾಸೆಗೆ ಅನ್ಯಪಕ್ಷಗಳನ್ನು ನಂಬಿಸಿ ಕತ್ತು ಕುಯ್ಯವ ಕಾಂಗ್ರೆಸ್ ಪಕ್ಷ ಎಸಗಿದ ಪಾಪಕ್ಕೆ ಈಗ ಫಲ ಉಣ್ಣುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೋಗಲಾಡಿ ಸಿದ್ದರಾಮಾಯಣ ಶುರುವಾಗಿದೆ. ಈ ಸೋಗಲಾಡಿ ಸಿದ್ದಯ್ಯನ ಅಸಲಿಯೆತ್ತು ಏನು ಎಂಬುದು ಜನರಿಗೆ ಚೆನ್ನಾಗಿ ಗೊತ್ತಿದೆ. ನಿಮ್ಮಂತಹ ರಾಜಕೀಯ ಭಸ್ಮಾಸುರರು ಇರುವ ಕಾಂಗ್ರೆಸ್ ಪಕ್ಷದ ಹತ್ತಿರಕ್ಕೆ ಬಂದವರೆಲ್ಲ ಸುಟ್ಟು ಭಸ್ಮವಾಗಿದ್ದಾರೆ ಎಂದು ಹೇಳಿದ್ದಾರೆ.

ಅಂತೆಯೇ ನಮ್ಮ ಪಕ್ಷ ಇರಲಿ, ಪಕ್ಕದ ಮಹಾರಾಷ್ಟ್ರದಲ್ಲಿ ಶಿವಸೇನೆ ಗತಿ ಏನಾಯಿತು? ಯುಪಿಎ-1 ಸರಕಾರಕ್ಕೆ ಬೆಂಬಲ ಕೊಟ್ಟ ತಪ್ಪಿಗೆ 65 ಕ್ಷೇತ್ರ ಗೆದ್ದಿದ್ದ ಕಮ್ಯುನಿಸ್ಟರು ಈಗೆಲ್ಲಿದ್ದಾರೆ? ನಿಮ್ಮ ಸಹವಾಸ ಮಾಡಿದವರಿಗೆಲ್ಲ ಇದೇ ಗತಿ! ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ ಜೆಡಿಎಸ್ ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮ ಪಕ್ಷದ್ದು ಇರಲಿ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು? ಎಂದು ಪ್ರಶ್ನಿಸಿದ್ದಾರೆ.

ವಿಕಿಪೀಡಿಯಾ ಪ್ರಕಾರ ನಿಮ್ಮ ಜನ್ಮವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದರಾ ಮಿಸ್ಟರ್ ಸಿದ್ದರಾಮಯ್ಯ? ಜೆಡಿಎಸ್ ಸ್ಥಾಪನೆ ಆಗಿದ್ದೇ 1999ರಲ್ಲಿ. ಆಗ ನೀವು ಎಲ್ಲಿದ್ದೀರಿ? ನಿಮಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ನೀವು ಕಾಂಗ್ರೆಸ್ ಸೇರಿದ್ದು 2006ರಲ್ಲಿ. ಹೀಗಾಗಿ ಆ ಪಕ್ಷದ ಪೂರ್ವಾಪರದ ಬಗ್ಗೆ ಮಾತನಾಡಲು ಏನು ನೈತಿಕತೆ ಇದೆ ನಿಮಗೆ ಎಂದು ಪ್ರಶ್ನಿಸಿದರು.

ಗೆದ್ದಲು ಕಟ್ಟಿಕೊಂಡ ಹುತ್ತಕ್ಕೆ ಹಾವಿನಂತೆ ಸೇರಿಕೊಂಡ ನೀವು, ಸ್ವಾರ್ಥ ಬೀಜಾಸುರನಾಗಿ ಆ ಪಕ್ಷದ ಮೂಲ ನಾಯಕರನ್ನೆಲ್ಲ ನುಂಗುತ್ತಿರುವ ನಿಮ್ಮ ಬಕಾಸುರ ಬಾಯಲ್ಲಿ ಸ್ವಾತಂತ್ರ್ಯ ಹೋರಾಟದ ಪಾರಾಯಣವೇ? ನಿಮಗೆ ಅದು ಬೇರೆ ಕೇಡು. ಅಧಿಕಾರಕ್ಕಾಗಿ ದೀನ ದಲಿತರು, ಅಲ್ಪಸಂಖ್ಯಾತರ ಹೆಸರು ಬಳಸಿಕೊಂಡು, ಹಾದಿಬೀದಿಯಲ್ಲಿ ಹೈಡ್ರಾಮಾ ಆಡಿ ಕಾಂಗ್ರೆಸ್ ಪಕ್ಷಕ್ಕೆ ವಕ್ಕರಿಸಿಕೊಂಡ ನಿಮಗೆ, ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯಾ? ಖಂಡಿತಾ ಇಲ್ಲ. ನೀವು ಹೇಳಿದ ಕಾಂಗ್ರೆಸ್ ಈಗೆಲ್ಲಿದೆ? ನೀವು ಕದ್ದ ಮಾಲು ಹ್ಯೂಬ್ಲೆಟ್ ವಾಚು ಕಟ್ಟಿದಾಗಲೇ 1947ರ ಕಾಂಗ್ರೆಸ್​ಗೆ ಸಮಾಧಿ ಕಟ್ಟಿದಿರಿ. 5 ವರ್ಷಗಳ ನಿಮ್ಮ ಆಡಳಿತದಲ್ಲಿ ಆ ನತದೃಷ್ಟ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಸಾವಿನ ಮೊಳೆ ಹೊಡೆದಿರಿ, ಲೆಕ್ಕ ಹೇಳಬೇಕೆ ಮಿಸ್ಟರ್ ಸಿದ್ದರಾಮಯ್ಯ ಎಂದು ಹರಿಹಾಯ್ದಿದ್ದಾರೆ.

