Sun,May19,2024
ಕನ್ನಡ / English

ನಾನೇನು ರೇಪ್ ಮಾಡಿದ್ನಾ ಎಂದ ಲಿಂಬಾವಳಿ, ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ಅರವಿಂದ ಲಿಂಬಾವಳಿ | JANATA NEWS

03 Sep 2022
1895

ಬೆಂಗಳೂರು : ಮಹಿಳೆಗೆ ಶಾಸಕ ಅರವಿಂದ್ ಲಿಂಬಾವಳಿ ಆವಾಜ್ ಹಾಕಿದ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಮಧ್ಯೆ ಲಿಂಬಾವಳಿ ಅವರು ನಾನು ರೇಪ್ ಮಾಡಿದ್ನಾ ಅಂತಾ ಹೇಳಿರುವುದು ವಿವಾದಕ್ಕೆ ಗುರಿಯಾಗಿದೆ.

ಕಾಂಗ್ರೆಸ್​ನ ಮಹಿಳಾ ಸದಸ್ಯೆಯರು ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ಲಿಂಬಾವಳಿ ಹೇಳಿಕೆಯನ್ನು ವಿರೋಧಿಸಿ, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ.

ಮಹಿಳೆಗೆ ಆವಾಜ್ ಹಾಕಿದ ಪ್ರಕರಣ ಸಂಬಂಧ ಶಾಸಕ ಅರವಿಂದ್ ಲಿಂಬಾವಳಿ ನಾನೇನು ರೇಪ್ ಮಾಡಿದ್ನಾ ಅಂತಾ ಹೇಳಿದ್ದಾರೆ. ರೇಪ್ ಅನ್ನೋದು ಬರೀ ನಾಲ್ಕು ಅಕ್ಷರಗಳ ಪದವಲ್ಲ. ಅದನ್ನು ಬಳಸುವುದರಿಂದ ತಂದೆ, ತಾಯಿ, ಅಣ್ಣ ತಮ್ಮಂದಿರಿಗೆ ನೋವಾಗುತ್ತದೆ. ಆ ಪದವನ್ನು ಅಷ್ಟು ಸುಲಭವಾಗಿ ಹೇಗೆ ಬಳಸುತ್ತೀರಿ ಎಂದು ಕೆಪಿಸಿಸಿ ಕಚೇರಿಯಲ್ಲಿ ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಪ್ರಶ್ನಿಸಿದ್ದಾರೆ.

ಘಟನೆ?
ಇತ್ತಿಚೀಗೆ ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆಗೆ ಹಲೆವಡೆ ಸಮಸ್ಯೆ ಉಂಟಾಗಿದೆ. ಮಹದೇವಪುರ ಕ್ಷೇತ್ರ ವ್ಯಾಪ್ತಿಯ ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿತ್ತು. ಗುರುವಾರ ನಲ್ಲೂರಹಳ್ಳಿಯ ವೈಟ್​ಫೀಲ್ಡ್​​ ಕೋಡಿ ಸರ್ಕಲ್​ ಬಳಿ ರಾಜಕಾಲುವೆ ಒತ್ತುವರಿ ಆಗಿರುವ ಸ್ಥಳಕ್ಕೆ ಶಾಸಕರು ಭೇಟಿ ನೀಡಿದ್ದರು. ಈ ವೇಳೆ ಸ್ಥಳೀಯ ಮಹಿಳೆಯೊಬ್ಬರು ಕೈಯಲ್ಲಿ ಕೆಲ ಪತ್ರಗಳನ್ನು ಹಿಡಿದುಕೊಂಡು ಆಗಮಿಸಿ ಅಳಲು ತೋಡಿಕೊಳ್ಳಲು ಯತ್ನಿಸುತ್ತಿದ್ದರು.

'ಸರ್..​ ಸರ್..' ಎನ್ನುತ್ತಾ ಸಮಸ್ಯೆ ಹೇಳಿಕೊಳ್ಳಲು ಮುಂದಾದ ಮಹಿಳೆ ಅವಾಜ್​ ಹಾಕಿದ ಶಾಸಕರು, ಆಕೆಯ ಕೈಯಿಂದ ದಾಖಲೆ ಪತ್ರ ಕಸಿದುಕೊಳ್ಳಲು ಯತ್ನಿಸಿದ್ದಲ್ಲದೆ, 'ಪೊಲೀಸ್​ ಸ್ಟೇಷನ್​ಗೆ ಕರೆದುಕೊಂಡು ಹೋಗಿ ಕೂರಿಸಿ' ಎಂದಿದ್ದಾರೆ.

ಒತ್ತುವರಿ ಮಾಡ್ಕೊಂಡು ನ್ಯಾಯ ಕೇಳೋಕೆ ಬರ್ತೀಯಾ? ನಿಂಗೆ ಮಾನ ಮರ್ಯಾದೆ ಇದ್ಯಾ? ನಾಚಿಕೆ ಆಗಲ್ವಾ? ಒತ್ತುವರಿ ಮಾಡಿಕೊಳ್ವಾಗ ಚಂದೋ. ನನಗೂ ಬೇರೆ ಭಾಷೆ ಬರುತ್ತೆ. ಎಂದು ಜೋರು ಧ್ವನಿಯಲ್ಲೇ ಶಾಸಕರು ದರ್ಪದಿಂದ ವರ್ತಿಸಿದ್ದಾರೆ. ಅಷ್ಟೇ ಅಲ್ಲ ಮಹಿಳೆಯ ಕೈಯಲ್ಲಿ ಕಾಗದ ಪತ್ರಗಳನ್ನು ಕಿತ್ತುಕೊಳ್ಳೋಕು ಯತ್ನಿಸಿದ್ದಾರೆ.

ಸರ್​, ಮರ್ಯಾದೆಯಿಂದ ಮಾತಾಡಿ. ಹೆಣ್ಣುಮಕ್ಕಳು ಅನ್ನುವ ಗೌರವ ಇರಲಿ. ನೀವು ನನಗೂ ಎಂಎಲ್​ಎ. ಎಲ್ಲರಿಗೂ ಶಾಸಕರು. ನಾನು ಒತ್ತುವರಿ ಮಾಡಿಕೊಂಡಿಲ್ಲ. ದಾಖಲೆ ಇದೆ ನೋಡಿ' ಎಂದು ಮಹಿಳೆ ಹೇಳಿದರೂ 'ಇವಳಿಗೆ ಮರ್ಯಾದೆ ಬೇರೆ ಕೇಡು ಒಳಗೆ ಹಾಕಿ' ಎಂದು ಪೊಲೀಸರಿಗೆ ಶಾಸಕರು ಸೂಚಿಸಿದ್ದಾರೆ. ಅಷ್ಟೇ ಅಲ್ಲ, ಆ ಪತ್ರವನ್ನೂ ಮಹಿಳೆ ಕೈಯಿಂದ ಕಿತ್ತುಕೊಂಡಿದ್ದಾರೆ.

ಈ ವಿಡಿಯೋ ವೈರಲ್​ ಆಗಿದ್ದು, ಸಾರ್ವಜನಿಕರು ಶಾಸಕರ ನಡೆಯನ್ನ ಖಂಡಿಸಿದ್ದಾರೆ.

RELATED TOPICS:
English summary :MLA Arvinda Limbavali said, "Did I rape you?"

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...