Tue,May07,2024
ಕನ್ನಡ / English

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ, ಹೊಸ ಯೋಜನೆಗಳ ಘೋಷಣೆ | JANATA NEWS

15 Aug 2022
2300

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಇದೇ ವೇಳೆ ಹೊಸ ಯೋಜನೆ ಘೋಷಿಸಿದ್ದಾರೆ.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಭಾರತ ದೇಶಕ್ಕೆ ಈಗ ಅಮೃತ ಗಳಿಗೆ ಬಂದಿದೆ. ಹಲವಾರು ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಸಹಸ್ರ ಸಂಖ್ಯೆಯ ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳಿದರು.

ಕರ್ನಾಟಕ ದೇಶದಲ್ಲಿಯೇ ವಿಶಿಷ್ಟವಾದ ರಾಜ್ಯವಾಗಿದೆ. ಎಲ್ಲ ತರಹದ ಸಂಪನ್ಮೂಲಗಳು ಹೇರಳವಾಗಿವೆ. ಹಲವಾರು ಕ್ಷೇತ್ರಗಳಲ್ಲಿ ಕರ್ನಾಟಕ ರಾಜ್ಯ ನಂಬರ್ 1 ಆಗಿದೆ. ದೇಶದ ಜಿ.ಡಿ.ಪಿ ಯಲ್ಲಿ ಶೇ.9ರಷ್ಟು ಕೊಡುಗೆ ನಮ್ಮದಾಗಿದೆ. ತಂತ್ರಜ್ಞಾನದಲ್ಲಿ ಕರ್ನಾಟಕ ಮುಂದಿದೆ. ರಾಜ್ಯದಿಂದ ಅತಿಹೆಚ್ಚು ಆದಾಯ ಸೃಷ್ಟಿಯಾಗುತ್ತಿದೆ. ನಾವು ಸ್ತ್ರೀಶಕ್ತಿ ಸಂಘ ಮತ್ತು ಶಾಲೆಗಳನ್ನು ಅಭಿವೃದ್ಧಿ ಮಾಡಿದ್ದೇವೆ. ಗ್ರಾಮ ಪಂಚಾಯಿತಿಗೆ ಸಾಕಷ್ಟು ಹಣ ಬಿಡುಗಡೆ ಮಾಡಿದ್ದೇವೆ. ದೀನ ದಲಿತರಿಗೆ ವಿಶೇಷ ಆರ್ಥಿಕ ನೆರವು ನೀಡಿದ್ದೇವೆ. ದಲಿತರು, ಬಡವರು ವಂಚಿತರು ತಮ್ಮ ತಮ್ಮ ಜೀವನ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಲು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದರು.

ದೇಶ ಮೊದಲು, ದೇಶ ಕಟ್ಟಲು ಯುವಕರು ಮುಂದಾಗಬೇಕು ಎಂದು ಕರೆ ಕೊಟ್ಟರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸದೃಢ ಭಾರತ ನಿರ್ಮಾಣ ಆಗಿದೆ. ಸಶಕ್ತ ಭಾರತವಾಗಿ ನಿರ್ಮಾಣ ಆಗುತ್ತಿದೆ. ಕೋವಿಡ್ ಸಮಯದಲ್ಲಿ ಸರ್ಕಾರಿ ನೌಕರರು ಮಾಡಿರುವ ಕೆಲಸ ಶ್ಲಾಘನೀಯ. ರಾಜ್ಯದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಹಲವು ಹೊಸ ಯೋಜನೆಗಳನ್ನು ಬೊಮ್ಮಾಯಿ ಘೋಷಿಸಿದ್ದಾರೆ.

ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸಂಪೂರ್ಣವಾಗಿ ಶೌಚಾಲಯಗಳ ನಿರ್ಮಾಣ 250 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಕಾಲೇಜುಗಳಲ್ಲಿ 100 ರಷ್ಟು ಶೌಚಾಲಯ ನಿರ್ಮಾಣ.

ಕರ್ನಾಟಕ ಕರಕುಶನ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲ ಕರ್ಮಿಗಳಿಗೆ ತಲಾ 50 ಸಾವಿರ ರೂ ಸಾಲ ಸಹಾಯಧನ ಯೋಜನೆ..

ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ರೈತರ ವಿದ್ಯಾನಿಧಿ ಯೋಜನೆ ವಿಸ್ತರಿಸುತ್ತೇವೆ ಎಂದರು

ರಾಜ್ಯದಲ್ಲಿ ಹೊಸದಾಗಿ 4050 ಅಂಗನವಾಡಿ ತೆರೆಯಲಾಗುವುದು ಎಂದು ಸಿಎಂ ಘೋಷಿಸಿದರು. ಭೂ ರಹಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಆದ್ಯತೆಯಾಗಿರಿಸಿಕೊಂಡು ಅಂಗನವಾಡಿಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಈ ಮೂಲಕ 16 ಲಕ್ಷ ಕಟುಂಬ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಲಾಗುತ್ತದೆ. ಮಕ್ಕಳಿಗೆ ಪೂರ್ವ ಶಿಕ್ಷಣ ಲಭಿಸುವುದರ ಜೊತೆಗೆ, 8100 ಮಹಿಳೆಯರಿಗೂ ಇದರಿಂದ ಉದ್ಯೋಗಾವಕಾಶ ಸಿಗಲಿದೆ ಎಂದರು.

ಕರ್ತವ್ಯ ನಿರತ ಸೈನಿಕ ಮೃತಪಟ್ಟರೆ, ಆ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ, ₹ 25 ಲಕ್ಷ ಪರಿಹಾರ ಕೊಡುತ್ತೇವೆ ಎಂದು ಘೋಷಿಸಿದರು.

RELATED TOPICS:
English summary :75th Independence Amrit Mahotsav: Flag hoisting at Manik Shah Maidan, Bengaluru, announcement of new projects

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...