ಆಶ್ರಯ ಕೊಟ್ಟ ಮನೆಯಲ್ಲೇ ಗಳ ಇರಿದವರು ಯಾರು?, ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನೀವು ನಡೆಸುತ್ತಿರುವ ಷಡ್ಯಂತ್ರ ಇನ್ನೂ ನಿಂತಿಲ್ಲ, ಇನ್ನೊಬ್ಬರನ್ನು ಸೈಡಿಗೆ ತಳ್ಳಿ ಆಗಲೇ ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿದ್ದೀರಲ್ಲ ಮಿಸ್ಟರ್ ಸಿದ್ದರಾಮಯ್ಯ?, ಇದು ಸ್ವಾತಂತ್ರ್ಯ ಸಂಗ್ರಾಮವೋ ಅಥವಾ ಕರ್ಚಿಗಾಗಿ ಹೋರಾಟವೋ? ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನಿಮ್ಮಂತಹ ರಾಜಕೀಯ ಭಸ್ಮಾಸುರರು ಇರುವ ಕಾಂಗ್ರೆಸ್ ಪಕ್ಷದ ಹತ್ತಿರಕ್ಕೆ ಬಂದವರೆಲ್ಲ ಸುಟ್ಟು ಭಸ್ಮವಾಗಿದ್ದಾರೆ. ನಮ್ಮ ಪಕ್ಷ ಇರಲಿ, ಪಕ್ಕದ ಮಹಾರಾಷ್ಟ್ರದಲ್ಲಿ ಶಿವಸೇನೆ ಗತಿ ಏನಾಯಿತು?, ಯುಪಿಎ-1 ಸರ್ಕಾರಕ್ಕೆ ಬೆಂಬಲ ಕೊಟ್ಟ ತಪ್ಪಿಗೆ 65 ಕ್ಷೇತ್ರ ಗೆದ್ದಿದ್ದ ಕಮ್ಯುನಿಸ್ಟರು ಈಗೆಲ್ಲಿದ್ದಾರೆ?, ನಿಮ್ಮ ಸಹವಾಸ ಮಾಡಿದವರಿಗೆಲ್ಲ ಇದೇ ಗತಿ! ಎಂದು ಪ್ರತಿಪಕ್ಷ ನಾಯಕರಿಗೆ ಹಳೆಯ ಕಥೆಗಳನ್ನು ನೆನಪಿಸಿದ್ದಾರೆ. ಅಧಿಕಾರದ ದುರಾಸೆಗೆ ಅನ್ಯ ಪಕ್ಷಗಳನ್ನು ನಂಬಿಸಿ ಕತ್ತು ಕುಯ್ಯವ ಕಾಂಗ್ರೆಸ್ ಪಕ್ಷ ಎಸಗಿದ ಪಾಪಕ್ಕೆ ಈಗ ಫಲ ಉಣ್ಣುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೋಗಲಾಡಿ ಸಿದ್ದರಾಮಾಯಣ ಶುರುವಾಗಿದೆ. ಈ ಸೋಗಲಾಡಿ ಸಿದ್ದಯ್ಯನ ಅಸಲಿಯೆತ್ತು ಏನು ಎಂಬುದು ಜನರಿಗೆ ಚೆನ್ನಾಗಿ ಗೊತ್ತಿದೆ ಎಂದು ಕುಮಾರಸ್ವಾಮಿ ಅವರು ಟಾಂಗ್ ನೀಡಿದ್ದಾರೆ.

RELATED TOPICS:
English summary :What is the contribution of this Sogladi Siddhasutra to the freedom struggle? HD Kumaraswamy against Siddaramaiah

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...