Mon,May06,2024
ಕನ್ನಡ / English

ನಾಯಿ ಮೇಲೆ ಗುಂಡು ಪ್ರಕರಣದಲ್ಲಿ ರಾಜಕೀಯ ತಿರುವು | Janata news

22 Apr 2018
876

ಕಾರವಾರ : ನಾನು ಯಾವುದೇ ನಾಯಿಗೆ ಗುಂಡು ಹೊಡೆದಿಲ್ಲ. ರಾಜಕೀಯವಾಗಿ ಬೆಳೆಯುತ್ತಿರುವ ನನ್ನನ್ನು ಸಹಿಸಲಾಗದವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ನಾನು ಎಲ್ಲಿ ಬೇಕಾದರು ಆಣೆ ಮಾಡಲು ಸಿದ್ದನಿದ್ದೇನೆ ಎಂದು ಕೋಡಿಭಾಗ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸುನೀಲ್ ತಾಮ್ಸೆ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫೇಸ್‍ಬುಕ್‍ನಲ್ಲಿ ಮೂರು ವರ್ಷಗಳ ಹಿಂದೆ ಹಾಕಿದ ಏರ್‍ಗನ್ ಹಿಡಿದ ಪೋಟೊವನ್ನು ಬಳಸಿಕೊಂಡು ನಾನು ಸಾಕು ನಾಯಿ ಕೊಂದಿರುವುದಾಗಿ ಸುಳ್ಳು ಆರೋಪ ಹೊರಸಿ ನನ್ನ ಹೆಸರು ಕೆಡಿಸಲಾಗುತ್ತಿದೆ. ಆದರೆ ಅಂದು ರಾತ್ರಿ ಸಂದೀಪ ಕಾಂಬ್ಳೆ ಹಾಗೂ ಆತನ ಸಹೋದರರು ನಮ್ಮ ಮನೆಗೆ ಬಂದು ನನ್ನನ್ನು ಹೊರಗೆಳೆದು ರಾಡ್ ಹಾಗೂ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ. ಬಳಿಕ ನಾನು ಪೊಲೀಸ್ ಠಾಣೆಗೆ ಪೋನ್ ಮಾಡಿ ಜಿಲ್ಲಾಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದೇನೆ. ಆದರೆ ಅವರು ಮಾಡಿರುವ ಆರೋಪದಲ್ಲಿ ಯಾವುದೆ ಹುರುಳಿಲ್ಲ, ಎಂದು ಹೇಳಿದರು.

ನಾನು ರಾಜಕೀಯವಾಗಿ ಬೆಳೆಯುತ್ತಿರುವುದನ್ನು ಅವರಿಗೆ ಸಹಿಸಲಾಗುತ್ತಿಲ್ಲ. ಅಲ್ಲದೆ ಈ ಹಿಂದೆ ಕಾಳಿ ರಿವರ್ ಗಾರ್ಡನ್ ಬಳಿ ಗಣಪತಿ ವಿಸರ್ಜನೆಗೆ ಸಂಬಂಧಿಸಿದ ಗಲಾಟೆ ಬಳಿಕ ಹತಾಶರಾಗಿ ಸೇಡು ತಿರಿಸಿಕೊಳ್ಳಲು ಮುಂದಾಗಿದ್ದಾರೆ. ಇದೀಗ ನನಗೆ ಜೀವ ಬೇದರಿಕೆ ಹಾಕುತ್ತಿದ್ದಾರೆ, ಎಂದು ಆರೋಪಿಸಿದರು.

ನಮ್ಮ ಮನೆಯಲ್ಲಿಯೂ ನಾಯಿಗಳನ್ನು ಸಾಕಿದ್ದೇವೆ. ನಾನು ಪ್ರಾಣಿ ಪಕ್ಷಿಗಳ ಸೇವೆ ಮಾಡುತ್ತಿದ್ದೇನೆ. ಆದರೆ ನನ್ನ ವಿರುದ್ಧ ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮನೆಯಲ್ಲಿ ಯಾವುದೇ ಗನ್ ಇಲ್ಲ. ಪೊಲೀಸರು ಇದ್ದ ಗನ್ ಫ್ರೆಮ್ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ. ನಾನು ಕೂಡ ಕಾನೂನು ಹೋರಾಟ ನಡೆಸುತ್ತೇನೆ ಎಂದು ಹೇಳಿದರು. ಈ ವೇಳೆ ಎಬಿವಿಪಿ ನಗರ ಕಾರ್ಯದರ್ಶಿ ಭಾನುಕುಮಾರ್, ವಿನಾಯಕ ದುದಾಳಕರ್ ಇದ್ದರು.

English summary :Political twist in firing at dog case

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...