Mon,May06,2024
ಕನ್ನಡ / English

ಹೆಚ್ಚುವರಿ ಹಣ ವಸೂಲಿ ಮಾಡಿದ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌: ಸಚಿವ ಸುಧಾಕರ್ | JANATA NEWS

21 Aug 2022
2877

ಬೆಂಗಳೂರು : ಕೋವಿಡ್‌ ರೋಗಿಗಳಿಂದ ಶುಲ್ಕ ಪಡೆಯುವುದರ ಜೊತೆಗೆ, ಸರ್ಕಾರದಿಂದಲೂ ಹಣ ಪಡೆದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ವಹಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌, 577 ಆಸ್ಪತ್ರೆಗಳಿಗೆ ನೋಟಿಸ್‌ ಜಾರಿ ಮಾಡಿಸಿದ್ದಾರೆ. ಹಾಗೆಯೇ, 403 ರೋಗಿಗಳ ಕುಟುಂಬಗಳಿಗೆ 1,58,22,359 ರೂ. ಹಣವನ್ನು ಹಿಂದಿರುಗಿಸಿ ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್‌, ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರದಿಂದ ಹಣ ಪಡೆಯುವುದರ ಜೊತೆಗೆ ಕೋವಿಡ್‌ ರೋಗಿಗಳಿಂದಲೂ ಶುಲ್ಕ ವಸೂಲಿ ಮಾಡಿದ ಆಸ್ಪತ್ರೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಈವರೆಗೆ 1.58 ಕೋಟಿ ರೂ.ನಷ್ಟು ಹಣವನ್ನು ರೋಗಿಗಳ ಕುಟುಂಬಕ್ಕೆ ಹಿಂದಿರುಗಿಸಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಇದು, ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ನೀಡಿರುವ ಸ್ಪಷ್ಟ ಎಚ್ಚರಿಕೆ ಎಂದು ತಿಳಿಸಿದ್ದಾರೆ.

ಆಯುಷ್ಮಾನ್‌ ಭಾರತ್‌ - ಆರೋಗ್ಯ ಕರ್ನಾಟಕ ಯೋಜನೆಯಡಿ, ರೆಫರಲ್‌ ಆಧಾರದಲ್ಲಿ ಕೋವಿಡ್‌ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಹಿಂದೆಯೇ ಕ್ರಮ ವಹಿಸಲಾಗಿತ್ತು. ಕೋವಿಡ್‌ ರೋಗಿಗಳ ಕುಟುಂಬಕ್ಕೆ ನೆರವಾಗುವ ಸದುದ್ದೇಶದಿಂದ ಸರ್ಕಾರ ಈ ಪ್ರಯೋಜನವನ್ನು ನೀಡುತ್ತಿದೆ. ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಭರಿಸಲಾಗುತ್ತದೆ. ಆದರೆ ಕೆಲ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಶುಲ್ಕ ವಸೂಲಿ ಮಾಡುವುದರ ಜೊತೆಗೆ, ಟ್ರಸ್ಟ್‌ನಿಂದಲೂ ಹಣ ಪಡೆದುಕೊಂಡಿವೆ.

ಈ ಕುರಿತು ದೂರುಗಳು ಬಂದಾಗ ತಕ್ಷಣ ಕ್ರಮ ವಹಿಸಿದ ಇಲಾಖೆ ಪರಿಶೀಲನೆ ನಡೆಸಿ ನೋಟಿಸ್‌ ಜಾರಿ ಮಾಡುವಂತೆ ಸೂಚನೆ ನೀಡಿದ್ದರು. ಅದರಂತೆ, ಈವರೆಗೆ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಒಟ್ಟು 18.87 ಕೋಟಿ ರೂ. ಹಣವನ್ನು ಖಾಸಗಿ ಆಸ್ಪತ್ರೆಗಳು ಹೆಚ್ಚುವರಿಯಾಗಿ ಪಡೆದಿರುವುದು ತಿಳಿದು ಬಂದಿದೆ. ಈ ಪೈಕಿ ಈಗಾಗಲೇ 1.58 ಕೋಟಿ ರೂ. ಹಣವನ್ನು ರೋಗಿಗಳ ಕುಟುಂಬಕ್ಕೆ ಹಿಂದಿರುಗಿಸಲಾಗಿದೆ. ಕೆಲ ಪ್ರಕರಣಗಳಲ್ಲಿ ಹೆಚ್ಚಿನ ಪರಿಶೀಲನೆಗಾಗಿ ದೂರುಗಳನ್ನು ಜಿಲ್ಲಾ ಮಟ್ಟದ ಕುಂದು ಕೊರತೆ ಸಮಿತಿಗೆ ವರ್ಗಾಯಿಸಲಾಗಿದೆ.

ಕೋವಿಡ್‌ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗಿದೆ. ಮೊದಲನೇ ಅಲೆಯಲ್ಲಿ, 2020 ರ ಮಾರ್ಚ್‌ನಿಂದ 2021 ರ ಮಾರ್ಚ್‌ವರೆಗೆ 391.26 ಕೋಟಿ ರೂ., ಎರಡನೇ ಅಲೆಯಲ್ಲಿ, 2021ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ 376.76 ಕೋಟಿ ರೂ. ಹಾಗೂ ಮೂರನೇ ಅಲೆಯ ವೇಳೆ, 2022 ರ ಜನವರಿಯಿಂದ ಮಾರ್ಚ್‌ವರೆಗೆ 11.80 ಕೋಟಿ ರೂ. ಪಾವತಿಸಲಾಗಿದೆ.

RELATED TOPICS:
English summary :Notice to 577 private hospitals who charged extra money: Minister Sudhakar

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...