Wed,May08,2024
ಕನ್ನಡ / English

ಸರ್ಕಾರಿ ಶಾಲೆಗಳ ಆಸ್ತಿ ಕಬಳಿಕೆಗೆ ರಿಯಲ್ ಎಸ್ಟೇಟ್, ಭೂ ಮಾಫಿಯಾಗಳ ಕಣ್ಣು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | JANATA NEWS

05 Sep 2022
2022

ಬೆಂಗಳೂರು : ಸರ್ಕಾರಿ ಶಾಲೆಗಳ ಬೆಲೆಬಾಳುವ ಜಾಗದ ಮೇಲೆ ರಿಯಲ್ ಎಸ್ಟೇಟ್, ಭೂಮಾಫಿಯಾ ಕಣ್ಣು ಬಿದ್ದಿದ್ದು, ಕಬಳಿಸುವ ಹುನ್ನಾರ ಸದೆಬಡಿಯಲು ಸರ್ಕಾರ ಅಗತ್ಯಕ್ರಮವಹಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ನಡೆದ ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ನಂತರ ಸಚಿವ ನಾಗೇಶ್ ಅವರು ಮಾತನಾಡಿದರು. ಕೋವಿಡ್-19 ಕಾರಣ ಉಂಟಾದ ಕಲಿಕಾ ಹಿನ್ನಡೆ ಸರಿದೂಗಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಇಡೀ ದೇಶದಲ್ಲೇ ಮೊದಲು ಕರ್ನಾಟಕದಲ್ಲಿ ಅನುಷ್ಠಾನಗೊಳಿಸಲಾಗಿದೆ. ಕೇಂದ್ರ ಶಿಕ್ಷಣ ಇಲಾಖೆಯಿಂದ ಈ ಕಾರ್ಯಕ್ರಮಕ್ಕೆ ವಿಶೇಷವಾಗಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಕಾರ್ಯಕ್ರಮ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು. ಕಲಿಕಾ ಚೇತರಿಕೆಗಾಗಿ ಬೇಸಿಗೆ ರಜೆ ಕಡಿತಗೊಳಿಸಿ 15 ದಿನಗಳ ಮೊದಲೇ ಶಾಲೆಗಳನ್ನು ಆರಂಭಿಸಲಾಯಿತು.

ಶಿಕ್ಷಕರು ಸಂಪೂರ್ಣ ಸಹಕಾರ ನೀಡಿದರು. ಕೋವಿಡ್-19 ಸಂದರ್ಭದಲ್ಲಿ ಪರ್ಯಾಯ ಮಾರ್ಗಗಳಲ್ಲಿ ಮಕ್ಕಳಿಗೆ ಪಾಠ ಮಾಡುವ ಜೊತೆಗೆ ಸರ್ಕಾರದಿಂದ ನೀಡಲಾದ ಹೆಚ್ಚುವರಿ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಶಿಕ್ಷಕರು ಶ್ರೇಷ್ಠ ಕಾರ್ಯ ನಿರ್ವಹಿಸಿದ್ದಾರೆಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗಳ ಜಾಗ ಸಂರಕ್ಷಣೆಗೆ ವ್ಯವಸ್ಥಿತ ದಾಖಲೀಕರಣ ಕಳೆದ ಮೂರು ತಿಂಗಳಿಂದ ಪ್ರಗತಿಯಲ್ಲಿದೆ. ಈಗಾಗಲೇ ಮೂರ್ನಾಲ್ಕು ಸಾವಿರ ಶಾಲೆಗಳ ದಾಖಲೀಕರಣ ಮುಗಿದಿದೆ. ಇನ್ನೂ ಏಳು ಸಾವಿರ ಶಾಲೆಗಳ ದಾಖಲೆಗಳ ಕ್ರೋಢೀಕರಣ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ರಿಯಲ್ ಎಸ್ಟೇಟ್, ಭೂ ಮಾಫಿಯಾಗಳು ಸರ್ಕಾರಿ ಶಾಲೆಗಳ ಆಸ್ತಿ ಕಬಳಿಕೆಗೆ ಕಣ್ಣು ಹಾಕಿದ್ದವು. ಹೀಗಾಗಿ, ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗೆ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಸರ್ಕಾರಿ ಶಾಲೆಗಳ ಆಸ್ತಿ ಮೇಲೆ ಕಣ್ಣು ಹಾಕಿರುವವರು ಯಾರೇ ಆಗಿರಲಿ, ಎಷ್ಟೇ ಪ್ರಭಾವಿಗಳೇ ಆಗಿರಲಿ ಬಿಡುವುದಿಲ್ಲ. ಶಾಲೆಗಳ ಆಸ್ತಿಯನ್ನು ಶಿಕ್ಷಣ ಇಲಾಖೆಗೆ ನೋಂದಣಿ ಮಾಡಿಕೊಳ್ಳಲು ಎಲ್ಲ ರೀತಿಯ ಪ್ರಯತ್ನಗಳು ಮಾಡಲಾಗುತ್ತದೆ. ಒಂದಿಂಚೂ ಜಾಗವನ್ನು ಬಿಡುವುದಿಲ್ಲ ಎಂದು ಸಚಿವರು ಹೇಳಿದರು.

RELATED TOPICS:
English summary :Real estate, land mafia eyeing property grab of government schools: Education Minister BC Nagesh

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...